ವಿವಾದ “ಹೈಕೋರ್ಟ್’ ಅಂಗಳಕ್ಕೆ
Team Udayavani, Jan 6, 2018, 7:30 AM IST
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಇದೀಗ ಹೈಕೋರ್ಟ್ ಅಂಗಳಕ್ಕೆ ಬಂದು ತಲುಪಿದೆ. ಪ್ರತ್ಯೇಕ ಧರ್ಮ ಮಾನ್ಯತೆ ಕುರಿತ ಸಾಧಕ ಬಾಧಕಗಳನ್ನು ಚರ್ಚಿಸಿ ವರದಿ ನೀಡುವ ಸಲುವಾಗಿ ರಾಜ್ಯ ಅಲ್ಪಸಂಖ್ಯಾತರ ಆಯೋಗ ರಚಿಸಿದ ತಜ್ಞರ ಸಮಿತಿ ಶನಿವಾರ ನಡೆಸಲಿರುವ ಸಭೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಆದರೆ, ತಜ್ಞರ ಸಮಿತಿ ಕೈಗೊಳ್ಳುವ ಯಾವುದೇ ನಿರ್ಧಾರಗಳು ನ್ಯಾಯಾಲಯದ ಅಂತಿಮ ಆದೇಶದ ವ್ಯಾಪ್ತಿಗೆ ಒಳಪಟ್ಟಿರುತ್ತದೆ ಎಂದು ಹೇಳಿದೆ. ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ವರ್ಗಾಯಿಸಿದ ರಾಜ್ಯ ಸರ್ಕಾರದ ಕ್ರಮ ಮತ್ತು ಮಾನ್ಯತೆ ನೀಡುವ ವಿಚಾರದ ಬಗ್ಗೆ ವರದಿ ನೀಡಲು ನಿವೃತ್ತ ನ್ಯಾ. ಎಚ್.ಎನ್ .ನಾಗಮೋಹನ ದಾಸ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಕಾರ್ಯದರ್ಶಿ ಆದೇಶ ಪ್ರಶ್ನಿಸಿ ಹೈ ಕೋರ್ಟ್ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿ 2 ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿತು.
ಸಮಿತಿ ಸಭೆ ಇಂದು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಕುರಿತು ಸರ್ಕಾರ ನೇಮಿಸಿರುವ ತಜ್ಞರ ಸಮಿತಿಯ ಮೊದಲ ಸಭೆ ಶನಿವಾರ ನಡೆಯಲಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಲಿದೆ. ಲಿಂಗಾಯತ ಹಾಗೂ ವೀರಶೈವ ಮುಖಂಡರು ಪ್ರತ್ಯೇಕವಾಗಿ ಸರ್ಕಾರಕ್ಕೆ
ಮಾಡಿಕೊಂಡಿರುವ ಮನವಿಗಳ ಆಧರಿಸಿಯೇ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ