ಬಿಸ್ಕತ್ ಪೊಟ್ಟಣದಲ್ಲಿ ಗಾಂಜಾ ಮಾರುತ್ತಿದ್ದವನ ಬಂಧನ
Team Udayavani, Sep 17, 2018, 12:23 PM IST
ಬೆಂಗಳೂರು: ಬಿಸ್ಕತ್ ಪ್ಯಾಕೆಟ್‌ನಲ್ಲಿ ಬಚ್ಚಿಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರ ಮೂಲದ ವೆಂಕಟರಮಣ (35) ಎಂಬಾತನನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ಬೆಳಗ್ಗೆ 9 ಗಂಟೆಗೆ ಅಂಬೇಡ್ಕರ್ ನಗರದ ದಸರಾ ಮೈದಾನದ ಸಮೀಪ ಪಾರೆಲ-ಜಿ ಬಿಸ್ಕತ್ ಪೊಟ್ಟಣದಲ್ಲಿ ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿ ವೆಂಕಟರಮಣನನ್ನು ಬಂಧಿಸಲಾಗಿದೆ. ಆತನಿಂದ 2 ಕೆ.ಜಿ 200 ಗ್ರಾಂ. ತೂಕದ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ.
ಆಂಧ್ರದ ಮಧ್ಯವರ್ತಿಗಳಿಂದ ಗಾಂಜಾ ತರಿಸಿಕೊಂಡು ಆರೋಪಿ ಅನುಮಾನ ಬರದಂತೆ ಬಿಸ್ಕೆಟ್ ಪೊಟ್ಟಣದಲ್ಲಿ ಚಿಕ್ಕ ಪ್ಯಾಕೆಟ್‌ಗಳಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದು, ಈತನ ಹಿಂದೆ ವ್ಯವಸ್ಥಿತ ಜಾಲವಿರುವ ಶಂಕೆಯಿದೆ. ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿ.ಎಸ್. ಪಾರ್ಥಸಾರಥಿ ಮಹೀಂದ್ರಾ ಸಮೂಹದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ..!
ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!
ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ
ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು
ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ