ಆಟೋ ಚಾಲಕನ ಕೊಂದವರ ಬಂಧನ
Team Udayavani, Feb 3, 2019, 6:31 AM IST
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಆಟೋ ಚಾಲಕನನ್ನು ಕೊಂದಿದ್ದ ಮೂವರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಶ್ರೀಧರ ಅಲಿಯಾಸ್ ಗೊರಿಲ್ಲಾ, ಮಂಜೇಶ, ವೆಂಕಟೇಶ ಅಲಿಯಾಸ್ ವೆಂಕ ಬಂಧಿತರು.
ಜ.24ರಂದು ರಾತ್ರಿ ಎನ್‌ಜಿಎಫ್ ಲೇಔಟ್‌ನ ಸನ್‌ಶೈನ್ ಬಾರ್‌ನ ಬಿಲ್ ಕೌಂಟರ್ ಬಳಿ ಆಟೋ ಚಾಲಕ ಎಚ್.ಎಸ್.ರಘು, ತಮ್ಮತ್ತ ನೋಡಿದ ಎಂಬ ಕಾರಣಕ್ಕೆ ಆರೋಪಿಗಳು ಜಗಳ ತೆಗೆದು, ಇರಿದು ಪರಾರಿಯಾಗಿದ್ದರು. ತೀವ್ರ ರಕ್ತ ಸ್ರಾವದಿಂದ ನಿತ್ರಾಣಗೊಂಡಿದ್ದ ರಘುನನ್ನು ಆತನ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡೊದ್ದ ಪೊಲೀಸರು, ಬಾರ್‌ನ ಸಿಸಿ ಕ್ಯಾಮೆರಾ ಫುಟೇಜ್ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿ ಗೊರಿಲ್ಲಾ ವಿರುದ್ಧ ವಿಜಯನಗರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ ಠಾಣೆಗಳಲ್ಲಿ ಕೊಲೆ, ಡಕಾಯಿತಿ ಇನ್ನಿತರೆ ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ಪಟ್ಟಿ ತೆಗೆಯಲಾಗಿದೆ. ಮಂಜೇಶ ಕೂಡ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಮಂಜೇಶನ ಸಂಬಂಧಿ ವೆಂಕಟೇಶ ಇತ್ತೀಚೆಗಷ್ಟೇ ನಗರಕ್ಕೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ