ಐಎಂಎ ಗ್ರೂಪ್‌ಗೆ ಕ್ಲೀನ್‌ಚಿಟ್ ನೀಡಿತ್ತು ಸಿಐಡಿ

ಕಾನೂನು ಕ್ರಮ ಜರುಗಿಸುವುದು ಅಸಾಧ್ಯ ಎಂದಿದ್ದ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿ

Team Udayavani, Jul 12, 2019, 7:28 AM IST

ಬೆಂಗಳೂರು: ಬಹುಕೋಟಿ ಐಎಂಎ ಹಗರಣ ಬೆಳಕಿಗೆ ಬರುವ ಮುನ್ನವೇ ಆ ಸಂಸ್ಥೆ ಪರವಾಗಿ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್‌ ವರದಿ ನೀಡಿದ ರೀತಿಯಲ್ಲೇ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಅಧಿಕಾರಿಗಳು ಸಹ ಪ್ರಸಕ್ತ ವರ್ಷದ ಆರಂಭದಲ್ಲೇ ಕಂಪನಿ ಪರವಾಗಿ ತನಿಖಾ ವರದಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಈ ವರದಿಯನ್ನು ಸಿಐಡಿಯ ಅಂದಿನ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿ ಆಗಿದ್ದ ಹೇಮಂತ್‌ ನಿಂಬಾಳ್ಕರ್‌ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿರುವುದು ಗೊತ್ತಾಗಿದೆ.

2017ರಲ್ಲಿ ಬೆಂಗಳೂರಿನ ಆರ್‌ಬಿಐ ಪ್ರಧಾನ ವ್ಯವಸ್ಥಾಪಕಿ ಕೆ.ಎಸ್‌.ಜೋಸ್ನಾ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆಗೆ ಪತ್ರ ಬರೆದು, ಐಎಂಎ ಸಮೂಹ ಸಂಸ್ಥೆಯು ನಿಯಮ ಮೀರಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಅಧಿಕಾರಿಗಳು, ದೂರುದಾರರು, ಮನ್ಸೂರ್‌ ಖಾನ್‌, ಕಂಪನಿಯ ಲೆಕ್ಕಪರಿಶೋಧಕರು ಸೇರಿದಂತೆ ಹತ್ತಾರು ಮಂದಿಯನ್ನು ವಿಚಾರಣೆ ನಡೆಸಿತ್ತು.

ಹಣಕಾಸು ಸಂಸ್ಥೆಯಲ್ಲ: ಈ ವೇಳೆ ‘ಕಂಪನಿಯು ಹಣಕಾಸು ಸಂಸ್ಥೆಯಾಗಿರುವುದಿಲ್ಲ. ಹಣಕಾಸಿನ ಸಂಸ್ಥೆಯಂದು ಯಾವುದೇ ಹೊಡಿಕೆದಾರರು ಹಣ ಹೂಡಿಕೆ ಮಾಡಿರುವುದಿಲ್ಲ. ಕಂಪನಿಯ ಸಾರ್ವಜನಿಕರನ್ನು ನಂಬಿಸಿ ಬಡ್ಡಿ, ಹೆಚ್ಚು ಲಾಭ ನೀಡುತ್ತೇನೆಂದು ಸಾರ್ವಜನಿಕರಿಂದ ಹಣವನ್ನು ಠೇವಣಿ ರೂಪದಲ್ಲಿ ಸಂಗ್ರಹಿಸಿ ಮೋಸ ಮಾಡಿರುವ ಬಗ್ಗೆ ಯಾವುದೇ ಪೂರಕ ಸಾಕ್ಷ್ಯಗಳು ಇಲ್ಲದ ಕಾರಣ ಮತ್ತು ಸಂಸ್ಥೆ ಹಾಗೂ ಸಹಭಾಗಿತ್ವದ ಸಂಸ್ಥೆಗಳು ವರ್ಷವಾರು ಆದಾಯ ಇಲಾಖೆಗೆ ಸಲ್ಲಿಸಿದ ಅಯವ್ಯಯ ಮಾಹಿತಿ ದಾಖಲೆಗಳು ಹಾಗೂ ಕಂಪನಿಯ ಪಾಲುದಾರ ಹಾಗೂ ಮುಖ್ಯಸ್ಥ ಮನ್ಸೂರ್‌ ಖಾನ್‌ ವೈಯಕ್ತಿಕ ಅಯವ್ಯಯವನ್ನು 2011ರಿಂದ 2018ರವರೆಗೆ ಪರಿಶೀಲಿಸಲಾಗಿದೆ. ಅಲ್ಲಿಯೂ ಯಾವುದೇ ನ್ಯೂನತೆಗಳು ವಿಚಾರಣೆ ವೇಳೆ ಕಂಡು ಬಂದಿಲ್ಲ. ಅಲ್ಲದೆ, ವೈಯಕ್ತಿಕವಾಗಿ ಠೇವಣಿ ನೀಡಿ ಮೋಸ ಹೋಗಿರುವುದಾಗಿ ಯಾರು ಹೇಳಿಕೆ ನೀಡಲು ಮುಂದೆ ಬಂದಿಲ್ಲ. ಹೀಗಾಗಿ ಕಂಪನಿಯ ವಿರುದ್ಧ ಯಾವುದೇ ಕಾನೂನು ಕ್ರಮಕೈಗೊಳ್ಳಲು ಸಾಧ್ಯವಿಲ್ಲ’ ಎಂದು ವರದಿ ನೀಡಿದ್ದರು.

ವಿಚಾರಣೆಗೆ ರೋಷನ್‌ ಬೇಗ್‌ ಗೈರು:

ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್‌.ರೋಷನ್‌ ಬೇಗ್‌ ಗುರುವಾರ ವಿಶೇಷ ತನಿಖಾ ದಳದ (ಎಸ್‌ಐಟಿ) ವಿಚಾರಣೆಗೆ ಗೈರಾಗಿದ್ದು, ಮೂರು ವಾರಗಳ ಗಡುವು ನೀಡುವಂತೆ ತನಿಖಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಆದರೆ, ಕಾಲವಕಾಶ ವಿಸ್ತರಿಸಲು ನಿರಾಕರಿಸಿರುವ ಎಸ್‌ಐಟಿ ಅಧಿಕಾರಿಗಳು, ಜು.15ರಂದು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಲೇಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಗೈರಾಗಿರುವುದಕ್ಕೆ ವಿವರಣೆ ನೀಡಿರುವ ಶಾಸಕ ರೋಷನ್‌ ಬೇಗ್‌, ತಮಗೆ ಅನಾರೋಗ್ಯ ಸಮಸ್ಯೆ ಇದ್ದು, ಹಜ್‌ ಯಾತ್ರೆ ಕೈಗೊಂಡಿದ್ದೇನೆ. ಹಾಗೆಯೇ ಕೆಲ ವೈಯಕ್ತಿಕ ಕಾರಣಗಳಿಗಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಹೀಗಾಗಿ ಖುದ್ದು ಹಾಜರಾಗಲು ಮೂರು ವಾರಗಳ ಗಡುವು ನೀಡುವಂತೆ ಮನವಿ ಮಾಡಿದ್ದರು. ಆದರೆ, ತನಿಖಾಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಐಎಂಎ ಮುಖ್ಯಸ್ಥ, ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ ಬಿಡುಗಡೆ ಮಾಡಿರುವ ಆಡಿಯೋದಲ್ಲಿ, ‘ಶಾಸಕ ರೋಷನ್‌ ಬೇಗ್‌ಗೆ 400 ಕೋಟಿ ರೂ. ಕೊಟ್ಟಿದ್ದೇನೆ. ಅವರ ಕಾಟದಿಂದಲೇ ದೇಶ ಬಿಡಬೇಕಾಯಿತು,’ ಎಂದು ಆತ ಹೇಳಿದ್ದ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಜು.9ರಂದು ರೋಷನ್‌ ಬೇಗ್‌ಗೆ ನೋಟಿಸ್‌ ನೀಡಿತ್ತು. ಜತೆಗೆ ಜು.11ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಹಣ ಹೂಡಲು ಪ್ರಚೋದನೆ: ಮೌಲ್ವಿ ಬಂಧನ

ಐಎಂಎ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಮೌಲ್ವಿಯೊಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.ಶಿವಾಜಿನಗರದ ಒಪಿಎಚ್ ರಸ್ತೆಯಲ್ಲಿರುವ ಬೇಪಾರಿಯನ್‌ ಮಸೀದಿಯ ಧರ್ಮಗುರು ಹನೀಫ್ ಅಫ‌್ಸರ್‌ ಅಜೀಜಿ ಎಂಬವರನ್ನು ಬಂಧಿಸಲಾಗಿದೆ. ಆರೋಪಿ ಧರ್ಮ ಗುರುವಾಗಿದ್ದು, ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ವಂಚಕ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂತೆ ಸಾವಿರಾರು ಮಂದಿಗೆ ಪ್ರಚೋದಿಸಿದ್ದ. ಈ ಆರೋಪದ ಮೇಲೆ ಮೌಲ್ವಿಯನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.ಆರೋಪಿಯು ಮೌಲ್ವಿಯಾಗಿದ್ದರಿಂದ ಆತನ ಮಾತು ನಂಬಿದ ಸಾವಿರಾರು ಮಂದಿ ಲಕ್ಷಗಟ್ಟಲೇ ಹಣ ಹೂಡಿಕೆ ಮಾಡಿದ್ದರು. ಅದಕ್ಕಾಗಿ ಮನ್ಸೂರ್‌ ಖಾನ್‌ 2017ರಲ್ಲಿ ಎಚ್ಬಿಆರ್‌ ಲೇಔಟ್‌ನಲ್ಲಿ ಮೂರು ಕೋಟಿ ರೂ. ಮೌಲ್ಯದ ಮನೆಯೊಂದನ್ನು ಖರೀದಿಸಿ ಉಡುಗೊರೆ ರೂಪದಲ್ಲಿ ಮೌಲ್ವಿಗೆ ಕೊಟ್ಟಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್‌ಐಟಿ ತಿಳಿಸಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುವ ಸುರೇಶ್‌, ಮೈಸೂರು ರಸ್ತೆಗೆ ಬಂದಿಳಿದಾಗ ರಾತ್ರಿ 12 ಗಂಟೆ. ಅಲ್ಲಿಂದ ಆರ್‌.ಆರ್‌. ನಗರದಲ್ಲಿರುವ ಮನೆಗೆ...

  • ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆ ಹಾಗೂ ಬೈಲಾ ನಿಯಮಾವಳಿ ಉಲ್ಲಂಘಿಸಿ ನಿರ್ಮಾಣವಾಗಿರುವ ಕಟ್ಟಡಗಳ ಮಾಲೀಕರಿಂದ ಆಸ್ತಿ...

  • ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಫ‌ಲಪುಷ್ಪ ಪ್ರದರ್ಶನಕ್ಕೆ ಚಾಲನೆ ದೊರೆಕಿದ್ದು, ಗಾಜಿನಮನೆಯಲ್ಲಿ ವಿವೇಕಾನಂದರ ಸ್ಮಾರಕ, ವಿವೇಕವಾಣಿ,...

  • ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರ್ಕಾರ ಆರಂಭಿಸಿದ್ದ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ "ಬಡವರ ಬಂಧು' ಈಗ ಕಷ್ಟದಲ್ಲಿರುವ...

  • ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದ ಅಬಕಾರಿ ಆದಾಯದಲ್ಲಿ ನೆರೆಯ ಆಂಧ್ರಪ್ರದೇಶದ ಗ್ರಾಹಕರ ಪಾಲು ಸೇರಿದೆ. ಹೌದು, ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆ ಶೇ.20...

ಹೊಸ ಸೇರ್ಪಡೆ