ಬರ ಪೀಡಿತ ತಾಲೂಕುಗಳಲ್ಲಿ ಟ್ಯಾಂಕರ್ ನೀರು ಪೂರೈಕೆ
Team Udayavani, Oct 13, 2018, 8:23 AM IST
ಬೆಂಗಳೂರು: ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಕೊರತೆ ಇರುವ ಕಡೆ ಟ್ಯಾಂಕರ್ ಮೂಲಕ ಇಲ್ಲವೇ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಂಡು ನೀರು ಪೂರೈಸಬೇಕು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ. ಈ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಕುಡಿಯುವ ನೀರು ಪೂರೈಕೆ ಮಾಡಲು ಖಾಸಗಿ
ಕೊಳವೆ ಬಾವಿಗಳನ್ನು ವಶಕ್ಕೆ ಪಡೆಯಲು ಅವಕಾಶವಿದ್ದು ಆ ಕೊಳವೆ ಬಾವಿಗಳ ಮಾಲೀಕರಿಗೆ ಸರ್ಕಾರದಿಂದಲೇ ಹಣ ಪಾವತಿಸಲಾಗುವುದು ಎಂದು
ಹೇಳಿದರು.
ಬರಗಾಲ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಕೊರತೆಯಾಗಬಾರದು ಎಂದು ತಾಕೀತು ಮಾಡಿದರು. ಸದ್ಯಕ್ಕೆ ರಾಜ್ಯದ 13 ಜಿಲ್ಲೆಗಳ 352 ಹಳ್ಳಿಗಳಿಗೆ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ . ಬರಪೀಡಿತ ಎಂದು
ಘೋಷಿಸಿರುವ 86 ತಾಲೂಕುಗಳಿಗೂ ಕುಡಿಯುವ ನೀರಿನ ಅಗತ್ಯತೆ ಪೂರೈಸಲು ತಲಾ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಜಾನುವಾರುಗಳಿಗೆ
ಮೇವಿಗಾಗಿ ಪಸು ಸಂಗೋಪನಾ ಇಲಾಖೆಗೆ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ