Bengaluru: ಆನ್‌ಲೈನ್‌ ಗೇಮ್‌ ನಿಂದಾದ ಸಾಲ ತೀರಿಸಲು ಎಳನೀರು ಕಳ್ಳತನ!


Team Udayavani, Nov 23, 2023, 1:07 PM IST

stealing tender coconut to pay off debts due to online games

ಬೆಂಗಳೂರು: ಸಾಮಾನ್ಯವಾಗಿ ಮನೆ ಅಥವಾ ಅಂಗಡಿಗೆ ನುಗ್ಗಿ ನಗದು, ಚಿನ್ನಾಭರಣ, ವಾಹನ ಕಳವು ಮಾಡುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ, ಇಲ್ಲೊಬ್ಬ ಊಬರ್‌ ಚಾಲಕ, ತನ್ನ ಆನ್‌ಲೈನ್‌ ಗೇಮಿಂಗ್‌ ಚಟಕ್ಕಾಗಿ ರಸ್ತೆ ಬದಿ ಇಟ್ಟಿದ್ದ ಸಾವಿರಾರು ಎಳ ನೀರು ಕದ್ದು ಮಾರಾಟ ಮಾಡುತ್ತಿದ್ದ. ಈತನ 6 ತಿಂಗಳ ಕಳ್ಳಾಟಕ್ಕೆ ಗಿರಿನಗರ ಪೊಲೀಸರು ಬ್ರೇಕ್‌ ಹಾಕಿದ್ದಾರೆ.

ಎಳನೀರು ಕದಿಯುತ್ತಿದ್ದ ತಮಿಳುನಾಡು ಮೂಲದ ಮೋಹನ್‌ ಕುಮಾರ್‌ (35) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ 8.75 ಲಕ್ಷ ರೂ. ಮೌಲ್ಯದ ನೂರಾರು ಎಳನೀರು, ಒಂದು ಕಾರು, ರಾಯಲ್‌ ಎನ್‌ಫೀಲ್ಡ್‌ ಬುಲೆಟ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ನ.6 ರಂದು ಮಂಕುತಿಮ್ಮ ಪಾರ್ಕ್‌ ಬಳಿಯ ಪಾದಚಾರಿ ಮಾರ್ಗದಲ್ಲಿ ಇಟ್ಟಿದ್ದ ಎಳನೀರು ಕಳವು ಮಾಡಿದ್ದ ಎಂದು ಪೊಲೀಸರು ಹೇಳಿದರು.

ರಾಜಣ್ಣ ಎಂಬುವರು ಗಿರಿನಗರದ ಮಂಕುತಿಮ್ಮ ಪಾರ್ಕ್‌ ಹತ್ತಿರದ ಫ‌ುಟ್‌ಪಾತ್‌ ಮೇಲೆ ಎಳನೀರು ವ್ಯಾಪಾರ ಮಾಡುತ್ತಿದ್ದರು. ನ.6ರಂದು 1,150 ಎಳನೀರನ್ನು ರಾತ್ರಿ ತರಿಸಿ, ಟಾರ್ಪಲ್‌ ಮುಚ್ಚಿ ಮನೆಗೆ ಹೋಗಿದ್ದಾರೆ. ಮರು ದಿನ ಬಂದಾಗ ಸಾವಿರಾರು ಎಳನೀರುಗಳು ನಾಪತ್ತೆಯಾಗಿತ್ತು. ಈ ಸಂಬಂಧ ರಾಜಣ್ಣ ಗಿರಿನಗರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಆನ್‌ಲೈನ್‌ ರಮ್ಮಿ ಸರ್ಕಲ್‌: ತಮಿಳುನಾಡು ಮೂಲದ ಆರೋಪಿ ಮೋಹನ್‌, ಒಂದೂವರೆ ವರ್ಷದಿಂದ ಬೆಂಗಳೂರಿನ ಮಡಿವಾಳದಲ್ಲಿ ವಾಸವಾಗಿದ್ದಾನೆ. ಪರಿಚಯಸ್ಥರಿಂದ ಬಾಡಿಗೆಗೆ ಕಾರು ಪಡೆದು, ಊಬರ್‌, ಓಲಾಗೆ ಕನೆಕ್ಟ್ ಮಾಡಿದ್ದ. ಈ ಮಧ್ಯೆ ಆನ್‌ಲೈನ್‌ ಮೂಲಕ ರಮ್ಮಿ ಸರ್ಕಲ್‌ ಆಟವಾಡಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದಾನೆ. ಅದನ್ನು ತೀರಿಸಲು ತಾನೂ ದುಡಿಯುತ್ತಿದ್ದ ಹಣ ಸಾಲುತ್ತಿರಲಿಲ್ಲ. ಹೀಗಾಗಿ ರಾತ್ರಿ ಸಂದರ್ಭದಲ್ಲಿ ಟ್ಯಾಕ್ಸಿ ಚಾಲನೆ ವೇಳೆ ಎಳನೀರು ಇಟ್ಟಿರುವುದನ್ನು ಗಮನಿಸುತ್ತಿದ್ದು, ರಾತ್ರಿ 11 ಗಂಟೆ ನಂತರ ಟಾರ್ಪಲ್‌ನಿಂದ ಮುಚ್ಚಿಟ್ಟಿದ್ದ ಎಳನೀರು ಕದ್ದು ಕಾರಿನಲ್ಲಿ ತುಂಬಿಕೊಳ್ಳುತ್ತಿದ್ದ ಆರೋಪಿ, ತನ್ನ ಬಾಡಿಗೆ ಮನೆಗೆ ಕೊಂಡೊಯ್ಯುತ್ತಿದ್ದ. ಮರು ದಿನ ಬೆಳಗ್ಗೆ ಮಡಿವಾಳ, ಎಲೆಕ್ಟ್ರಾನಿಕ್‌ ಸಿಟಿ ಸುತ್ತ-ಮುತ್ತ ಎಳನೀರು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದ. ಹೀಗೆ ಕಳೆದ 6 ತಿಂಗಳಿಂದ ನಗರದಲ್ಲಿ ಎಳನೀರು ಕದ್ದು ಮಾರಾಟ ಮಾಡುತ್ತಿದ್ದ.

ಇದನ್ನೂ ಓದಿ:West Indies ಆಟಗಾರನಿಗೆ ಆರು ವರ್ಷಗಳ ಕಾಲ ನಿಷೇಧ ಶಿಕ್ಷೆ ನೀಡಿದ ಐಸಿಸಿ

50-100 ಎಳನೀರು ಕಳುವಾಗಿದ್ದರಿಂದ ವ್ಯಾಪಾರಿಗಳು ದೂರು ನೀಡುತ್ತಿರಲಿಲ್ಲ. ಆದರೆ, ಒಂದೇ ಬಾರಿಗೆ 1,150 ಎಳನೀರು ಕಳುವಾಗಿದ್ದರಿಂದ ವ್ಯಾಪಾರಿ ರಾಜಣ್ಣ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಈತ ಊಬರ್‌, ಓಲಾಗೆ ಕಾರನ್ನು ಕನೆಕ್ಟ್ ಮಾಡಿದ್ದರೂ ಹೆಚ್ಚಿನ ಟ್ರಿಪ್‌ ಮಾಡಿಲ್ಲ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ ಕುಮಾರ್‌ ಶಹಪುರ್‌ವಾದ್‌, ವಿ.ವಿ.ಪುರಂ ಉಪವಿಭಾಗ ಎಸಿಪಿ ನಾಗರಾಜು, ಠಾಣಾಧಿಕಾರಿ ಸಂದೀಪ್‌ ಕುಮಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.