ದೀಪಕ್‌ ಹತ್ಯೆ ತನಿಖೆಯನ್ನು ಎನ್‌ಐಎಗೆ ವಹಿಸಲು ಬಿಜೆಪಿ ಆಗ್ರಹ

Team Udayavani, Jan 4, 2018, 6:10 AM IST

BJP_symbol.jpg

ಬೆಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ ಬುಧವಾರ ನಡೆದ ಹಿಂದೂ ಕಾರ್ಯಕರ್ತ ದೀಪಕ್‌ ರಾವ್‌ ಬರ್ಭರ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕೈವಾಡವಿದೆ ಎ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸುವಂತೆ ಆಗ್ರಹಿಸಿದೆ.

ಜತೆಗೆ ಈ ಹತ್ಯೆಯ ನೈತಿಕ ಹೊಣೆ ಹೊತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್‌ ರೈ ಮತ್ತು ಗೃಹ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಆರ್‌.ಅಶೋಕ್‌ ಮತ್ತು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ, ಕಾಟಿಪಳ್ಳದಲ್ಲಿ ಚಿಕನ್‌ಕಟ್‌ ರೀತಿ ಅಮಾನುಷವಾಗಿ ದೀಪಕ್‌ರಾವ್‌ನನ್ನು ಹತ್ಯೆ ಮಾಡಲಾಗಿದ್ದು, ಇದರ ಹಿಂದೆಯೂ ಪಿಎಫ್ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಸಂಚು ಇದೆ ಎನ್ನುವುದರಲ್ಲಿ ಯಾವ ಸಂಶಯವೂ ಉಳಿದಿಲ್ಲ. ಈ ಹಿಂದೆ ನಡೆದ ಹತ್ಯೆಗಳ ಸಂದರ್ಭದಲ್ಲಿ ಸರ್ಕಾರ ಅನುಸರಿಸಿದ ಉದಾಸೀನ ಭಾವವೇ ಈ ಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಹಲ್ಲೆ ಮತ್ತು ಹತ್ಯೆ ನಡೆಸುವ ವ್ಯವಸ್ಥಿತ ಜಾಲವೇ ಸಕ್ರಿಯವಾಗಿದೆ. ಆದರೆ ರಾಜ್ಯ ಸರ್ಕಾರ ಪ್ರತಿಯೊಂದು ಹತ್ಯೆಯನ್ನು ಪ್ರತ್ಯೇಕಿಸಿ ಪರಿಸ್ಥಿತಿಯ ಗಂಭೀರತೆಯನ್ನು ಕಡೆಗಣಿಸುತ್ತಿದೆ.  2012-13ರಲ್ಲಿ ಮೈಸೂರು ಮತ್ತು ಶಿವಮೊಗ್ಗದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಆರೋಪಿಗಳ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದರಿಂದ ಈಗ ರಾಜ್ಯದಲ್ಲಿ ಮಾರಣಹೋಮ ನಡೆಯಲು ಕಾರಣವಾಗಿದೆ ಎಂದು ದೂರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ನಂತರ ಅಥವಾ ಭೇಟಿಗಿಂತ ಮೊದಲು ಇಂತಹ ಕೃತ್ಯ ನಡೆಯುತ್ತಿರುವುದು ಕಾಕತಾಳೀಯವೋ, ಆಕಸ್ಮಿಕವೋ ಎಂಬುದನ್ನು ಸ್ಪಷ್ಟಪಡಿಸಬೇಕು. ದೀಪಕ್‌ ರಾವ್‌ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು. ಮೃತ ದೀಪಕ್‌ ರಾವ್‌ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.