ನಿಪ ನಸುಳದಂತೆ ಜಿಲ್ಲಾಡಳಿತ ಮುನ್ನಚ್ಚರಿಕೆ

Team Udayavani, May 25, 2018, 11:52 AM IST

nipah.jpg

ಬೆಂಗಳೂರು: ಕೇರಳ ಸೇರಿದಂತೆ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜಧಾನಿ ಬೆಂಗಳೂರಿನಲ್ಲಿ “ನಿಪ’ (ಬಾವಲಿ ಜ್ವರ) ನುಸುಳದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿರುವ ನಗರ ಜಿಲ್ಲಾಡಳಿತ, ಈ ಸಂಬಂಧ ಎಲ್ಲ ಪ್ರಮುಖ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

ಕಳೆದ ಹತ್ತು-ಹದಿನೈದು ದಿನಗಳಲ್ಲಿ ಪ್ರಮುಖ ಆಸ್ಪತ್ರೆಗಳಲ್ಲಿ ನಗರದಲ್ಲಿರುವ ಕೇರಳ ವಲಸಿಗರು ಅಥವಾ ಕೇರಳಕ್ಕೆ ಭೇಟಿ ನೀಡಿದವರು ರೋಗಿಗಳಾಗಿ ಚಿಕಿತ್ಸೆ ಪಡೆದವರ ಮಾಹಿತಿ ಸಂಗ್ರಹಿಸಬೇಕು. ಅಂತಹವರನ್ನು ಪ್ರತ್ಯೇಕವಾಗಿಟ್ಟು, ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಕೆ. ದಯಾನಂದ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಇದುವರೆಗೆ ಯಾವುದೇ ಶಂಕಿತ ನಿಪ ಪ್ರಕರಣಗಳು ಪತ್ತೆಯಾಗಿಲ್ಲ. ಆದಾಗ್ಯೂ ನಗರದಲ್ಲಿ ವಲಸಿಗರ ಸಂಖ್ಯೆ ಹೆಚ್ಚಿದೆ. ಅದರಲ್ಲೂ ಕೇರಳ ಮೂಲದವರು ಅಧಿಕವಾಗಿ ಇದ್ದಾರೆ. ನಿಪ ಪತ್ತೆಯಾಗಿದ್ದು ಕೂಡ ಅದೇ ರಾಜ್ಯದಿಂದ.

ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮಂಗಳೂರಿನಲ್ಲಿ ಎರಡು ಶಂಕಿತ ಪ್ರಕರಣಗಳನ್ನು ಹೊರತುಪಡಿಸಿದರೆ, ಯಾವುದೇ ಪ್ರಕರಣ ಪತ್ತೆ ಆಗಿಲ್ಲ. ಇದೊಂದು ಮುನ್ನೆಚ್ಚರಿಕೆ ಕ್ರಮ ಅಷ್ಟೇ. ಯಾರೂ ಆತಂಕಪಡಬೇಕಿಲ್ಲ ಎಂದು ದಯಾನಂದ ಸ್ಪಷ್ಟಪಡಿಸಿದರು.

“ಸೋಂಕಿತರು ಬದುಕುವ ಸಾಧ್ಯತೆ ಕಡಿಮೆ’: “ನಿಪ’ ವೈರಸ್‌ ದೇಹವನ್ನು ಪ್ರವೇಶಿಸಿದ ವ್ಯಕ್ತಿ ಬದುಕಿ ಉಳಿಯುವ ಸಾಧ್ಯತೆ ತುಂಬಾ ಕಡಿಮೆ. ಆದರೆ, ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡಿದರೆ, ಪ್ರಾಣಾಪಾಯದಿಂದ ಪಾರು ಮಾಡಬಹುದು. ಅದೇನೇ ಇರಲಿ, ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಕಾಯಿಲೆ ಬರದಂತೆ ತಡೆಯುವುದು ಇದರ ಉದ್ದೇಶ.

ಈ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಮಾತ್ರವಲ್ಲದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶುಸಂಗೋಪನೆ, ಬಿಬಿಎಂಪಿ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ರೋಗಿಗಳ ಪರೀಕ್ಷೆ, ಚಿಕಿತ್ಸೆ ಮತ್ತಿತರ ಕಾರಣಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೇಕಾಬಿಟ್ಟಿ ದರ ವಿಧಿಸುವಂತಿಲ್ಲ. “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ’ ಜಾರಿಯಲ್ಲಿದ್ದು, ಈ ಮಸೂದೆಯ ಸೆಕ್ಷನ್‌ 10ರ ಪ್ರಕಾರ ಚಿಕಿತ್ಸೆಯ ದರಪಟ್ಟಿಯನ್ನು ರೋಗಿಗಳಿಗೆ ಕಾಣುವಂತೆ ಫ‌ಲಕಗಳಲ್ಲಿ ಹಾಕಿರಬೇಕು. ನಿಗದಿತ ದರಕ್ಕಿಂತ ಹೆಚ್ಚು ವಸೂಲಿ ಮಾಡಿದ್ದು ಕಂಡುಬಂದರೆ, ನಮಗೆ ದೂರು ಸಲ್ಲಿಸಬಹುದು.

ಅಂತಹ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಾಯವಾಣಿ 104ಕ್ಕೆ ಕರೆ ಮಾಡುವ ಮೂಲಕ ದೂರು ಸಲ್ಲಿಸಬಹುದು ಎಂದೂ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಮೇಶ್‌ಬಾಬು, ಅಧಿಕಾರಿಗಳಾದ ಡಾ.ಷರೀಫ್, ಡಾ.ಮಹೇಶ್‌, ಉಲ್ಲಾಸ್‌ ಬಿ. ಗಂಗನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು. 

4 ಡೆಂಘೀ, 3 ಚಿಕುನ್‌ಗುನ್ಯ ಪತ್ತೆ: ಸರ್ವೇಕ್ಷಣಾಧಿಕಾರಿ (ಸಾಂಕ್ರಾಮಿಕ ರೋಗಗಳ ವಿಭಾಗ) ಡಾ.ಟಿ.ಕೆ. ಸುನಂದ ಮಾತನಾಡಿ, ಸಾಂಕ್ರಾಮಿಕ ರೋಗ ಡೆಂಘೀ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು. ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಜನವರಿಯಿಂದ ಏಪ್ರಿಲ್‌ ಅಂತ್ಯದವರೆಗೆ 12 ಶಂಕಿತ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ನಾಲ್ಕು ಪ್ರಕರಣಗಳು ದೃಢಪಟ್ಟಿವೆ.

ಇದೇ ಅವಧಿಯಲ್ಲಿ 3 ಚಿಕುನ್‌ಗುನ್ಯ ಪ್ರಕರಣಗಳು ಕೂಡ ದೃಢಪಟ್ಟಿವೆ. ಡೆಂಘೀ ನಿಯಂತ್ರಣದಲ್ಲಿ ಈಡಿಸ್‌ ಲಾರ್ವಾ ಉತ್ಪತ್ತಿ ತಾಣ ನಾಶಗೊಳಿಸುವುದೇ ಮೂಲಮಂತ್ರವಾಗಿದ್ದು, ಆರೋಗ್ಯ ಸಹಾಯಕರು ನಿತ್ಯ 60 ಮನೆಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುತ್ತಾರೆ. ಕಳೆದ ನಾಲ್ಕು ತಿಂಗಳಲ್ಲಿ 5.57 ಲಕ್ಷ ಮನೆಗಳಿಗೆ ಭೇಟಿ ನೀಡಿದ್ದು, 11.58 ಲಕ್ಷ ನೀರಿನ ಸಂಗ್ರಹಾಗಾರಗಳಲ್ಲಿ ಈಡಿಸ್‌ ಲಾರ್ವಾ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.