ಸಬ್‌ ಅರ್ಬನ್‌ ಷರತ್ತು ಸಡಿಲಿಸಿದ ಸರ್ಕಾರ


Team Udayavani, Feb 23, 2019, 6:24 AM IST

suburban.jpg

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆ ನಿಟ್ಟಿನಲ್ಲಿ ರೂಪಿಸಲಾಗಿರುವ ಸಬ್‌ ಅರ್ಬನ್‌ (ಉಪನಗರ) ರೈಲು ಯೋಜನೆಗಿದ್ದ ಅಡಚಣೆ ನಿವಾರಣೆಯಾದಂತಾಗಿದ್ದು, ರಾಜ್ಯ ಸರ್ಕಾರ 19 ಷರತ್ತುಗಳನ್ನು ಸಡಿಲಿಸಿದೆ. ಕೇಂದ್ರ ಕಲ್ಲಿದ್ದಲು ಹಾಗೂ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಅವರ ಜತೆ ಶುಕ್ರವಾರ ನಡೆಸಿದ ಮಾತುಕತೆ ವೇಳೆ 19 ಷರತ್ತುಗಳನ್ನು ರದ್ದುಪಡಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಮ್ಮತಿ ಸೂಚಿಸಿದ್ದಾರೆ.

ಅಷ್ಟೇ ಅಲ್ಲದೆ ಫೆ.25ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಅಂಗೀಕಾರ ನೀಡಿ ಕೇಂದ್ರಕ್ಕೆ ಸಮಗ್ರ ವರದಿ ಸಮೇತ ಪ್ರಸ್ತಾವನೆ ಕಳಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಚರ್ಚಿಸಿ ದಿನಾಂಕ ನಿಗದಿಗೊಳಿಸಿ ಅವರಿಂದಲೇ ಶಂಕುಸ್ಥಾಪನೆ ನೆರವೇರಿಸಲು ಕೋರಿದ್ದಾರೆ.

ಮುಖ್ಯಮಂತ್ರಿ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿದ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌, ರಾಜ್ಯ ಸರ್ಕಾರ, ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಸಕ್ತಿ ವಹಿಸಿ ಷರತ್ತು ರದ್ದುಪಡಿಸಲು ಒಪ್ಪಿದ್ದಾರೆ. ರೈಲ್ವೆ ಜಮೀನನ್ನು ಪ್ರತಿ ಎಕರೆಗೆ ಕೇವಲ ಒಂದು ರೂ.ನಂತೆ ಗುತ್ತಿಗೆಗೆ ನೀಡಲಾಗುತ್ತಿದೆ.

ಇದರಿಂದ ಯೋಜನೆಯ ವೆಚ್ಚ 6,700 ಕೋಟಿ ರೂ. ಕಡಿಮೆಯಾಗಲಿದೆ. ಕೇಂದ್ರ ಸರ್ಕಾರದ ಕಡೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಪ್ರಧಾನಿ ಜತೆ ಚರ್ಚಿಸಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಮುನ್ನ ಶಂಕುಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಉಪನಗರ ರೈಲು ಯೋಜನೆಗಾಗಿ ಬೆಂಗಳೂರು ನಗರದೊಳಗೆ ಭೂಸ್ವಾಧೀನ ಕಷ್ಟ. ಹೀಗಾಗಿ, 70 ಕಿ.ಮೀ. ಎತ್ತರಿಸಿದ ಮಾರ್ಗ, 90 ಕಿ.ಮೀ. ಸಾಧಾರಣ ಮಾರ್ಗ ರೂಪಿಸಲು ರೈಲ್ವೆ ಇಲಾಖೆ ಉದ್ದೇಶಿಸಿದೆ. ಒಪ್ಪಿಗೆ ದೊರೆತ ಆರು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ರೈಲ್ವೆ ಇತಿಹಾಸದಲ್ಲಿ ಇಷ್ಟೊಂದು ವೇಗವಾಗಿ ಯಾವ ಕೆಲಸವೂ ಆಗಿಲ್ಲ. ನಾನು ಕರೆ ಮಾಡಿದ ತಕ್ಷಣ ಮುಖ್ಯಮಂತ್ರಿಯವರು ತಮ್ಮ ಎಲ್ಲ ಕಾರ್ಯಕ್ರಮ ರದ್ದು ಮಾಡಿ ಸಭೆ ನಡೆಸಿದ್ದಾರೆ. 23 ಸಾವಿರ ಕೋಟಿ ರೂ. ಯೋಜನೆಯ 160 ಕಿ.ಮೀ. ಮಾರ್ಗದ  ಸಬ್‌ ಅರ್ಬನ್‌ ರೈಲು ಯೋಜನೆಯಿಂದ ಮೆಟ್ರೋ, ರೈಲು ನಿಲ್ದಾಣ, ವಿಮಾನ ನಿಲ್ದಾಣ ಸೇರಿ 80 ನಿಲ್ದಾಣಗಳಿಗೆ ಸಂಪರ್ಕ ಸಿಗಲಿದೆ ಎಂದು ತಿಳಿಸಿದರು.

ಯೋಜನೆಯನ್ನು ಮೊದಲು 80:20 ಆಧಾರದಲ್ಲಿ ಕಾರ್ಯಗತ ಮಾಡಲು ಉದ್ದೇಶಿಸಲಾಗಿತ್ತು. ಇದೀಗ 50:50 ಆಧಾರದಲ್ಲಿ ವೆಚ್ಚ ಭರಿಸಲಾಗುವುದು ಎಂದು ರೈಲ್ವೆ ಸಚಿವರು ಮಾಹಿತಿ ನೀಡಿದರು.

ಕಮಿಟ್‌ಮೆಂಟ್‌ ಇದೆ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಉಪನಗರ ಯೋಜನೆ ಕುರಿತು ಸಮಗ್ರವಾಗಿ ಚರ್ಚಿಸಿದ್ದೇವೆ. ಈ ವಿಷಯದಲ್ಲಿ ಪಿಯೂಶ್‌ ಗೋಯಲ್‌ ಅವರಿಗೆ ವೈಯಕ್ತಿಕ ಕಮಿಟ್‌ಮೆಂಟ್‌ ಇದೆ. ರಾಜ್ಯ ಸರ್ಕಾರದಿಂದ ನಾವು ಕೆಲವು ಷರತ್ತುಗಳನ್ನು ಹಾಕಿದ್ದೆವು. ಇದೀಗ ವುಗಳನ್ನು ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಸಬ್‌ ಅರ್ಬನ್‌ ರೈಲು ಯೋಜನೆ ಬಗ್ಗೆ 1995ರಲ್ಲಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಪ್ರಸ್ತಾಪವಾಗಿತ್ತು. ನಂತರ ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತಕುಮಾರ್‌ ಅವರು ಯೋಜನೆಗಾಗಿ ಸಾಕಷ್ಟು ಶ್ರಮಿಸಿದ್ದರು. ಈಗ ಸ್ವತಃ ರೈಲ್ವೆ ಸಚಿವರು ಆಸಕ್ತಿ ವಹಿಸಿದ್ದಾರೆ.

ಯೋಜನೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ 400 ಕೋಟಿ ರೂ. ಮೀಸಲಿರಿಸಿದೆ ಎಂದು ಹೇಳಿದರು. ಸಂಸದ ಪಿ.ಸಿ.ಮೋಹನ್‌, ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್‌, ಶಾಸಕ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.

ನಾಲ್ಕು ಕಾರಿಡಾರ್‌, 161 ಕಿ.ಮೀ.: ಕೆಂಗೇರಿ-ವೈಟ್‌ಫೀಲ್ಡ್‌, ಬೆಂಗಳೂರು-ರಾಜಾನುಕುಂಟೆ, ನೆಲಮಂಗಲ-ಬೈಯಪ್ಪನಹಳ್ಳಿ, ಸೇರಿ ನಾಲ್ಕು ಕಾರಿಡಾರ್‌ಗಳ 160 ಕಿ.ಮೀ ಉದ್ದದ ಯೋಜನೆಯಲ್ಲಿ 83 ನಿಲ್ದಾಣಗಳಿರಲಿದ್ದು 12 ಕಡೆ ಮೆಟ್ರೋ ಮಾರ್ಗಕ್ಕೆ ಅಡ್ಡಲಾಗಿ ಹಾದು ಹೋಗಲಿದೆ. ಉಪ ನಗರ ರೈಲು ದಿನಕ್ಕೆ 30 ಲಕ್ಷ ಪ್ರಯಾಣಿಕರು ಸಂಚರಿಸುವಷ್ಟು ಸಾಮರ್ಥ್ಯ ಹೊಂದಿರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಸಾರಿಗೆ ವ್ಯವಸ್ಥೆಯನ್ನೇ ಇದು ಬದಲಿಸಲಿದೆ.

ಅನಂತಕುಮಾರ್‌ ನೆನೆದು ಭಾವುಕರಾದ ಗೋಯಲ್‌: ದಿವಂಗತ ಕೇಂದ್ರ ಸಚಿವ ಅನಂತಕುಮಾರ್‌ ಅವರನ್ನು ನೆನೆದು ಪಿಯೂಶ್‌ ಗೋಯಲ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಭಾವುಕರಾದರು. ಬೆಂಗಳೂರು ಉಪನಗರ ರೈಲು ಯೋಜನೆ ಅನಂತ್‌ ಅವರ ಕನಸಾಗಿತ್ತು.

ಆ ಕನಸು ನನಸು ಮಾಡುವುದು ಅವರ ಸಹೋದರನಾಗಿ ನನ್ನ ಕರ್ತವ್ಯ. ಈ ಯೋಜನೆ 2016, ಸೆಪ್ಟಂಬರ್‌ನಲ್ಲಿ ಅವರು ಈ ಯೋಜನೆ ಪ್ರಸ್ತಾಪಿಸಿದ್ದರು. ಆಗಲೇ ಯೋಜನೆ ಆರಂಭವಾಗಿರುವುದರಿಂದ  ಈಗ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದರು.

ಉಪನಗರ ರೈಲು ಯೋಜನೆ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ. ಯೋಜನೆ ಕಾರ್ಯಗತವಾಗಲು ಇದ್ದ ಅಡ್ಡಿ ನಿವಾರಿಸಿದ್ದಕ್ಕೆ ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು.
-ಪಿ.ಸಿ.ಮೋಹನ್‌, ಸಂಸದ

ಟಾಪ್ ನ್ಯೂಸ್

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕದಲಿಯೇ ಮೊದಲು ಎನ್‌ಇಪಿ ಶಿಕ್ಷಣ ಅಳವಡಿಕೆ

ಕರ್ನಾಟಕದಲಿಯೇ ಮೊದಲು ಎನ್‌ಇಪಿ ಶಿಕ್ಷಣ ಅಳವಡಿಕೆ

ನಿರ್ಗತಿಕ ಮಕ್ಕಳಿಗಾಗಿ ತಲೆಯೆತ್ತುತ್ತಿದೆ “ಚಿಣ್ಣರ ಧಾಮ”

ನಿರ್ಗತಿಕ ಮಕ್ಕಳಿಗಾಗಿ ತಲೆಯೆತ್ತುತ್ತಿದೆ “ಚಿಣ್ಣರ ಧಾಮ”

ನವೆಂಬರ್‌ನಲ್ಲೇ 150 ಐಟಿಐ ಉನ್ನತೀಕರಣ

ನವೆಂಬರ್‌ನಲ್ಲೇ 150 ಐಟಿಐ ಉನ್ನತೀಕರಣ

ಯುವಕನ ಎದೆಯಲ್ಲಿ 13.85 ಕೆ.ಜಿ. ತೂಕದ ಗಡ್ಡೆ

ಯುವಕನ ಎದೆಯಲ್ಲಿ 13.85 ಕೆ.ಜಿ. ತೂಕದ ಗಡ್ಡೆ

Buildings that are potentially life-threatening should be cleared by BBMP itself

ಜೀವಕ್ಕೆ ಹಾನಿ ಆಗುವಂಥ ಕಟ್ಟಡಗಳಿದ್ರೆ ಬಿಬಿಎಂಪಿಯಿಂದಲೇ ತೆರವು

MUST WATCH

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

ಹೊಸ ಸೇರ್ಪಡೆ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

20-chennamma

ಚನ್ನಮ್ಮ ಪುತ್ಥಳಿ ಸ್ಥಾಪನೆಗೆ ಸರ್ವ ಪ್ರಯತ್ನ: ಸಿದ್ರಾಮೇಶ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

19

ಡಿಎಪಿ ಸಿಗದೆ ಹಿಂಗಾರಲ್ಲಿ ಕಂಗಾಲಾದ ರೈತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.