ಟೆಂಡರ್‌ ವಿವಾದ: ಹೈ ಮಧ್ಯಂತರ ತಡೆ

Team Udayavani, Mar 2, 2019, 6:11 AM IST

highcourt3.jpg

ಬೆಂಗಳೂರು: ಗಂಗಾಕಲ್ಯಾಣ ಯೋಜನೆಯಡಿ ರಾಜ್ಯಾದ್ಯಂತ ಸುಮಾರು ಆರು ಸಾವಿರ ಬೋರ್‌ವೆಲ್‌ ಕೊರೆಯಿಸಲು ಡಿ.ದೇವರಾಜ ಅರಸು ಹಿಂದುಗಳಿದ ವರ್ಗಗಳ ಅಭಿವೃದ್ಧಿ ನಿಗಮ ಕರೆದಿದ್ದ ಟೆಂಡರ್‌ಗೆ ಹೈಕೋರ್ಟ್‌ ತಾತ್ಕಾಲಿಕ ಬ್ರೆಕ್‌ ಹಾಕಿದೆ.

ಟೆಂಡರ್‌ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರಿನ ಮೆರ್ಸಸ್‌ ಮಂಜುನಾಥ ಬೋರ್‌ವೆಲ್ಸ್‌ ಸೇರಿದಂತೆ ವಿವಿಧ ಜಿಲ್ಲೆಗಳ ಎಂಟು ಬೋರ್‌ವೆಲ್‌ ಕಂಪನಿಗಳು ಸಲ್ಲಿಸಿದ್ದ ಅರ್ಜಿಯು ಶುಕ್ರವಾರ ನ್ಯಾ. ಅಲೋಕ್‌ ಆರಾಧೆ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆ ಬಂದಿತ್ತು.

ಈ ವೇಳೆ ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ಕುರಿತ ನ್ಯಾಯಾಲಯದ ಮುಂದಿನ ಆದೇಶದವರೆಗೆ ಟೆಂಡರ್‌ ಸಂಬಂಧ ಕಾರ್ಯಾದೇಶ ನೀಡಬಾರದು ಎಂದು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ನಿರ್ದೇಶಿಸಿ ಮಧ್ಯಂತರ ಆದೇಶ ಹೊರಡಿಸಿತು. ಅರ್ಜಿ ವಿಚಾರಣೆಯನ್ನು ಮಾ.11ಕ್ಕೆ ಮುಂದೂಡಿತು.

ಗಂಗಾ ಕಲ್ಯಾಣ ಯೋಜನೆಯಡಿ “ನೋ ವಾಟರ್‌ -ನೋ ಮನಿ’ ಆಧಾರದ ಮೇಲೆ ರಾಜ್ಯದಲ್ಲಿ ಸುಮಾರು ಆರು ಸಾವಿರ ಕೊಳವೆಬಾವಿಗಳನ್ನು ಕೊರೆಯಲು 31 ಪ್ಯಾಕೇಜ್‌ಗಳಲ್ಲಿ ಟೆಂಡರ್‌ಗೆ ಅರ್ಜಿ ಆಹ್ವಾನಿಸಿ ಡಿ.ದೇವರಾಜು ಅರಸ್‌ ಹಿಂದುಗಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರು 2018ರ ಡಿ.28 ರಂದು ಅಧಿಸೂಚನೆ ಹೊರಡಿಸಿದ್ದರು.

ಆದರೆ, ಇದಾದ ಆರು ದಿನಗಳಲ್ಲಿ ಮಾರ್ಪಡಿತ ಟೆಂಡರ್‌ ಆಹ್ವಾನಿಸಿದ ನಿಗಮ ಪ್ಯಾಕೇಜ್‌ಗಳನ್ನು 31ರಿಂದ 12ಕ್ಕೆ ಇಳಿಸಿ 2019ರ ಜ.4ರಂದು ತಿದ್ದುಪಡಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದತಿಗೆ ಕೋರಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು 2018ರ ನ.29ರಂದು ಸರ್ಕಾರಕ್ಕೆ ಪತ್ರ ಬರೆದು 31 ಪ್ಯಾಕ್‌ಜ್‌ಗಳ ಗುತ್ತಿಗೆಯನ್ನು 12 ಪ್ಯಾಕೇಜ್‌ಗೆ ಇಳಿಸಲು ಸೂಚಿಸಿದ್ದರು. ಇದನ್ನು ಹಣಕಾಸು ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಮ್ಮತಿಸಿರಲಿಲ್ಲ.

ಆದರೂ ಡಿ.ದೇವರಾಜ ಅರಸು ಹಿಂದುಗಳಿದ ವರ್ಗಗಳ ಅಭಿವೃದ್ಧಿ ನಿಗಮ 12 ಪ್ಯಾಕೇಜ್‌ಗಳಲ್ಲಿ ಟೆಂಡರ್‌ಗೆ ಅರ್ಜಿ ಆಹ್ವಾನಿಸಿ 2019ರ ಜ.4ರಂದು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಅದೇ ರೀತಿ ಕ್ಲಾಸ್‌-1 ಹಾಗೂ ವಾರ್ಷಿಕ ಹತ್ತು ಕೋಟಿ ರೂ. ವರೆಗಿನ ಗುತ್ತಿಗೆ ಕೆಲಸ ಮಾಡಿಸಿದ ಗುತ್ತಿಗೆದಾರರು ಮಾತ್ರ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

12 ಪ್ಯಾಕೇಜ್‌ಗಳಲ್ಲಿ ಗುತ್ತಿಗೆ ನೀಡುವುದರಿಂದ ಟೆಂಡರ್‌ ಪ್ರಕ್ರಿಯೆಯಲ್ಲಿ ಯಾವುದೇ ಪೈಪೋಟಿ ಇರುವುದಿಲ್ಲ ಹಾಗೂ ಕೆಲವರಿಗೆ ಮಾತ್ರ ಟೆಂಡರ್‌  ಸಿಗಲಿದೆ. ಹಾಗಾಗಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.