ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸಲಿಲ್ಲ

Team Udayavani, Aug 7, 2017, 1:23 PM IST

kendra-sarkara-job.jpg

ಬೆಂಗಳೂರು: ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರಗಳಿಗೆ ಜನಸಾಮಾನ್ಯರ ಕಷ್ಟ ಅರ್ಥವಾಗುತ್ತಿಲ್ಲ ಎಂದು ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್‌ಸೇನ್‌ ಆಕ್ರೋಶ ವ್ಯಕ್ತಪಡಿಸಿದರು. ನಗರದ ಫ್ರೀಡಂಪಾರ್ಕ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಅಖೀಲ ಭಾರತ ಅಂಚೆ ನೌಕರರ ಸಂಘದ ಸಿ ದರ್ಜೆ ನೌಕರರ 31ನೇ ಅಧಿವೇಶನದ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರ ಜೀವನ ಸಂಕಷ್ಟಗಳು ಸರ್ಕಾರಗಳ ಗಮನಕ್ಕೆ ಬರುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿವೆ. ನಿರುದ್ಯೋಗ ಸಮಸ್ಯೆ ನಿವಾರಿಸಿ, ಉದ್ಯೋಗಾವಕಾಶಗಳು ಹೆಚ್ಚುವಂತೆ ಮಾಡಬೇಕಾದ ಜವಾಬ್ದಾರಿ ಇದ್ದರೂ ಉದ್ಯೋಗಗಳಿಗೆ ಮಾರಕವಾದ ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ದೇಶಾದ್ಯಂತ ಸುಮಾರು 2.50 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದ ಬಿಜೆಪಿ ಸರ್ಕಾರ, ಮೂರು ವರ್ಷಗಳಲ್ಲಿ 2 ಲಕ್ಷಕ್ಕೂ ಕಡಿಮೆ ಉದ್ಯೋಗ ಸೃಷ್ಟಿಸಿ ಕಾರ್ಮಿಕರ ವಿರೋಧಿಧೋರಣೆ ನಡೆಸುತ್ತಿದೆ. ಇದು ದೇಶದ ಆರ್ಥಿಕ ವ್ಯವಸ್ಥೆಯನ್ನು ಕುಸಿಯುವಂತೆ ಮಾಡುವ ಸಾಧ್ಯತೆ ಇದ್ದು, ಇದಕ್ಕೆ ಕೇಂದ್ರವೇ ನೇರ ಹೊಣೆ ಎಂದು ಹೇಳಿದರು. 

ಸಾರ್ವಜನಿಕರ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಸರ್ಕಾರ ವಿಫ‌ಲವಾಗಿದೆ. ಇದಕ್ಕೆ ಹೋರಾಟದಿಂದಲೇ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧವಾಗಿ ಮುಂದಿನ ದಿನಗಳಲ್ಲಿ ಸಿಐಟಿಯು ಬೃಹತ್‌ ಹೋರಾಟ ಸಂಘಟಿಸಲಿದೆ ಎಂದು ಎಚ್ಚರಿಸಿದರು.

ವಸತಿ ಸಚಿವ ಎಂ.ಕೃಷ್ಣಪ್ಪ, ಈ ಹಿಂದೆ ಫೋಸ್ಟ್‌ಮನ್‌ಗಳು ಮನೆಗಳನ್ನು ಹುಡುಕಿಕೊಂಡು ಬಂದು ಕಾಗದ, ಪತ್ರಗಳನ್ನು ತಲುಪಿಸುತ್ತಿದ್ದರು. ಇದೀಗ ಆಧುನಿಕ ತಂತ್ರಜ್ಞಾನ ಬಂದಿದ್ದು, ಅನೇಕ ಮಾಧ್ಯಮಗಳು ಕ್ಷಣದಲ್ಲಿ ಮಾಹಿತಿಯನ್ನು ತಲುಪಿಸುತ್ತಿವೆ. ಆದರೂ. ಅಂಚೆ ಇಂದಿಗೂ ಪ್ರಸ್ತುತವಾಗಿದೆ ಎಂದ ಅವರು, ಅಂಚೆ ಇಲಾಖೆ ನೌಕರರಿಗೆ ಬೆಂಗಳೂರು ಹಾಗೂ ಮಂಡ್ಯ ನಗರಗಳಲ್ಲಿ ನಿವೇಶನ ಸೌಕರ್ಯ ಕಲ್ಪಿಸಿಕೊಡಲು ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಭರವಸೆ ನೀಡಿದರು. 

ಸಮಾರಂಭದಲ್ಲಿ ಅಂಚೆ ಇಲಾಖೆ ಕಾರ್ಯದರ್ಶಿ ಎ.ಎನ್‌.ನಂದಾ, ಸಂಘದ ಕಾರ್ಯಾಧ್ಯಕ್ಷ ಎನ್‌.ಚಂದ್ರಶೇಖರ್‌, ವಿಚಾರಣಾ ಸಮಿತಿ ಅಧ್ಯಕ್ಷ ಪಿ.ಶ್ರೀಧರ್‌ ರೆಡ್ಡಿ, ಮುಖ್ಯ ಅಂಚೆ ಅಧಿಕಾರಿ ಚಾರ್ಲ್ಸ್‌ ಲೋಬೋ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಸಂಘದ ಬೇಡಿಕೆಗಳಿವು
ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಜನಸೇವೆಗೆ ಅಗತ್ಯವಿರುವ ಮೂಲಸೌಲಭ್ಯ ನೀಡಬೇಕು. ಸೇವಾನಿರತ ಸರ್ಕಾರಿ ನೌಕರರಿಗೆ ಅಗತ್ಯ ಸೌಕರ್ಯ ಒದಗಿಸಬೇಕು. 7ನೇ ವೇತನ ಆಯೋಗದ ಶಿಫಾರಸ್ಸನ್ನು ತಿದ್ದುಪಡಿ ಮಾಡಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಬೇಕು ಎಂಬುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸಂಘ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.