ಸಾಂದರ್ಭಿಕ ಶಿಶುವಿಗೆ ಗೊತ್ತು ಗುರಿಯಿಲ್ಲ


Team Udayavani, Nov 24, 2018, 6:00 AM IST

bsy-g-800.jpg

ಬೆಂಗಳೂರು: ಸುಳ್ಳು ಭರವಸೆ ನೀಡಿದ್ದೇ ರಾಜ್ಯ ಸರ್ಕಾರದ ಆರು ತಿಂಗಳ ಸಾಧನೆಯಾಗಿದ್ದು, ಆರು ತಿಂಗಳು ಅಸ್ತಿತ್ವದಲ್ಲಿದ್ದುದೇ ಒಂದು ಸಾಧನೆಯಾಗಿದೆ. 

ಮುಖ್ಯಮಂತ್ರಿಗಳೇ ಹೇಳಿದಂತೆ ಅವರ ಸರ್ಕಾರ ಸಾಂದಭಿರ್ಕ ಶಿಶುವಾಗಿದ್ದು, ಆ ಕೂಸಿಗೆ ಯಾವುದೇ ಗೊತ್ತು ಗುರಿ ಇಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯ ಮೈತ್ರಿ ಸರ್ಕಾರ ಆರು ತಿಂಗಳು ಪೂರ್ಣಗೊಳಿಸಿರುವ ಬಗ್ಗೆ ಶುಕ್ರವಾರ ನಗರದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಯಡಿಯೂರಪ್ಪ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರ ಏನಾದರೂ ಕೊಡುಗೆ ನೀಡಿದ್ದರೆ, ಸಾಧನೆ ಮಾಡಿದ್ದರೆ ರೈತರೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ರೈತರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೇ ಹೊಣೆ. ಮುಖ್ಯಮಂತ್ರಿಗಳ ಹೆಸರು ಬರೆದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರದ ಮೇಲೆ ಮುಖ್ಯಮಂತ್ರಿಗಳಿಗೆ ಹಿಡಿತವೇ ಇಲ್ಲ. ಈವರೆಗಿನ ತಮ್ಮ ಅಧಿಕಾರಾವಧಿಯನ್ನು ಅರ್ಧ ಭಾಗ ದೇವಸ್ಥಾನ ಸುತ್ತುವುದರಲ್ಲಿ ಕಳೆದರೆ, ಇನ್ನರ್ಧ ಭಾಗ ಐಷಾರಾಮಿ ಹೋಟೆಲ್‌ನಲ್ಲಿ ವಿಶ್ರಾಂತಿಗಾಗಿ ಕಳೆದಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರ ಸಮಸ್ಯೆ ಆಲಿಸುವುದಾದರೂ ಎಲ್ಲಿ. ಮುಖ್ಯಮಂತ್ರಿಗಳು ಜನರಿಗೆ ಅದರಲ್ಲೂ ಮಹಿಳೆಯರು, ರೈತರಿಗೆ ಅವಮಾನ ಮಾಡುವುದು ಹಾಗೂ ದರ್ಪದ ಮಾತುಗಳನ್ನಾಡುವುದೇ ಸರ್ಕಾರದ ಸಾಧನೆಯಾಗಿದೆ. ರಾಜೀನಾಮೆ ಬಿಸಾಡುವುದಾಗಿ ಹೇಳಿ ಜನರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲ. ಸಮಸ್ಯೆ ಬಗೆಹರಿಸಲಾಗದ ಮುಖ್ಯಮಂತ್ರಿಗಳು, ರೈತರ ಕಬ್ಬಿನ ವಾಹನಗಳನ್ನು ತಡೆದರೆ ಒದ್ದು ಒಳಗೆ ಹಾಕಿ, ಹಿಂಡಲಗಾ ಜೈಲಿಗೆ ದಬ್ಬಿ ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ದುರಂಹಕಾರದ ಪರಮಾವಧಿ. ಕಳೆದ ವರ್ಷ ಕಬ್ಬಿನ ಬೆಲೆ ಬಾಬ್ತು ಪ್ರತಿ ಕ್ವಿಂಟಾಲ್‌ಗೆ 2,500 ರೂ. ಕೊಡುವ ಬದಲಿಗೆ 2,250 ರೂ. ನೀಡಿ ರೈತರನ್ನು ವಂಚಿಸಿದ್ದಾರೆ. ರೈತರ ಸಾಲ ಮನ್ನಾ ಎಂದು ಘೋಷಿಸಿದ್ದರೂ ಅನುಷ್ಠಾನವಾಗಿಲ್ಲ. ಈ ಯೋಜನೆಯಿಂದ ಎಲ್ಲ ಸಹಕಾರ ಸಂಘಗಳು ರೋಗಗ್ರಸ್ಥವಾಗಿದ್ದು, ಮುಚ್ಚುವ ಸ್ಥಿತಿಗೆ ತಲಪಿವೆ. ಇದು ಸರ್ಕಾರದ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಸರ್ಕಾರ ಎಷ್ಟು ದಿನ ಇರುತ್ತದೆ, ಹೋಗುತ್ತದೆ ಎಂಬುದು ಭಗವಂತನಿಗೆ ಮತ್ತು ಕಾಂಗ್ರೆಸ್ಸಿನವರಿಗೆ ಗೊತ್ತು. ಕಾಂಗ್ರೆಸ್‌ನವರ ಸಹನೆ ಮೆಚ್ಚುವಂತದ್ದು. ರಾಜ್ಯದ ಜನರಿಗೆ ಆಗುತ್ತಿರುವ ಎಲ್ಲ ಅನ್ಯಾಯ, ಸಮಸ್ಯೆಗಳಿಗೆ ಕಾಂಗ್ರೆಸ್‌ ನೇರ ಹೊಣೆ ಹೊರಬೇಕು. ಮುಂದೆ ಜನ ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಕ್ಕೆ ಪಾಠ ಕಲಿಸುವುದು ಖಚಿತ ಎಂದು ಹೇಳಿದ್ದಾರೆ.

ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣ ಕಾರ್ಯಕ್ರಮ, ಯೋಜನೆಗಳಿಗೆ ಅನುದಾನ ನೀಡಿಲ್ಲ. ಮುಖ್ಯವಾಗಿ ಭೂಮಿ ಖರೀದಿ, ಗಂಗಾ ಕಲ್ಯಾಣ, ಕೃಷಿ ಸಾಮಗ್ರಿ ಅಡಿ ಯಾವುದೇ ಯೋಜನೆಗಳಿಗೆ ಬಿಡಿಗಾಸು ನೀಡದೆ ವಂಚಿಸಿದೆ ಎಂದು ಕಿಡಿ ಕಾರಿದ್ದಾರೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.