ಬಾಲಕಿ ಮೇಲೆ ಅತ್ಯಾಚಾರ,ಹತ್ಯೆ ಖಂಡಿಸಿ ಪ್ರತಿಭಟನೆ
Team Udayavani, Dec 22, 2017, 10:10 AM IST
ಬೆಂಗಳೂರು: ವಿಜಯಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಮತ್ತು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ದಸಂಸ ಟೌನ್ಹಾಲ್ ಮುಂದೆ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು. ಸಮಿತಿ ರಾಜ್ಯಾಧ್ಯಕ್ಷ ಡಾ.ಸಿಎಸ್.ರಘು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, ರಾಜ್ಯದಲ್ಲಿ ದಲಿತರ ಮೇಲೆ ಬಹಳಷ್ಟು ಶೋಷಣೆ ನಡೆಯುತ್ತಿದ್ದರೂ ರಾಜಕೀಯ ಪಕ್ಷಗಳು ದನಿ ಎತ್ತುತ್ತಿಲ್ಲ.
ಅಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇದರ ಪರಿಣಾಮ ವಿಜಯಪುರದಲ್ಲಿ ಬಾಲಕಿಯನ್ನು ಶಾಲೆಯ ಸಮೀಪವೇ ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದರು. ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಹಳಷ್ಟು ಪ್ರಭಾವಿಗಳ ಕೈವಾಡವಿದ್ದು, ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ