ರೈಲು ಪ್ರಯಾಣಿಕರು ಇರುವಲ್ಲಿಗೇ ಬರಲಿದೆ ಬಸ್‌!

Team Udayavani, Dec 6, 2019, 10:20 AM IST

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಗೇಟ್‌ 1ರ ಮೂಲಕ ನಿತ್ಯ ಒಂದು ಲಕ್ಷಕ್ಕೂ ಹೆಚ್ಚು ಜನ ಪ್ರಯಾಣಿಕರು ಬರುತ್ತಿದ್ದು, ಈ ಭಾಗದಲ್ಲಿ ಸಂಚಾರ ದಟ್ಟಣೆಯೂ ಹೆಚ್ಚಾಗುತ್ತಿದೆ. ಬಸ್‌ ನಿಲ್ದಾಣಕ್ಕೆ ಪ್ರಯಾಣಿಕರು ತೂಕದ ಬ್ಯಾಗ್‌ ಹಾಗೂ ಲಗೇಜ್‌ಗಳನ್ನು ಹೊತ್ತು ಸಾಗಬೇಕಾಗಿದೆ. ಅಲ್ಲದೆ, ಮಕ್ಕಳು, ಗರ್ಭಿಣಿಯರು ರೈಲು ನಿಲ್ದಾಣದಿಂದ ಬಸ್‌ ನಿಲ್ದಾಣಕ್ಕೆ ಹೋಗಲು ಹರಸಾಹಸ ಪಡುತ್ತಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಹಾಗೂ ಕೆಂಪೇಗೌಡ ಬಸ್‌ ನಿಲ್ದಾಣದ ನಡುವೆ 300 ಮೀಟರ್‌ ಅಂತರವಿದೆ. ಹೀಗಾಗಿ, ರೈಲು ನಿಲ್ದಾಣದ ಗೇಟ್‌-3ರಲ್ಲಿ ಬಸ್‌ ಸಂಚಾರ ಸೇವೆ ಕಲ್ಪಿಸಲು ಬಿಎಂಟಿಸಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ರೈಲು ನಿಲ್ದಾಣದ ಗೇಟ್‌-3ರ ಮಾರ್ಗವಾಗಿ ಬಿಎಂಟಿಸಿ ಬಸ್‌ಗಳ ಸಂಚಾ ಪ್ರಾರಂಭಿಸುವ ಸಂಬಂಧ ಬಿಎಂಟಿಸಿ ಮತ್ತು ರೈಲ್ವೆ ಇಲಾಖೆ ಒಪ್ಪಂದ ಮಾಡಿಕೊಂಡಿದ್ದು,ಎರಡು ಇಲಾಖೆಗಳ ಸಹಭಾಗಿತ್ವದಲ್ಲಿ ಈ ಯೋಜನೆ ಅನುಷ್ಠಾನವಾಗುತ್ತಿದೆ.

ಈ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ನೋಡಿಕೊಂಡು ಆಯಾಮಾರ್ಗದಲ್ಲಿ ಬಸ್‌ ಸಂಚಾರ ಪ್ರಾರಂಭಿಸಲು ಬಿಎಂಟಿಸಿ ಮುಂದಾಗಿದೆ. ಶೀಘ್ರದಲ್ಲೇ ಈ ಮಾರ್ಗದಲ್ಲಿ ಬಸ್‌ಗಳ ಸಂಚಾರ ಪ್ರಾರಂಭವಾಗಲಿದ್ದು, ಪ್ರಾರಂಭಿಕ ಹಂತದಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒಂದು ಬಸ್‌ ಈ ಮಾರ್ಗದಲ್ಲಿ ಸಂಚರಿಸಲಿದೆ. ಬಸ್‌ ಸಂಚಾರ ಯಾವ ಮಾರ್ಗಗಳಲ್ಲಿ ಪ್ರಾರಂಭಿಸಬೇಕು ಎನ್ನುವ ಸಂಬಂಧ ರೈಲ್ವೆ ಇಲಾಖೆಯ ವೇಳಪಟ್ಟಿ ಹಾಗೂ ಪ್ರಯಾಣಿಕರು ಇಲ್ಲಿಂದ ಯಾವ ಮಾರ್ಗದಲ್ಲಿ ಹೆಚ್ಚು ಸಂಚಾರ ಮಾಡುತ್ತಾರೆ ಎನ್ನುವ ಬಗ್ಗೆ ಬಿಎಂಟಿಸಿ ಮಾಹಿತಿ ಕಲೆಹಾಕಿದೆ. ಈ ಮೂಲಕ ಇನ್ನು ಮುಂದೆ ಪ್ರಯಾಣಿಕರ ಬಳಿಗೇ ಬಿಎಂಟಿಸಿ ಬಸ್‌ ಬರಲಿದೆ!

ಸಾರ್ವಜನಿಕರಿಗೆ ಮಾಹಿತಿ: ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎರಡೂ ಇಲಾಖೆಗಳು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಪ್ರಯಾಣಿಕರಿಗೆ ಪ್ಲಾಟ್‌ಫಾರಂ ಹಾಗೂ ಸಾರಿಗೆ ಸೇವೆಯ ಬಗ್ಗೆ ಮಾಹಿತಿ ನೀಡುವುದಕ್ಕೆ ಹತ್ತು ಜನ ಸಾರಿಗೆ ಸೇವಕರನ್ನು ನೇಮಕ ಮಾಡಲಾಗಿದೆ. ಈ ಸಂಚಾರ ಸೇವಕರು ರೈಲು ನಿಲ್ದಾಣದ ಒಳಭಾಗದಲ್ಲಿ ಸಂಚಾರ ಸೇವೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಈ ಮಾರ್ಗದಲ್ಲಿ ಬಸ್‌ಗಳ ವೇಳಾಪಟ್ಟಿ ನಾಮಫ‌ಲಕ ಅಳವಡಿಸುವುದಕ್ಕೆ ಬಿಎಂಟಿಸಿ ಮುಂದಾಗಿದೆ. ಅಲ್ಲದೆ, ಈ ಭಾಗದಲ್ಲಿ ಬಸ್‌ಗಳ ಆಗಮನ ಹಾಗೂ ನಿರ್ಗಮನ ಸುಗಮವಾಗಿಸುವುದಕ್ಕಾಗಿ ಪಾಳಿ ಪ್ರಕಾರ ಸಂಚಾರ ಸಹಾಯಕರನ್ನು ನೇಮಿಸಲಾಗುತ್ತಿದೆ.

ಖಾಸಗಿ ವಾಹನಗಳಿಗೆ ನಿರ್ಭಂದ: ರೈಲು ನಿಲ್ದಾಣದ ಗೇಟ್‌-3ರ ಬಳಿ ಈಗ ಖಾಸಗಿ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ. ಬಸ್‌ ಸಂಚಾರ ಸೇವೆಯನ್ನು ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಆಟೋ ರಿಕ್ಷಾ, ಬೈಕ್‌ ಹಾಗೂ ಕಾರು ಸೇರಿದಂತೆ ಎಲ್ಲ ರೀತಿಯ ಖಾಸಗಿ ವಾಹನಗಳನ್ನು ನಿರ್ಭಂದಿಸಲಾಗಿದೆ.

ಮತ್ತಷ್ಟು ಸಿದ್ಧತೆ ಅವಶ್ಯ : ಗೇಟ್‌-3ರಲ್ಲಿನ ಉದ್ದೇಶಿತ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯಗಳನ್ನು ರೈಲ್ವೆ ಇಲಾಖೆ ಇನ್ನಷ್ಟೇ ಅಳವಡಿಸಬೇಕಿದೆ. ಪ್ರಯಾಣಿಕರಿಗೆ ಕುರ್ಚಿ ವ್ಯವಸ್ಥೆ ಹಾಗೂ ಮಳೆ, ಬಿಸಿಲಿನಿಂದ ರಕ್ಷಣೆಗೆ ತಂಗುದಾಣ ನಿರ್ಮಾಣ ಹಾಗೂ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡುವ ಅವಶ್ಯಕತೆ ಇದೆ.

ಸಾರ್ವಜನಿಕರಿಗೆ ಅನುಕೂಲ: ಉದ್ದೇಶಿತ ಬಸ್‌ನಿಲ್ದಾಣದಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಇನ್ನು ರೈಲು ನಿಲ್ದಾಣದ ಗೇಟ್‌-1ರಲ್ಲಿನ ಕೆಲವು ಟ್ಯಾಕ್ಸಿ ಹಾಗೂ ಆಟೋಗಳು ಚಾಲಕರು ದುಬಾರಿ ಮೊತ್ತ ಪಡೆಯುತ್ತಿರುವ ಆರೋಪ ಇದೆ. ಅಲ್ಲದೆ, ಈ ಮಾರ್ಗದಲ್ಲಿ ಬಿಎಂಟಿಸಿ ಬಸ್‌ ಪರಿಚಯಿಸಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಸೇವೆ ಬಳಸಿದರೆ, ಬಿಎಂಟಿಸಿ ಆದಾಯ ಹೆಚ್ಚಾಗುವ ಸಾಧ್ಯತೆಯೂ ಇದೆ.

 

-ಹಿತೇಶ್‌ ವೈ

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರ್ಕಾರ ಆರಂಭಿಸಿದ್ದ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ "ಬಡವರ ಬಂಧು' ಈಗ ಕಷ್ಟದಲ್ಲಿರುವ...

  • ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದ ಅಬಕಾರಿ ಆದಾಯದಲ್ಲಿ ನೆರೆಯ ಆಂಧ್ರಪ್ರದೇಶದ ಗ್ರಾಹಕರ ಪಾಲು ಸೇರಿದೆ. ಹೌದು, ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆ ಶೇ.20...

  • ಬೆಂಗಳೂರು: ಹಲಸೂರಿನ ಮುಖ್ಯರಸ್ತೆಗಳಲ್ಲಿ ಅಡಿಗಡಿಗೂ ಶಾಲೆಗಳಿವೆ. ಮುಖ್ಯರಸ್ತೆಯಲ್ಲೇ ಇರುವ ನರ್ಸರಿ, ಪ್ರೈಮರಿ, ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಸಾವಿರಾರು...

  • ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಜಾರಿಯಲ್ಲಿರುವ ಬೀಟ್‌ ವ್ಯವಸ್ಥೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಹಾಗೂ ಜನಸ್ನೇಹಿ ಮಾಡುವ ಉದ್ದೇಶದಿಂದ ಆಗ್ನೇಯ ವಿಭಾಗದ...

  • ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಬುಧವಾರ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸೂರ್ಯನ ರಶ್ಮಿಯು ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು...

ಹೊಸ ಸೇರ್ಪಡೆ