ಶಿಕ್ಷಕಿ ಕೊಲೆ ಪ್ರಕರಣ: ಡಿವೈಎಸ್‌ಪಿ ಅಮಾನತಿಗೆ ಹೈಕೋರ್ಟ್‌ ಸೂಚನೆ

Team Udayavani, Sep 20, 2018, 11:42 AM IST

highcourt.jpg

ಬೆಂಗಳೂರು: ಶಿಕ್ಷಕಿ ಸಾಕಮ್ಮ ಕೊಲೆ ಪ್ರಕರಣದ ತನಿಖೆ ಸಮರ್ಪಕವಾಗಿ ನಡೆಸದೆ, ಸಾಕ್ಷ್ಯ ಸಾಬೀತುಪಡಿವಸುವಲ್ಲಿ ವಿಫ‌ಲರಾದ ಕಾರಣಕ್ಕೆ ತುಮಕೂರು ಗ್ರಾಮಾಂತರ ಡಿವೈಎಸ್ಪಿಒ.ಬಿ.ಕಲ್ಲೇಶಪ್ಪ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ರವಿ ಮಳಿಮಠ ಹಾಗೂ ನ್ಯಾ. ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ವಿಭಾಗೀಯಪೀಠ, ಕರ್ತವ್ಯ ನಿರ್ವಹಿಸುವಲ್ಲಿ ವಿಫ‌ಲರಾದ ಡಿವೈಎಸ್ಪಿ ಕಲ್ಲೇಶಪ್ಪ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿತು.

ಈ ಪ್ರಕರಣ ನಡೆದದ್ದು 2010ರಲ್ಲಿ ಆಗ ಕಲ್ಲೇಶಪ್ಪ ಇನ್ಸ್‌ಪೆಕ್ಟರ್‌ ಆಗಿದ್ದರು. ಈಗ ಸೇವಾ ಬಡ್ತಿ ಹೊಂದಿ ಡಿವೈಎಸ್ಪಿ ಆಗಿದ್ದಾರೆ. ಮಂಗಳವಾರ (ಸೆ.18)ರಂದು ಪ್ರಕರಣದ ವಿಚಾರಣೆ ವೇಳೆ ಕಲ್ಲೇಶಪ್ಪ ಖುದ್ದು ಹಾಜರಾಗಿದ್ದರು. ತನಿಖೆಯ ಲೋಪಗಳನ್ನು ಗಮನಿಸಿದ ನ್ಯಾಯಪೀಠ, “ಸೇವೆಯಿಂದ ಅಮಾನತುಗೊಳಿಸಲು ಇದೊಂದು ಅರ್ಹ ಪ್ರಕರಣ’, ಬೇರೆ ಯಾವ ಶಿಕ್ಷೆ ವಿಧಿಸಬಹುದು ನೀವೇ ಹೇಳಿ ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿತ್ತು. ಈ ಮಧ್ಯೆ ಕಲಾಪದ ಸಮಯ ಮುಗಿದಿದ್ದರಿಂದ, ನ್ಯಾಯಪೀಠ ತೀರ್ಪು ಪ್ರಕಟಿಸಿರಲಿಲ್ಲ.

ಬುಧವಾರ ಬೆಳಿಗ್ಗೆ ಪ್ರಕರಣ ವಿಚಾರಣೆಗೆ ಕೈಗೆತ್ತಿಕೊಂಡಾಗ ಕಲ್ಲೇಶಪ್ಪ ನ್ಯಾಯಾಲಯದಲ್ಲಿ ಹಾಜರಿರಲಿಲ್ಲ. ಡಿವೈಎಸ್ಪಿ ಎಲ್ಲಿ ಎಂದು ನ್ಯಾಯಮೂರ್ತಿಗಳು ಕೇಳಿದಾಗ, ಅವರು ಬಂದಿಲ್ಲ. ಬರುವುದು ಬೇಡ ಎಂದು ನಾನೇ ಹೇಳಿದೆ ಎಂದು ಸರ್ಕಾರಿ ವಕೀಲರು ಹೇಳಿದರು. ಇದಕ್ಕೆ ಸಿಟ್ಟಾದ ನ್ಯಾಯಮೂರ್ತಿಗಳು ಡಿವೈಎಸ್ಪಿ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿತು. ಮಧ್ಯಾಹ್ನ ಹಾಜರಾದ ಡಿವೈಎಸ್ಪಿ ಅಮಾನತು ಆದೇಶ ಹಿಂಪಡೆಯುವಂತೆ ಮನವಿ ಮಾಡಿದರು. ನಿಮ್ಮ ಈ ಬೇಜವಾಬ್ದಾರಿ ನಡವಳಿಕೆಯಿಂದ ಕಿರಿಕಿರಿ ಉಂಟು ಮಾಡಬೇಡಿ ಎಂದು ಚಾಟಿ ಬೀಸಿದ ನ್ಯಾಯಪೀಠ, ಅಮಾನತು ಆದೇಶ ಹಿಂಪಡೆಯಲು ನಿರಾಕರಿಸಿತು.

ಇದೇ ವೇಳೆ ತನಿಖಾಧಿಕಾರಿಗಳು ಸಾಕ್ಷ್ಯ ಸಾಬೀತುಪಡಿಸುವಲ್ಲಿ ವಿಫ‌ಲರಾಗಿದ್ದಾರೆ ಎಂಬ ಕಾರಣಕ್ಕೆ ಪ್ರಕರಣದ ಆರೋಪಿಗಳಾದ ಕೃಷ್ಣಪ್ಪ, ಶಿವಣ್ಣ, ಪುರುಷೋತ್ತಮ, ಮಂಜುನಾಥ, ರೋಷನ್‌ ಹಾಗೂ ಮನು ಇವರನ್ನು ದೋಷಮುಕ್ತಗೊಳಿಸಿ ನ್ಯಾಯಪೀಠ ಆದೇಶಿಸಿತು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.