8 ಮಹಿಳೆಯರ ಕೊಂದಿದ್ದ ವಿಕೃತಕಾಮಿ ಬಂಧನ

Team Udayavani, May 31, 2018, 10:36 AM IST

blore-4.jpg

ರಾಮನಗರ: ಲೈಂಗಿಕ ಕ್ರಿಯೆ ನಂತರ ಮಹಿಳೆಯರನ್ನು ಅಮಾನುಷವಾಗಿ ಕೊಂದು ಪರಾರಿಯಾಗುತ್ತಿದ್ದ ಸೈಕೋ ಹಂತಕ, ದೊರೆ ಆಲಿಯಾಸ್‌ ಕಪ್ಪಲ್‌ ದೊರೆ (46) ಎಂಬಾತನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತನ್ನ ಪತ್ನಿಯೂ ಸೇರಿ ಇದುವರೆಗೆ ಈತ 8 ಮಹಿಳೆಯರನ್ನು ಕೊಂದಿದ್ದಾನೆ. 

ತಮಿಳುನಾಡಿನ ವಿ.ಪುರಂ ಜಿಲ್ಲೆಯ ಕಲ್ಲುಕುರ್ಚಿ ತಾಲೂಕಿನ ಕಪ್ಪಲ್‌ ದೊರೆ, 20 ವರ್ಷಗಳ ಹಿಂದೆ ಕೆಲಸಕ್ಕೆಂದು ಬೆಂಗಳೂರಿಗೆ ಬಂದು, ಆಂಧ್ರಹಳ್ಳಿಯಲ್ಲಿ ವಾಸವಿದ್ದ. ವಿಕೃತಕಾಮಿಯಾಗಿರುವ ಈತ, ಬ್ಯಾಡರಹಳ್ಳಿ, ಪೀಣ್ಯ ಪೊಲೀಸ್‌ ಠಾಣೆಗಳ ವ್ಯಾಪ್ತಿ ಮತ್ತು ತಮಿಳುನಾಡಿನ ವಿವಿಧೆಡೆ ಮಹಿಳೆಯರ ಹತ್ಯೆ ಮಾಡಿದ್ದಾನೆ.

ಬೆಂಗಳೂರಿನ ಮೆಜೆಸ್ಟಿಕ್‌, ಮಾರ್ಕೆಟ್‌, ತಮಿಳುನಾಡಿನ ವಿ.ಪುರಂ ಜಿಲ್ಲೆಯ ಹಲವೆಡೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಮಹಿಳೆಯರನ್ನು ಸಂಪರ್ಕಿಸಿ ಹಣ ಕೊಡುವುದಾಗಿ, ಆಶ್ರಯ ನೀಡುವುದಾಗಿ ನಂಬಿಸಿ ಬ್ಯಾಡರಹಳ್ಳಿ ಮತ್ತು ಪೀಣ್ಯ ಪೊಲೀಸ್‌ ಠಾಣೆಗಳ ವ್ಯಾಪ್ತಿಗೆ ಕರೆದೊಯ್ದು ಅತ್ಯಾಚಾರ ಮಾಡುತ್ತಿದ್ದ. ನಂತರ ಉಸಿರುಗಟ್ಟಿಸಿ ಅಥವಾ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡುತ್ತಿದ್ದ. 2010ನೇ ಸಾಲಿನಿಂದ ಇಲ್ಲಿಯವರೆಗೆ ಇದೇ ಮಾದರಿಯಲ್ಲಿ ಎಂಟು ಕೊಲೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ.

ಮೂರು ವರ್ಷ ಜೈಲಿನಲ್ಲಿದ್ದ: ಆರೋಪಿಯನ್ನು ಸೆರೆಹಿಡಿದಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್ಪಿ ಬಿ.ರಮೇಶ್‌, 2002ರಲ್ಲಿ ಬೆಂಗಳೂರಿನ ವಿಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಕೊಲೆಗೆ ಯತ್ನಿಸಿ ಕಪ್ಪಲ್‌ ದೊರೆ ಸಿಕ್ಕಿಬಿದ್ದಿದ್ದ. ಈ ವೇಳೆ 3 ವರ್ಷ ಜೈಲು ಶಿಕ್ಷೆ ಕೂಡ ಅನುಭವಿಸಿದ್ದ. 2013ರ ಫೆಬ್ರವರಿಯಲ್ಲಿ ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸಿಂಡಿಕೇಟ್‌ ಬ್ಯಾಂಕ್‌ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ 22 ವರ್ಷ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಪ್ರಯತ್ನಿಸಿ, ಯುವತಿ ಸತ್ತು ಹೋಗಿದ್ದಾಳೆ ಎಂದು ಭಾವಿಸಿ ಓಡಿ ಹೋಗಿದ್ದ.

ಆದರೆ, ಸಾರ್ವಜನಿಕರು ಯುವತಿಯನ್ನು ರಕ್ಷಿಸಿದ್ದರು. ನಂತರ ಸಂತ್ರಸ್ತೆ ಆರೋಪಿಯ ಗುರುತು ಪತ್ತೆ ಹಚ್ಚಿದ್ದರಿಂದ ಪೊಲೀಸರು ಮತ್ತೆ ಈತನನ್ನು ಬಂಧಿಸಿದ್ದರು. ಪ್ರಕರಣ ಇದೀಗ ನ್ಯಾಯಾಲಯದಲ್ಲಿದೆ. ಜಾಮೀನಿನ ಮೇಲೆ ಹೊರ ಬಂದಿರುವ ಕಪ್ಪಲ್‌ ದೊರೆ, ನಂತರವೂ ತನ್ನ ಕುಕೃತ್ಯಗಳನ್ನು ಮುಂದುವರಿಸಿದ್ದ. ಈತ ತಮಿಳುನಾಡಿನಲ್ಲಿ ವಾಸವಿದ್ದ ವೇಳೆ ತನ್ನ ಪತ್ನಿಯನ್ನು ಕೊಲೆ ಮಾಡಿ ಕಾರಾಗೃಹವಾಸ ಅನುಭವಿಸಿದ್ದ. ಸದರಿ ಪ್ರಕರಣದ ಬಗ್ಗೆಯೂ ಮಾಹಿತಿ
ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ಸಿಕ್ಕಿ ಬಿದ್ದಿದ್ದು ಹೇಗೆ?
2018ರ ಮೇ 21ರಂದು ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಘವೇಂದ್ರ  ನಗರದಲ್ಲಿ ಅಪರಿಚಿತ ಮಹಿಳೆ ಶವ ದೊರೆತಿತ್ತು. ಮಹಿಳೆಯ ಉಸಿರುಗಟ್ಟಿಸಿ ಕೊಂದಿರುವುದು ವೈದ್ಯಕೀಯ ವರದಿಯಿಂದ ಖಾತ್ರಿಯಾಗಿತ್ತು. ಪ್ರಕರಣ ದಾಖಲಾದ ನಂತರ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿತ್ತು. ಆರೋಪಿ ಕಪ್ಪಲ್‌ ದೊರೆ ಈ ಕೊಲೆ ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ತಮಿಳುನಾಡು ಗಡಿ ಭಾಗದ ಅತ್ತಿಬೆಲೆ ಚೆಕ್‌ ಪೋಸ್ಟ್‌ ಬಳಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಎಸ್ಪಿ ರಮೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿ ಪುರುಷೋತ್ತಮ, ಸಿಪಿಐ
ಕೆ.ಪಿ.ಸತ್ಯನಾರಾಯಣ, ನಿಸ್ತಂತು ವಿಭಾಗದ ಸಿಪಿಐ ಶಿವಶಂಕರ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.