ಹಬ್ಬ ರಾಜಕೀಯ ಲಾಭವಾಗದಿರಲಿ

Team Udayavani, Aug 22, 2017, 12:08 PM IST

siddu.jpg

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೌರಿ-ಗಣೇಶ ಮತ್ತು ಬಕ್ರೀದ್‌ ಹಬ್ಬದ ವೇಳೆ ಸಂಭವಿಸಬಹುದಾದ ಅಹಿತಕರ ಘಟನೆಗಳನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆದುಕೊಳ್ಳಲು ಕೆಲವರು ಯತ್ನಿಸುವ ಸಾಧ್ಯತೆಯಿದೆ. ಹೀಗಾಗಿ ಮುಂಜಾಗ್ರತೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೌರಿ-ಗಣೇಶ ಮತ್ತು ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ವಿಧಾನಸೌಧದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಹಬ್ಬದ ವೇಳೆ ಸಣ್ಣ ಅಹಿತಕರ ಘಟನೆಗಳನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆಯಲು ಕೆಲವರು ಪ್ರಯತ್ನಿಸಬಹುದು.

ಅಂತಹ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು.  ಗಣಪತಿ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಶಾಂತಿ ಕದಡಬಹುದಾದ ಸಮಾಜ ಘಾತುಕ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ಇಡಬೇಕು. ಅಗತ್ಯವಿದ್ದರೆ ಬಂಧಿಸಬೇಕು ಎಂದು  ಸೂಚಿಸಿದರು.

ಗಣಪತಿ ವಿಸರ್ಜನೆ ವೇಳೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು. ಕೆರೆ, ನದಿಯಲ್ಲಿ ಗಣಪತಿ ವಿಸರ್ಜಿಸುವಾಗ ಜೀವರಕ್ಷಕ ಸಾಧನಗಳು ಕಡ್ಡಾಯವಾಗಿ ಬಳಸುವಂತೆ ನೋಡಿಕೊಳ್ಳಬೇಕು. ಪೊಲೀಸ್‌ ಗಸ್ತು ಬಿಗಿಯಾಗಿರಬೇಕು. ಮತೀಯ ಶಕ್ತಿಗಳ ಮೇಲೂ ಕಣ್ಣಿಡಬೇಕು. ಎಲ್ಲೆಡೆ ಶಾಂತಿ ಸಭೆಗಳನ್ನು ನಡೆಸಬೇಕು ಎಂದರು.ಹಬ್ಬದ ಆಚರಣೆ ವೇಳೆ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು.

ಉಸ್ತುವಾರಿ ಎಡಿಜಿಪಿಗಳು ತಮಗೆ ನಿಗದಿಪಡಿಸಿರುವ ಜಿಲ್ಲೆಗಳಿಗೆ ಭೇಟಿ ಕೊಡಬೇಕು. ಆಯಾ ಜಿಲ್ಲೆಯ ಕಮೀಷನರೇಟ್‌ ಉಸ್ತುವಾರಿ ಹೊಂದಿರುವ ಅಧಿಕಾರಿಗಳು ಆಗಾಗ್ಗೆ ಮೇಲ್ವಿಚಾರಣೆ ನಡೆಸುವ ಮೂಲಕ ಶಾಂತಿ ಕಾಪಾಡಬೇಕು. ತಮ್ಮ ಅಧೀನದ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯದ ಮೇಲಿರುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಹಿರಿಯ ಪೊಲೀಸ್‌ ಅಧಿಕಾರಿಗಳು ತಾವು ಈಗಾಗಲೇ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ವಿವರ ನೀಡಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.