ನಾಲ್ವರು ದರೋಡೆಕೋರರ ಬಂಧನ
Team Udayavani, Apr 16, 2019, 3:00 AM IST
ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ಸಾರ್ವಜನಿಕರನ್ನು ದರೋಡೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಚಂದ್ರಲೇಔಟ್‌ನ ನಿವಾಸಿಗಳಾದ ಅಬ್ದುಲ್ ಸುಲೇಮಾನ್(30), ಖಲಂದರ್(32), ಸಲೀಂ ಪಾಷಾ(29), ಅಬ್ದುಲ್ ಸಾಹೀಲ್(33) ಬಂಧಿತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಎರಡು ಕಾರುಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಬಂಧನದಿಂದ ಬ್ಯಾಟರಾಯನಪುರ, ಕೆಂಗೇರಿ, ಕೊಡಿಗೇಹಳ್ಳಿ, ಮದ್ದೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ತಂಡ ಇತ್ತೀಚೆಗೆ ಜೆ.ಪಿ ನಗರ ನಿವಾಸಿ ರೇಗನ್ ಡ್ನೂಕೆ (38) ಎಂಬುವರ ಬಳಿ ದರೋಡೆ ಮಾಡಿತ್ತು. ಖಾಸಗಿ ಕಂಪನಿಯೊಂದರಲ್ಲಿ ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿರುವ ರೇಗನ್ ಡ್ನೂಕೆ, ಮಾ.23ರಂದು ಮೈಸೂರಿನಿಂದ ತಡರಾತ್ರಿ 12.30ರ ಸುಮಾರಿಗೆ ನಾಯಂಡಹಳ್ಳಿ ಜಂಕ್ಷನ್‌ಗೆ ಬಂದಿದ್ದರು.
ಮನೆಗೆ ತೆರಳಲು ಬಾಡಿಗೆ ಕಾರಿಗಾಗಿ ಕಾಯುತ್ತಿದ್ದರು. ಅದೇ ವೇಳೆ ಕಾರಿನಲ್ಲಿ ಬಂದ ಆರೋಪಿಗಳು, ಡ್ರಾಪ್‌ಕೊಡುವ ನೆಪದಲ್ಲಿ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು ತೋರಿಸಿ, ಕತ್ತಿನಲ್ಲಿದ್ದ ಚಿನ್ನದ ಸರ ಮತ್ತು ಉಂಗುರಗಳನ್ನು ಕಸಿದುಕೊಂಡಿದ್ದರು.
ನಂತರ ಕೆಂಗೇರಿ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸುವಾಗ ರೇಗನ್ ಡ್ನೂಕೆ ಸಹಾಯಕ್ಕಾಗಿ ಜೋರಾಗಿ ಕೂಗಿಕೊಂಡಿದ್ದಾರೆ. ನಂತರ ಚಾಲಕನಿಗೆ ಕಾಲಿನಿಂದ ಒದ್ದು, ತಪ್ಪಿಸಿಕೊಂಡಿದ್ದರು. ಇದರಿಂದ ವಿಚಲಿತರಾದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಸಿಸಿ ಕ್ಯಾಮೆರಾ ಕೊಟ್ಟ ಸುಳಿವು: ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಪೊಲೀಸರು, ಕೃತ್ಯ ನಡೆದ ಸ್ಥಳದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳು ಬಳಸಿದ್ದ ಕಾರಿನ ನಂಬರ್ ಪತ್ತೆಯಾಗಿತ್ತು. ಅದರ ಆಧಾರದ ಮೇಲೆ ತನಿಖೆ ನಡೆಸಿದಾಗ ನಾಯಂಡಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರು : ಶಾಪಿಂಗ್ ಮಾಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು
ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ಗೊತ್ತಿದೆ : ಸಿಎಂ ಬೊಮ್ಮಾಯಿ
ಯಾವುದೇ ಸೌಲಭ್ಯ ನೀಡದೆ 11 ಸಾವಿರ ಬಿಸಿಯೂಟ ನೌಕರರ ವಜಾ : ಸರಕಾರದ ನಿರ್ಧಾರಕ್ಕೆ ಡಿಕೆಶಿ ಗರಂ
ಸಾಯಿ ಲೇಔಟ್ ನಿವಾಸಿಗಳಿಗೆ ಭವಿಷ್ಯದ ಚಿಂತೆ
ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿ.. ಜೈಲಿಗೆ ಹೋದ ಭಾಮೈದುನ