State Govt: ನಾಳೆಯಿಂದ ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮ


Team Udayavani, Jan 2, 2024, 1:49 PM IST

State Govt: ನಾಳೆಯಿಂದ ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮ

ಬೆಂಗಳೂರು: ಸಾರ್ವಜನಿಕರ ಕುಂದು ಕೊರತೆ ಆಲಿಸುವ ಸಲುವಾಗಿ ಸರ್ಕಾರ ಆರಂಭಿಸಿರುವ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಬುಧವಾರ (ಜ.3) ಚಾಲನೆ ಸಿಗಲಿದೆ.

ನಾಗರಿಕರು ಸರ್ಕಾರಿ ಕಚೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಮೊದಲ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. 2ನೇ ಹಂತದಲ್ಲಿ ಹಲವು ಕ್ಷೇತ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ನಾಗರಿಕರಿಗೆ ಆಸನಗಳ ವ್ಯವಸ್ಥೆ, ಕುಡಿವ ನೀರು, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗುವುದು. ವಿದ್ಯುತ್‌, ಜನರೇಟರ್‌ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕಲ್ಪಿಸಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬರುವ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದು ಕೊರತೆ ಪರಿಹಾರ ವ್ಯವಸ್ಥೆ ಸಾಫ್ಟವೇರ್‌ ದಾಖಲಿಸಲು ಪಾಲಿಕೆ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಸಾಫ್ಟವೇರ್‌ ದಾಖಲಿಸಲು ವೈ-ಫೈ, ಗಣಕ ಯಂತ್ರ, ಪ್ರಿಂಟರ್‌ ಹಾಗೂ ಸ್ಕ್ಯಾನರ್‌ಗಳ ವ್ಯವಸೆಯೊಂದಿಗೆ 15 ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ.

ಒಂದೇ ಸೂರಿನಡಿ ವಿವಿಧ ಇಲಾಖೆಗಳು: ನಾಗರಿಕರ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಮುಖ ಇಲಾಖೆ ಗಳಾದ ಬಿಬಿಎಂಪಿ, ಬೆಂಗಳೂರು ಅಬಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ, ಬಿಎಂಆರ್‌ ಸಿಎಲ್‌(ಮೆಟ್ರೋ), ಕೊಳೆಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್‌ ಇಲಾಖೆ, ಬಿಎಂಟಿಸಿ, ಕಂದಾಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರಲಿದ್ದಾರೆ.

ಟೋಕನ್‌ ವ್ಯವಸ್ಥೆ: ಡಿಸಿಎಂ ಭೇಟಿಗೆ ಒತ್ತು : ಈ ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಸಹಾಯವಾಗಲಿ ಎಂಬ ಉದ್ದೇಶದಿಂದ ಟೋಕನ್‌ಗಳನ್ನು ಪಡೆಯಲು 10 ಕೌಂಟರ್‌ ವ್ಯವಸ್ಥೆ ಮಾಡಲಾಗುತ್ತದೆ. ದಿವ್ಯಾಂಗರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಯಾ ಕ್ಷೇತ್ರದ ಶಾಸಕರನ್ನೂ ಆಹ್ವಾನಿಸಲಾಗಿದೆ.

ಎಲ್ಲೆಲ್ಲಿ ಯಾವ ದಿನ ಕಾರ್ಯಕ್ರಮ:

ಜ.3 -ಕೆಆರ್‌ಪುರ ಮತ್ತು ಮಹದೇವಪುರ ವಿಧಾನಸಭಾಕ್ಷೇತ್ರ: – ಸ್ಥಳ: ಐಟಿಐ ಕ್ರೀಡಾಂಗಣ, ದೂರವಾಣಿ ನಗರ, ಕೆ.ಆರ್‌ ಪುರ

ಜ.5- ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ಕ್ಷೇತ್ರ- ಸ್ಥಳ: ಅಂಬೇಡ್ಕರ್‌ ಭವನ, ಯಲಹಂಕ ನ್ಯೂ ಟೌನ್‌

ಜ.6-ಹೆಬ್ಟಾಳ, ಶಿವಾಜಿನಗರ ಮತ್ತು ಪುಲಕೇಶಿನಗರ ಕ್ಷೇತ್ರ- ಸ್ಥಳ: ಆರ್‌.ಬಿ.ಎ.ಎನ್‌.ಎಮ್‌. ಎಸ್‌ ಹೈಸ್ಕೂಲ್‌ ಮೈದಾನ, ಸೆಂಟ್‌ ಜಾನ್ಸ್‌ ರಸ್ತೆ, ಶಿವನ್‌ ಚೆಟ್ಟಿ ಗಾರ್ಡನ್‌.

 

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.