ಸಿಎಂ ಭೇಟಿ ಮಾಡಿದ ಸುದೀಪ್
Team Udayavani, Apr 6, 2018, 12:21 PM IST
ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ದ ಚಿತ್ರನಟ ಸುದೀಪ್, ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.
ಮೂಲಗಳ ಪ್ರಕಾರ ಏಪ್ರಿಲ್ 7 ರಂದು ನಡೆಯುವ ಸಿಸಿಎಲ್ ಕ್ರಿಕೆಟ್ ಉದ್ಘಾಟನೆ ಮಾಡಲು ಮುಖ್ಯಮಂತ್ರಿಗೆ ಆಹ್ವಾನ ನೀಡಲು ಆಗಮಿಸಿದ್ದರು ಎನ್ನಲಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜಕೀಯ ಚರ್ಚೆಯೂ ನಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ.ಯತೀಂದ್ರ ಸ್ಪರ್ಧಿಸುವ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರಗಳಲ್ಲಿ ನಾಯಕ ಸಮುದಾಯ ಹೆಚ್ಚಾಗಿರುವುದರಿಂದ ಸುದೀಪ್ ಅಲ್ಲಿ ಜೆಡಿಎಸ್ ಪರ ಪ್ರಚಾರ ಮಾಡಿದರೆ ಕಾಂಗ್ರೆಸ್ಗೆ ಕಷ್ಟವಾಗಬಹುದು ಎಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಕೆಲವು ಮುಖಂಡರು ಸುದೀಪ್ ಅವರನ್ನು ಸಿದ್ದರಾಮಯ್ಯ ಅವರ ಭೇಟಿ ಮಾಡಿಸಿದ್ದರು ಎನ್ನಲಾಗಿದೆ.
ಆದರೆ, ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರಸ್ತಾಪವಾಗಲಿಲ್ಲ. ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಲ್ಲಿ ಆತ್ಮೀಯರಾಗಿರುವ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪರವಾಗಿಯೂ ಸುದೀಪ್ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್