ಲೋಕಾ ಬಲೆಗೆ ಬಿದ್ದ ಚಿಕ್ಕಜಾಲ ಪೊಲೀಸರ ಲಂಚದ ಕಥೆ: ಸಾಕ್ಷಿ ನೀಡಿದ ಫೋನ್ ಪೇ!
Team Udayavani, Oct 8, 2022, 1:06 PM IST
ಬೆಂಗಳೂರು: ಲಂಚ ಪಡೆದ ಆರೋಪದ ಮೇಲೆ ಚಿಕ್ಕಜಾಲ ಇನ್‌ಸ್ಪೆಕ್ಟರ್ ಪ್ರವೀಣ್ ಮತ್ತು ಕಾನ್ ಸ್ಟೇಬಲ್ ರವಿ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಕಾನ್‌ಸ್ಟೇಬಲ್ ರವಿಯನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಚಿಕ್ಕಜಾಲ ಠಾಣೆ ಇನ್‌ಸ್ಪೆಕ್ಟರ್ ಪ್ರವೀಣ್‌ಗಾಗಿ ಶೋಧ ನಡೆಯುತ್ತಿದೆ. ಗುತ್ತಿಗೆದಾರ ಪ್ರಕಾಶ್ ಎಂಬುವರ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ತ್ವರಿತವಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಲಾಗಿತ್ತು. ಈ ವಿಚಾರ ತಿಳಿದ ಪ್ರಕಾಶ್, ಮಾವ ದೇವರಾಜು ಅವರಿಗೆ ಕಾನ್‌ಸ್ಟೇಬಲ್ ರವಿ ಭೇಟಿಯಾಗಿ 3.70 ಲಕ್ಷ ರೂ. ಕೊಟ್ಟರೆ ಪ್ರಕರಣದಿಂದ ಪ್ರಕಾಶ್ ಹಾಗೂ ಇತರರನ್ನು ಕೈಬಿಡುವುದಾಗಿ ಹಣ ಪಡೆದಿದ್ದರು. ಅದರಲ್ಲಿ ಇನ್‌ಸ್ಪೆಕ್ಟರ್ ಪ್ರವೀಣ್‌ಗೆ 3 ಲಕ್ಷ, 50 ಸಾವಿರ ರೂ. ತನಗೆ ಹಾಗೂ ಇಬ್ಬರು ರೈಟರ್‌ಗಳಿಗೆ ತಲಾ 10 ಸಾವಿರ ಸೇರಿ ಒಟ್ಟು 3.70 ಲಕ್ಷ ಲಂಚ ಪಡೆದುಕೊಂಡಿದ್ದ. ಅಲ್ಲದೇ ಮತ್ತೆ 5 ಲಕ್ಷ ರೂ.ಗೆ ಲಂಚಕ್ಕೆ ನಿಡುವಂತೆ ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ:ಕ್ಷಣಾರ್ಧದಲ್ಲಿ ಹಣ ಮಾಯ: ಪೊಲೀಸರಿಗೆ ಸವಾಲಾಗುತ್ತಿದೆ ಸೈಬರ್ ಕ್ರೈಂ
ಈ ಹಣವನ್ನು ನೀಡದಿದ್ದಕ್ಕೆ ಗುತ್ತಿಗೆದಾರ ಪ್ರಕಾಶ್ ಕುಟುಂಬ ಸದಸ್ಯರಿಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಅದರಿಂದ ಬೇಸತ್ತ ದೇವರಾಜ್ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಕಾನ್‌ಸ್ಟೇಬಲ್ ರವಿಯನ್ನು ಬಂಧಿಸಲಾಗಿದೆ. ಪಿಐ ಪ್ರವೀಣ್ ನಾಪತ್ತೆಯಾಗಿದ್ದಾರೆ ಲೋಕಾಯುಕ್ತ ಪೊಲೀಸರು ಹೇಳಿದರು.
ಟ್ರೂ ಕಾಲರ್ ನೋಡಿ ಎಸ್ಕೇಪ್: ಲಂಚ ತರುವಂತೆ ಕರೆ ಮಾಡಿ ಹೇಳಿದ್ದ ಕಾನ್‌ಸ್ಟೇಬಲ್ ರವಿ, ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಇದ್ದಾರೆ ಎಂದು ಚಿಕ್ಕಜಾಲ ಪೊಲೀಸ್ ಠಾಣೆ ಬಳಿ ಕರೆಸಿಕೊಂಡಿದ್ದಾನೆ. ಲಂಚದ ಹಣ ಸ್ವೀಕರಿಸಿ ಇನ್ನೇನು ಲೋಕಾ ಬಲೆಗೆ ಬೀಳುವ ಮುನ್ನ ಕಾನ್‌ಸ್ಟೇಬಲ್ ರವಿ ಎಚ್ಚೆತ್ತುಕೊಂಡಿದ್ದಾನೆ. ಲಂಚ ಕೊಡಲು ಹೋಗಿದ್ದ ವ್ಯಕ್ತಿಗೆ ಬಂದ ಕರೆಯ ನಂಬರ್ ನ್ನು ಟ್ರೂ ಕಾಲರ್ ಆ್ಯಪ್ ನಲ್ಲಿ ನೋಡಿ (ಎಸಿಬಿ ಪೊಲೀಸ್ ) ಎಂದು ಹೆದರಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.
ಅಚ್ಚರಿ ಏನೆಂದರೆ ಈ ಲಂಚ ಸ್ವೀಕರಿಸುವ ಮುನ್ನವೇ ಪೋನ್ ಪೇ ಮೂಲಕ ಹತ್ತು ಸಾವಿರ ಲಂಚದ ಹಣವನ್ನು ಮೂರನೇ ವ್ಯಕ್ತಿಯ ಮೊಬೈಲ್ ಗೆ ಹಾಕಿಸಿಕೊಂಡು ಲಂಚ ಪಡೆದುಕೊಂಡಿದ್ದ. ಸಾಕ್ಷಾಧಾರಗಳನ್ನು ಪರಿಶೀಲಸಿದ ಲೋಕಾಯುಕ್ತ ಪೊಲೀಸರು ಕಾನ್‌ಸ್ಟೇಬಲ್ ರವಿಯನ್ನು ಬಂಧಿಸಿದ್ದಾರೆ. ರವಿ ಬಂಧನವಾಗುತ್ತಿದ್ದಂತೆ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಅವರ ಎರಡು ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದ್ದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ