Udayavni Special

ಬಿಜೆಪಿ ನಾಯಕರಿಗೆ ಸಚಿವ ಡಿಕೆಶಿ ಟಾಂಗ್‌


Team Udayavani, Aug 27, 2018, 6:10 AM IST

dk-bj.jpg

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಒಡೆದು ಸರ್ಕಾರ ಉರುಳುತ್ತದೆ ಎನ್ನಲು ಅದೇನು ಮಡಕೆಯಲ್ಲ ಎನ್ನುವ ಮೂಲಕ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಮೈತ್ರಿ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಟಾಂಗ್‌ ನೀಡಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಚರ್ಚಿಸಿಯೇ ಮೈತ್ರಿ ಸರ್ಕಾರ ರಚಿಸಿದ್ದು, ಇದು ಸಂವಿಧಾನಾತ್ಮಕವಾಗಿಯೇ ಆಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಒಡೆದು ಹೋಗಲಿದೆ. ಸರ್ಕಾರ ಬೀಳುಸುತ್ತೇವೆ ಎನ್ನಲು ಅದೇನೂ ಮಡಕೆಯಲ್ಲ. ಆದರೂ ಪ್ರಯತ್ನ ಮಾಡುತ್ತೇವೆ ಎನ್ನುವ ಬಿಜೆಪಿಯ ಸ್ನೇಹಿತರಿಗೆ ಒಳ್ಳೆಯದಾಗಲಿ ಎಂದು ವ್ಯಂಗ್ಯವಾಡಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಶಾಸಕರ ಸಂಖ್ಯಾ ಬಲ 104 ಅದು 113ಕ್ಕೇರಬೇಕಾದರೆ ಇತರೆ ಪಕ್ಷಗಳ ಶಾಸಕರಿಂದ ರಾಜೀನಾಮೆ ಕೊಡಿಸಿ ಅವರನ್ನು ಗೆಲ್ಲಿಸಿಕೊಂಡು ಬಂದು ಬಳಿಕ ಅವಿಶ್ವಾಸ ನಿರ್ಣಯ ಮಂಡಿಸಿ ಸರ್ಕಾರ ಉರುಳಿಸಬೇಕು. ಆದರೆ, ಅದು ಸುಲಭದ ಮಾತಲ್ಲ. ಈ ಹಿಂದೆ ಆತುರಕ್ಕೆ ಬಿದ್ದು ಸರ್ಕಾರ ರಚಿಸಿದ ಬಿಜೆಪಿಯ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಮತ್ತೆ ಅದೇ ಆತುರ ಮಾಡಿ ನಂಬರ್‌ ಗೇಮ್‌ ಆಟದಲ್ಲಿ ಗೆಲ್ಲುವುದು ಕಷ್ಟ ಮಾತ್ರವಲ್ಲ, ಬಿಜೆಪಿಯವರೇ ಸಮಸ್ಯೆಗೆ ಸಿಲುಕಿಕೊಳ್ಳಬಹುದು ಎಂದರು.

ಮುಖ್ಯಮಂತ್ರಿಗಳ ಬೆನ್ನಿಗಿದ್ದು ಕೆಲಸ ಮಾಡುತ್ತಿದ್ದೇನೆ:ಹಿಂದೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಾಲ್ಕೂವರೆ ವರ್ಷ ಅವರ ಬೆನ್ನಿಗೆ ನಿಂತು ಕೆಲಸ ಮಾಡಿದ್ದೆ. ಈಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬೆನ್ನಿಗೆ ನಿಂತು ಕೆಲಸ ಮಾಡುತ್ತೇನೆ. ಐದು ವರ್ಷ ಕಾಲ ಅವರೇ ಅಧಿಕಾರದಲ್ಲಿರುತ್ತಾರೆ. ಯಾರ ಕಾಲೆಳೆಯುವ ಕೆಲಸವನ್ನೂ ನಾನು ಮಾಡುವುದಿಲ್ಲ ಮತ್ತು ಅದು ನನಗೆ ಬೇಕಾಗಿಯೂ ಇಲ್ಲ ಎಂದರು.

ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ಪಕ್ಷದ ಹಿರಿಯ ನಾಯಕರು ಮಾತ್ರವಲ್ಲ ವಿದ್ಯಾವಂತ ಮತ್ತು ಮುತ್ಸದಿ ರಾಜಕಾರಣಿ. ಅಂಥವರು ಸರ್ಕಾರವನ್ನು ಗೊಂದಲಕ್ಕೆ ನೂಕುವ ಕೆಲಸ ಮಾಡುವುದಿಲ್ಲ. ರಾಜಕಾರಣದಲ್ಲಿ ಕಾರ್ಯಕರ್ತರನ್ನು ಹುಮ್ಮಸ್ಸಿನಲ್ಲಿಡಲು ನಾನಾ ರೀತಿಯ ಹೇಳಿಕೆಗಳನ್ನು ನೀಡಬೇಕಾಗುತ್ತದೆ. ಅದರಂತೆ ಅವರು ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ಸದ್ಯಕ್ಕೆ ನಾನು ಮುಖ್ಯಮಂತ್ರಿಯ ಹುದ್ದೆ ರೇಸ್‌ನಲ್ಲಿ ಇಲ್ಲ. ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಐದು ವರ್ಷ ಪೂರ್ಣಗೊಳ್ಳುತ್ತದೆ. ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಮುಂದೆ ಚುನಾವಣೆ ನಡೆದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಯಾರು ಮುಖ್ಯಮಂತ್ರಿ ಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ. ಹೈಕಮಾಂಡ್‌ ಸೂಚನೆ ಎಲ್ಲರೂ ಪಾಲಿಸುತ್ತಾರೆ ಎಂದು ಹೇಳಿದರು.

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಸಚಿವ ಸಾ.ರಾ.ಮಹೇಶ್‌ರನ್ನು ತರಾಟೆಗೆ ತೆಗೆದುಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೊಡಗಿನಲ್ಲಿ ಮಳೆ ಅನಾಹುತದಿಂದ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸಲು ಸಾ.ರ.ಮಹೇಶ್‌ ಸಂಪುಟ ಸಭೆಗೂ ಬರದೆ ಅಲ್ಲಿ ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ನಿರ್ಮಾಲಾ ಸೀತಾರಾಮ್‌ ನಿಂದಿಸಿದ್ದಾರೆ. ಅವರು ದೊಡ್ಡವರು, ಒಳ್ಳೆಯದಾಗಲಿ. ಬೇಕಿದ್ದರೆ ಇನ್ನೊಂದು ಬಾರಿ ಬಂದು ಬೈದು ಹೋಗಲಿ. ನಮ್ಮ ಜನರಿಗೆ ಒಳ್ಳೆಯದಾಗಬೇಕು ಎಂಬುದಷ್ಟೇ ನಮ್ಮ ಆಸೆ ಎಂದರು.

ಋಣಪರಿಹಾರ ಅಧಿನಿಯಮ ಏಕಾಏಕಿ ತೀರ್ಮಾನವಲ್ಲ
ಖಾಸಗಿ ಸಾಲ ಮತ್ತು ಲೇವಾದೇವಿಗೆ ಕಡಿವಾಣ ಹಾಕುವ ಋಣ ಪರಿಹಾರ ಅಧಿನಿಯಮವನ್ನು ಏಕಾಏಕಿ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆದಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ಮಧ್ಯೆ ಸುದೀರ್ಘ‌ ಚರ್ಚೆಯ ಬಳಿಕವೇ ಸಂಪುಟ ಸಭೆಗೆ ತಂದು ಅನುಮೋದನೆ ಪಡೆಯಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಎದ್ದಿರುವ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ಅವರು, ಬಡ್ಡಿ, ಚಕ್ರಬಡ್ಡಿ, ಮೀಟರ್‌ ಬಡ್ಡಿ ದಂಧೆಯಿಂದ ಜನ ಸಾಮಾನ್ಯರಿಗೆ ಅದರಲ್ಲೂ ಮುಖ್ಯವಾಗಿ ರೈತರು, ಕೃಷಿ ಕೂಲಿ ಕಾರ್ಮಿಕರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದಿಂದ ಮಾಹಿತಿ ತರಿಸಿಕೊಂಡು ಯಾವ ರೀತಿ ಖಾಸಗಿ ಲೇವಾದೇವಿ ನಡೆಯುತ್ತಿದೆ ಎಂಬುದನ್ನು ಪರಿಶೀಲಿಸಿದ ಬಳಿಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಋಣ ಪರಿಹಾರ ಅಧಿನಿಯಮ ಕುರಿತು ಚರ್ಚಿಸಿದ್ದರು. ಆದರೆ, ಇದು ಮೊದಲೇ ಬಹಿರಂಗವಾದರೆ ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕೆ ಸಂಪುಟ ಸಭೆ ಆರಂಭವಾಗುವವರೆಗೆ ವಿಷಯವನ್ನು ಗುಟ್ಟಾಗಿ ಇಡಲಾಗಿತ್ತು ಎಂದು ಹೇಳಿದರು.

ಋಣ ಪರಿಹಾರ ಅಧಿನಿಯಮದ ಬಗ್ಗೆ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿದ ಬಳಿಕವೇ ಒಪ್ಪಿಗೆ ಪಡೆಯಲಾಗಿದೆ. ಅಡ್ವೋಕೇಟ್‌ ಜನರಲ್‌ ಕೂಡ ಅದರ ಸಾಧಕ-ಬಾಧಕಗಳ ಬಗ್ಗೆ ತಿಳಿಸಿದ್ದಾರೆ. ಅದರಂತೆ ಅಧಿನಿಯಮವನ್ನು ಶೀಘ್ರವೇ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗುವುದು. ಅವರ ಅಂಕಿತ ಬಿದ್ದ ಕೂಡಲೇ ಜಾರಿಗೊಳಿಸಲಾಗುವುದು ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Sannu-01

ಶಾರ್ಜಾ ಮೈದಾನದಲ್ಲಿ ಸ್ಯಾಮ್ಸನ್-ಸ್ಮಿತ್ ಸ್ಪೋಟಕ ಜೊತೆಯಾಟ ; ಚೆನ್ನೈಗೆ 217 ರನ್ ಟಾರ್ಗೆಟ್

IPL

ಕೀಡಾಕ್ಷೇತ್ರದಲ್ಲಿ ದಾಖಲೆ ಬರೆದ ಐಪಿಎಲ್‌ ಉದ್ಘಾಟನಾ ಪಂದ್ಯ; 20 ಕೋಟಿ ವೀಕ್ಷಣೆ !

Gilirama

Viral Video: ದೈತ್ಯ ಗಿಳಿಯ ಫುಟ್ಬಾಲ್ ಮೋಹ ; ಆಟಗಾರ್ತಿಯ ತಲೆಯೇರಿದ್ದೇಕೆ ಗಿಣಿರಾಮ?

paytm

ಗೂಗಲ್‌ ಪ್ಲೇ ಸ್ಟೋರ್‌ V/S ಪೇಟಿಎಂ; ಅಷ್ಟಕ್ಕೂ Paytm ಜೂಜಿನ ಆ್ಯಪ್‌‌ ಆಗಿದ್ದು ಹೇಗೆ?

hunasur

ಹುಣಸೂರು: ಜಮೀನಿನಲ್ಲಿ ಗಾಂಜಾ ಬೆಳೆ; ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

sucide

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಚ್ಚಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ !

ರಿಯಾಗಿಲ್ಲ ರಿಲೀಫ್ ; ನ್ಯಾಯಾಂಗ ಬಂಧನ ವಿಸ್ತರಣೆ

ರಿಯಾಗಿಲ್ಲ ರಿಲೀಫ್ ; ನ್ಯಾಯಾಂಗ ಬಂಧನ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hunasur

ಹುಣಸೂರು: ಜಮೀನಿನಲ್ಲಿ ಗಾಂಜಾ ಬೆಳೆ; ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

sucide

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಚ್ಚಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ !

200ಕ್ಕೂ ಹೆಚ್ಚು ಸಹಾಯಕ ನಿರ್ದೇಶಕರು ತಾಲೂಕು ಮಟ್ಟದ ಹುದ್ದೆಗೆ ನಿಯುಕ್ತಿ : ಸಚಿವ ಚವ್ಹಾಣ್

200ಕ್ಕೂ ಹೆಚ್ಚು ಸಹಾಯಕ ನಿರ್ದೇಶಕರು ತಾಲೂಕು ಮಟ್ಟದ ಹುದ್ದೆಗೆ ನಿಯುಕ್ತಿ : ಸಚಿವ ಚವ್ಹಾಣ್

dk-shivakumar

ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸಿದೆ: ಡಿ.ಕೆ ಶಿವಕುಮಾರ್

TIPPER

ಗ್ರಾಮೀಣ ಯುವಕನ ಸಾಧನೆ: ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ !

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆಹೊಸ ಸೇರ್ಪಡೆ

ರೂಪ ಕೈಕೊಟ್ಟರೂ ಬುದ್ಧಿಕೈಕೊಡಲಿಲ್ಲ!

ರೂಪ ಕೈಕೊಟ್ಟರೂ ಬುದ್ಧಿಕೈಕೊಡಲಿಲ್ಲ!

Sannu-01

ಶಾರ್ಜಾ ಮೈದಾನದಲ್ಲಿ ಸ್ಯಾಮ್ಸನ್-ಸ್ಮಿತ್ ಸ್ಪೋಟಕ ಜೊತೆಯಾಟ ; ಚೆನ್ನೈಗೆ 217 ರನ್ ಟಾರ್ಗೆಟ್

ಕೊಡಬೇಕಿದ್ದ ಪ್ರೇಮ ಪತ್ರ ಅಲ್ಲೆಲ್ಲೋ ಬಿದ್ದುಹೋಗಿತ್ತು…

ಕೊಡಬೇಕಿದ್ದ ಪ್ರೇಮ ಪತ್ರ ಅಲ್ಲೆಲ್ಲೋ ಬಿದ್ದುಹೋಗಿತ್ತು…

IPL

ಕೀಡಾಕ್ಷೇತ್ರದಲ್ಲಿ ದಾಖಲೆ ಬರೆದ ಐಪಿಎಲ್‌ ಉದ್ಘಾಟನಾ ಪಂದ್ಯ; 20 ಕೋಟಿ ವೀಕ್ಷಣೆ !

ಇನ್ನೊಬ್ಬರನ್ನು ಮೆಚ್ಚಿಸಿ ಏನುಪಯೋಗ?

ಇನ್ನೊಬ್ಬರನ್ನು ಮೆಚ್ಚಿಸಿ ಏನುಪಯೋಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.