
ಮೋಜಿಗಾಗಿ ವಾಹನಗಳ ಕಳ್ಳತನ
Team Udayavani, Dec 4, 2022, 1:54 PM IST

ಬೆಂಗಳೂರು: ಮೋಜಿನ ಜೀವನ ನಡೆಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೀಲಸಂದ್ರ ನಿವಾಸಿಗಳಾದ ವಿಜಯ್(21) ಮತ್ತು ಇಮ್ರಾನ್(21) ಬಂಧಿತರು.
ಆರೋಪಿಗಳಿಂದ 5 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನ ಕಳುವಾಗಿತ್ತು.
ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ವೃತ್ತಿಪರ ಕಳ್ಳರಾಗಿದ್ದು, ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು. ಕದ್ದ ವಾಹನಗಳನ್ನು ಪರಿಚಿತರ ಮೂಲಕ ಮಾರಾಟ ಮಾಡಿ ಬಂದ ಹಣವನ್ನು ಹಂಚಿಕೊಂಡು ಮೋಜಿನ ಜೀವನ ನಡೆಸುತ್ತಿದ್ದರು. ಅವರ ಬಂಧನದಿಂದ ಅಶೋಕನಗರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 5 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್