ಬಿಜೆಪಿಯದ್ದು ಖರೀದಿ ಪದ್ಧತಿ ಸರ್ಕಾರ

Team Udayavani, Nov 25, 2019, 3:05 AM IST

bjpyaddu

ಬೆಂಗಳೂರು: ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವಕ್ಕೆ ಮಾರಕವಾಗುವ ಖರೀದಿ ಪದ್ಧತಿಯ ಸರ್ಕಾರ ರಚನೆಗೆ ಬಿಜೆಪಿ ನಾಂದಿ ಹಾಡಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ.

ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಶಿವರಾಜ್‌ ಪರ ಭಾನುವಾರ ವೃಷಾಭವತಿನಗರ ವಾರ್ಡ್‌ನ ವಿವಿಧೆಡೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಾದೇಶಕ್ಕೆ ವಿರುದ್ಧವಾಗಿ ಹಣ, ಅಧಿಕಾರದ ಆಮಿಷ, ಬೆದರಿಕೆ ಒಡ್ಡಿ ಶಾಸಕರನ್ನು ಖರೀದಿಸಿ ದೇಶದೆಲ್ಲೆಡೆ ಸರ್ಕಾರ ರಚನೆ ಮಾಡುವ ಮೂಲಕ ಬಿಜೆಪಿ ಸಂವಿಧಾನಕ್ಕೆ ಅಪಚಾರವೆಸಗುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಅನರ್ಹ ಶಾಸಕರಿಗೆ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದು, ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದರು. ಕಾಂಗ್ರೆಸ್‌ ಅಭ್ಯರ್ಥಿ ಎಂ.ಶಿವರಾಜು ಮಾತನಾಡಿ, ದೇಶದಲ್ಲೇ ನುಡಿದಂತೆ ನಡೆದ ಏಕೈಕ ಸರ್ಕಾರ, ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳನ್ನು ಈಡೇರಿಸಿದ ದೇಶದ ಪ್ರಥಮ ಸರ್ಕಾರ ಎಂಬ ಕೀರ್ತಿ ಕಾಂಗ್ರೆಸ್‌ ಸರ್ಕಾರಕ್ಕಿದೆ ಎಂದರು.

ಬಸವಣ್ಣನವರ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ಎಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಜಾತಿ, ವರ್ಗ, ಧರ್ಮದ ಜನರಿಗೆ ಅನುಕೂಲವಾಗುವಂಥ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌, ಕ್ಷೀರಭಾಗ್ಯ, ವಿದ್ಯಾಸಿರಿ ರೀತಿಯ ಉಪಯುಕ್ತ ಕಾರ್ಯಕ್ರಮ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೂ ಸಹಕಾರ ನೀಡಿದ್ದಾರೆ.

ಜನತೆ ನನ್ನನ್ನು ಕೈಹಿಡಿದರೆ ಕ್ಷೇತ್ರಕ್ಕೆ ಹೊಸ ರೂಪ ನೀಡುವುದಾಗಿ ತಿಳಿಸಿದರು. ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮೋಟಮ್ಮ, ಭಾರತಿ ಶಂಕರ್‌, ಕಾಂಗ್ರೆಸ್‌ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್‌, ಗಿರೀಶ್‌ ಲಕ್ಕಣ್ಣ, ಪಾಲಿಕೆ ಮಾಜಿ ಸದಸ್ಯ ಮೋಹನ್‌ ಕುಮಾರ್‌ ಮತ ಯಾಚಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.