ಅಂತ್ಯಕ್ರಿಯೆಗೆ ಹೊರಟಿದ್ದ ಮಹಿಳೆ ಸಾವು


Team Udayavani, Sep 9, 2019, 3:00 AM IST

Udayavani Kannada Newspaper

ಬೆಂಗಳೂರು: ಪಾವಗಡದಲ್ಲಿ ಮೃತಪಟ್ಟಿದ್ದ ದೊಡ್ಡಮ್ಮನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮಹಿಳೆ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದು, ಇಬ್ಬರು ಸಹೋದರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಕೂಡ್ಲುಗೇಟ್‌ ನಿವಾಸಿ ಕೆ.ಕೆ.ಸಂಧ್ಯಾ (22) ಮೃತರು. ಘಟನೆಯಲ್ಲಿ ಸಂಧ್ಯಾ ಸಹೋದರರಾದ ಶಶಿಕುಮಾರ್‌ ಹಾಗೂ ಸಂತೋಷ್‌ ಕುಮಾರ್‌ ಗಾಯಗೊಂಡಿದ್ದಾರೆ. ಘಟನೆ ಬಳಿಕ ಟಿಪ್ಪರ್‌ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಮೂವರು ಒಂದೇ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‌ ಧರಿಸದೆ ಪ್ರಯಾಣಿಸುತ್ತಿದ್ದರು ಎಂದು ಸಂಚಾರ ಪೊಲೀಸರು ಹೇಳಿದರು.

ವಿವಾಹಿತರಾಗಿರುವ ಸಂಧ್ಯಾ ಅವರು, ಪತಿ ಹಾಗೂ ಸಹೋದರರ ಜತೆ ಕೂಡ್ಲುಗೇಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ತುಮಕೂರಿನ ಪಾವಗಡದಲ್ಲಿರುವ ದೊಡ್ಡಮ್ಮ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಧ್ಯಾ ದೊಡ್ಡಮ್ಮನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಹೋದರರ ಜತೆ ಬೈಕ್‌ನಲ್ಲಿ ಭಾನುವಾರ ಮುಂಜಾನೆ ಹೊರಟಿದ್ದರು. ಶಶಿಕುಮಾರ್‌ ಬೈಕ್‌ ಚಾಲನೆ ಮಾಡುತ್ತಿದ್ದರು.

ಗೂಟ್ಟಿಗೆರೆ ಸಮೀಪದ ಟಿ.ಜಾನ್‌ ಕಾಲೇಜು ಬಳಿ ವೇಗವಾಗಿ ಬಂದ ಟಿಪ್ಪರ್‌ ಲಾರಿ, ಬೈಕ್‌ಗೆ ಡಿಕ್ಕಿಯಾಗಿದೆ. ಕೆಳಗೆ ಬಿದ್ದ ಸಂಧ್ಯಾ ಅವರ ಮೇಲೆ ಟಿಪ್ಪರ್‌ ವಾಹನ ಹರಿದು ಸ್ಥಳದಲ್ಲಿಯೇ ಆಕೆ ಮೃತಪಟ್ಟಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದರು. ಪ್ರಕರಣ ಹುಳಿಮಾವು ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ವ್ಯಕ್ತಿ ಸಾವು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಂದ್ರ ಭೋರಾ(44) ಎಂಬವರು ಚಿಕಿತ್ಸೆ ಫ‌ಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಸದಾಶಿವನಗರ ಸಂಚಾರ ಠಾಣೆ ವ್ಯಾಪ್ತಿಯ ನ್ಯೂ ಬಿಇಎಲ್‌ ರಸ್ತೆಯ ಕ್ರೋಮಾ ಶೋರೂಂ ಬಳಿ ಸೆ.1ರಂದು ರಾತ್ರಿ 10.30ರ ಸುಮಾರಿಗೆ ಅಪರಿಚಿತ ವಾಹನವೊಂದು ರಾಜೇಂದ್ರ ಭೋರಾ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಪ್ರಕರಣ ಸದಾಶಿವನಗರ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ಮಹಿಳೆ ಸಾವು: ಪ್ರಕರಣದಲ್ಲಿ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನೀರಿನ ಟ್ಯಾಂಕರ್‌ ಹರಿದು ಮಹಿಳೆಯೊಬ್ಬರ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೋನಿಕಾ(24) ಮೃತರು. ಕೃತ್ಯ ಎಸಗಿದ ನೀರಿನ ಟ್ಯಾಂಕರ್‌ ಚಾಲಕ ನವೀನ್‌ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ವಾಹನ ಜಪ್ತಿ ಮಾಡಿದ್ದು, ತನಿಖೆ ಮುಂದುವರಿದಿದೆ.

ಮೋನಿಕಾ ಅವರು ಬನ್ನೇರುಘಟ್ಟದ ರಸ್ತೆಯಲ್ಲಿರುವ ವೀವರ್ಸ್‌ ಕಾಲೋನಿಯಲ್ಲಿ ತಂದೆ ಜತೆ ವಾಸವಾಗಿದ್ದು, ಮನೆಯ ಟ್ಯಾಂಕ್‌ನಲ್ಲಿ ನೀರು ಖಾಲಿಯಾಗಿತ್ತು. ಹೀಗಾಗಿ ಖಾಸಗಿ ನೀರು ಟ್ಯಾಂಕರ್‌ಗೆ ಹೇಳಿದ್ದರು. ಸ್ಥಳಕ್ಕೆ ಬಂದ ಚಾಲಕ ನವೀನ್‌, ಟ್ಯಾಂಕರ್‌ನ್ನು ಹಿಮ್ಮುಖವಾಗಿ ಚಲಾಯಿಸುವಾಗ ಹಿಂಬದಿ ನಿಂತಿದ್ದ ಮೋನಿಕಾಗೆ ಡಿಕ್ಕಿ ಹೊಡೆದು, ಅವರ ಹೊಟ್ಟೆಯ ಮೇಲೆ ಹರಿದಿದೆ.

ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಆರೋಪಿ ನವೀನ್‌ ಟ್ಯಾಂಕರ್‌ ಬಿಟ್ಟು ಪರಾರಿಯಾಗಿದ್ದಾನೆ ಎಂದು ಕೆ.ಎಸ್‌.ಲೇಔಟ್‌ ಸಂಚಾರ ಠಾಣೆ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26post

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಇ-ಬೈಕ್ ಮೂಲಕ ಅಂಚೆ ವಿತರಣೆ

high court

ಅನಧಿಕೃತ ಕಟ್ಟಡ ಮುಲಾಜಿಲ್ಲದೆ ಕೆಡವಿ..!

ದೀಪಾವಳಿ psd

ಪೂರ್ವಿಕಾ ದೀಪಾವಳಿ ಮೆಗಾ ಡೀಲ್‌

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

ಸ್ನೇಹಿತರ ವಿರುದ್ಧ ವೇ ನಟಿ ಸಂಜನಾ ದೂರು

ಸ್ನೇಹಿತರ ವಿರುದ್ಧವೇ ನಟಿ ಸಂಜನಾ ದೂರು

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.