ಅಪರಾಧ ಕೃತ್ಯಗಳಲ್ಲೂ ಭಾಗಿಯಾಗಿದ್ದ ಶಂಕಿತ ಉಗ್ರ

Team Udayavani, Jun 27, 2019, 3:09 AM IST

aparadha

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಜೆಎಂಬಿ ಉಗ್ರ ಹಬ್ಬಿಬುರ್‌ ರೆಹಮಾನ್‌, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ದರೋಡೆ ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಅಂಶ ಎನ್‌ಐಎ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಎನ್‌ಐಎ ವಿಚಾರಣೆ ಸಂದರ್ಭದಲ್ಲಿ ರೆಹಮಾನ್‌ ಕೆಲವೊಂದು ಮಹತ್ವದ ಮಾಹಿತಿ ಬಾಯಿಬಿಟ್ಟಿದ್ದಾನೆ. ಆರೋಪಿಯ ಬಳಿಯಿದ್ದ ಎರಡು ಸುಧಾರಿತ ಸ್ಫೋಟಕ ಸಾಧನ (ಐಇಡಿ) ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಆರೋಪಿ 2018ರ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ನಡೆದ ಕೆಲ ಡಕಾಯಿತಿ ಪ್ರಕರಣದಲ್ಲಿ ಭಾಗಿಯಾಗಿದ್ದು, ಬಂದ ಹಣವನ್ನು ಬಾಂಗ್ಲಾದೇಶದಲ್ಲಿರುವ ತನ್ನ ಉಗ್ರ ಸಂಘಟನೆ ಜೆಎಂಬಿಗೆ ಕಳುಹಿಸುತ್ತಿದ್ದ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾನೆ.

ಹೀಗಾಗಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಹಾಗೂ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್‌ ಆಯುಕ್ತರನ್ನು ಸಂಪರ್ಕಿಸಿ ಆರೋಪಿ ವಿರುದ್ಧ ಯಾವುದಾದರೂ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಮಾಹಿತಿ ಪಡೆಯಬೇಕಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಜೆಎಂಬಿ ಸಂಘಟನೆಯನ್ನು ಆರ್ಥಿಕವಾಗಿ ಸದೃಢ ಪಡಿಸಲು ಹಣ ಹೊಂದಿಸಲು ಹರ ಸಾಹಸ ಪಡುತ್ತಿದ್ದ.

ಬೆಂಗಳೂರು, ತುಮಕೂರು, ರಾಮನಗರದಲ್ಲಿ ವಾಸವಾಗಿದ್ದ ಸಂಘಟನೆಯ ಇತರೆ ಸದಸ್ಯರು ಹಾಗೂ ಸ್ಥಳೀಯ ವ್ಯಕ್ತಿಗಳ ಜತೆ ಸೇರಿ ಕೊಂಡು ಬೆಂಗಳೂರು ನಗರ ಮತ್ತು ಹೊರ ವಲಯಗಳಲ್ಲಿರುವ ಶ್ರೀಮಂತರ ಮನೆಗಳು, ದುಬಾರಿ ಕಾರುಗಳಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಡ್ಡಿ ದರೋಡೆ ಮಾಡುತ್ತಿದ್ದರು. ಬಂದ ಹಣದಲ್ಲಿ ಸ್ಥಳೀಯ ವ್ಯಕ್ತಿಗಳಿಗೆ ಹಂಚಿ, ಇನ್ನುಳಿದ ಮೊತ್ತವನ್ನು ಸಂಘಟನೆಯ ಖಾತೆಗೆ ಜಮೆ ಮಾಡುತ್ತಿದ್ದರು.

ಹೀಗಾಗಿ ಆರೋಪಿಗಳು ಯಾವ ಬ್ಯಾಂಕ್‌ಗಳಿಂದ ಹಣ ವರ್ಗಾವಣೆ ಮಾಡುತ್ತಿದ್ದರು, ಯಾವೆಲ್ಲ ಸ್ಥಳಗಳಲ್ಲಿ ದರೋಡೆ, ಡಕಾಯಿತಿ ಮಾಡಿದ್ದಾರೆ ಎಂಬೆಲ್ಲ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜತೆಗೆ ನೆರೆ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ದರೋಡೆಗೊಳಗಾದ ಪ್ರಕರಣಗಳ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬ ಸದಸ್ಯರನ್ನು ಸಂಪರ್ಕಿಸಲಾಗುವುದು.

ಅನಂತರ ಘಟನಾ ಸ್ಥಳದಲ್ಲಿರುವ ಸಿಸಿಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆರೋಪಿ, ಈ ಹಿಂದೆ ಕೌಸರ್‌ ಜತೆ ಸೇರಿಕೊಂಡು ಆನೇಕಲ್‌ ತಾಲೂಕಿನ ಅತ್ತೀಬೆಲೆಯ ಪಿಳ್ಳರೆಡ್ಡಿ ಲೇಔಟ್‌ನಲ್ಲಿರುವ ಇಬ್ಬರು ಶ್ರೀಮಂತ ವ್ಯಕ್ತಿಗಳ ಮನೆಗಳಿಗೆ ನುಗ್ಗಿ ದರೋಡೆ ಮಾಡಿದ್ದ.

ಹೀಗಾಗಿ ದರೋಡೆಗೊಳಗಾದ ಮನೆಯವರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರನ್ನು ಆರೋಪಿಯ ಐಡೆಂಟಿಫಿಕೆಶನ್‌ ಪರೇಡ್‌(ಗುರುತು ಪತ್ತೆ ಹಚ್ಚುವುದು)ಗೆ ಕರೆಸಿಕೊಂಡು ಸಾಕ್ಷ್ಯ ಪಡೆಯಲಾಗುತ್ತದೆ. ಜತೆಗೆ ಎರಡು ಮನೆಗಳಿಗೆ ನುಗ್ಗಿದ ದರೋಡೆಕೋರರು ಉರ್ದು ಹೊರತು ಪಡಿಸಿ ಬೇರೆ ಯಾವುದೇ ಭಾಷೆ ಬರುತ್ತಿರಲಿಲ್ಲ. ರೈಫ‌ಲ್‌ಗ‌ಳು ಮತ್ತು ಮಾರಕಾಸ್ತ್ರಗಳನ್ನು ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.