ಬೀದಿ ವ್ಯಾಪಾರಿಗಳಿಗೆ ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸಿದ ಸರ್ಕಾರ

Team Udayavani, Dec 10, 2021, 11:26 AM IST

road side retailers

 ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸುವುದರ ಜತೆಗೆ ಅವರ ಜೀವನ ಸುಧಾರಣೆಗೆ ಸರ್ಕಾರ ಮುಂದಾಗಿದೆ. ಇದರಿಂದಾಗಿ, ಹಲವು ವರ್ಷಗಳಿಂದ ಗುರುತಿನ ಚೀಟಿಯಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತ ರಾಗಿ ದಿನ ಕಳೆಯುತ್ತಿದ್ದ ಸಾವಿರಾರು ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗಲಿದೆ.

ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆ ಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರು ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಯನ್ನು ನಡೆಸಿ, ಅರ್ಹ ಎಲ್ಲಾ ಬೀದಿ ಬದಿ ವ್ಯಾಪಾರಿ ಗಳಿಗೆ ಮಾರಾಟ ಪ್ರಮಾಣ ಪತ್ರವನ್ನು ವಿತರಿಸುವಂತೆ ಜಿಲ್ಲಾ ವಾರು ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಜಿಲ್ಲಾ ಕೌಶಲ್ಯ ಮಿಷನ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:- ಭಾರತದಲ್ಲಿ 24ಗಂಟೆಗಳಲ್ಲಿ 8,503 ಕೋವಿಡ್ ಪ್ರಕರಣ ಪತ್ತೆ, 7,678 ಮಂದಿ ಗುಣಮುಖ

ಬೆರಳೆಣಿಕೆಯಷ್ಟು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಟ್ಟಣ ಮಾರಾಟ ಸಮಿತಿ ರಚನೆ ಆಗಿದೆ. ಆದರೆ ಹಲವು ಕಡೆಗಳಲ್ಲಿ ಪಟ್ಟಣ ವ್ಯಾಪಾರ ಸಮಿತಿ ರಚನೆ ಆಗಿಲ್ಲ.ಆ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿ ಗಳ ಅನುಕೂಲಕ್ಕಾಗಿ ಕೂಡಲೇ ಪಟ್ಟಣ ವ್ಯಾಪಾರ ಸಮಿತಿ ರಚನೆ ಮಾಡಿ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಹಾಗೆಯೇ ಪಟ್ಟಣ ಮಾರಾಟ ಸಮಿತಿಯ ಸಭೆ ನಡೆದಾಗ ಸಮಿತಿಯ ಸದಸ್ಯರುಗಳಿಗೆ ಭತ್ಯಗಳನ್ನು ನೀಡುವಂತೆ ತಿಳಿಸಿದೆ. ಬೀದಿ ಬದಿ ಮಾರುಕಟ್ಟೆ ವಲಯವನ್ನು ಅಭಿವೃದ್ಧಿಗಳಿಸುವಂತೆ ಕೂಡ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ಪೊಲೀಸರಿಂದಲೂ ಕಿರಿಕಿರಿಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೋಂದಾಯಿತ ಬೀದಿ ಬದಿ ವ್ಯಾಪಾರಿಗಳ ಪಟ್ಟಿಯನ್ನು ಪೊಲೀಸ್‌ ಠಾಣೆಗೆ ನೀಡುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜಿಲ್ಲಾ ಕೌಶಲ್ಯ ಮಿಷನ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆದಿರಲಿಲ್ಲ.

ಈ ಸಂಬಂಧ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಲ್ಲಿ ಮನವಿ ಮಾಡಿತ್ತು. ಜತೆಗೆ ರಾಜ್ಯ ಸರ್ಕಾರಕ್ಕೆ ಪತ್ರವನ್ನು ಬರೆದಿತ್ತು.ಇದೀಗ ಸರ್ಕಾರ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸುಮಾರು ರಾಜ್ಯ ವ್ಯಾಪಿ ಸುಮಾರು 3.5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹೇಳಿದೆ.

ಎಷ್ಟಿದ್ದಾರೆ ಬೀದಿ ಬದಿ ವ್ಯಾಪಾರಿಗಳು?

2017 -18ನೇ ಸಾಲಿನಲ್ಲಿ ರಾಜ್ಯವ್ಯಾಪಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆದಿತ್ತು. ಆಗ ರಾಜ್ಯವ್ಯಾಪಿ ಸುಮಾರು 2.6 ಲಕ್ಷ ಜನರು ಹೆಸರು ನೋಂ ದಾಯಿಸಿಕೊಂಡಿದ್ದರು. ಅದರಲ್ಲಿ ಸರ್ಕಾರ 1.21 ಲಕ್ಷ ಜನರಿಗೆ ಮಾತ್ರ ಗುರುತಿನ ಚೀಟಿಯನ್ನು ನೀಡಿತ್ತು. ಹಾಗೆಯೇ ಬೆಂಗಳೂರಿನಲ್ಲಿ 63 ಸಾವಿರ ಜನ ಬೀದಿ ಬದಿ ವ್ಯಾಪಾರಿಗಳು ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದರು.

ಅದರಲ್ಲಿ ಸುಮಾರು 25 ಸಾವಿರ ಜನರಿಗೆ ಮಾತ್ರ ಸರ್ಕಾರ ಗುರುತಿನ ಚೀಟಿ ನೀಡಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹೇಳಿದೆ.

“ ಗುರುತಿನ ಚೀಟಿಯಿಲ್ಲದ ಹಿನ್ನೆಲೆಯಲ್ಲಿ ಕೋವಿಡ್‌ ಸಂಕಷ್ಟದ ವೇಳೆ ಸಾವಿರಾರು ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಘೋಷಣೆ ಮಾಡಿದ್ದ ಸವಲತ್ತುಗಳಿಂದ ವಂಚಿತರಾಗಿದ್ದರು. ಈಗ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರು ಅರ್ಹ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ಮಾರಾಟ ಪ್ರಮಾಣ ಪತ್ರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದು ಸಂತಸ ತಂದಿದೆ.” ●ರಂಗಸ್ವಾಮಿ, ಅಧ್ಯಕ್ಷರು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ

 – ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಕಾರು ಅಪಘಾತ: 6 ಮಂದಿಗೆ ಗಾಯ

Road Mishap ಕಾರು ಅಪಘಾತ: 6 ಮಂದಿಗೆ ಗಾಯ

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

ಕುಂದಾಪುರದ ವ್ಯಕ್ತಿ ಮುಂಬಯಿಯಲ್ಲಿ ಸಾವು

ಕುಂದಾಪುರದ ವ್ಯಕ್ತಿ ಮುಂಬಯಿಯಲ್ಲಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಕಾರು ಅಪಘಾತ: 6 ಮಂದಿಗೆ ಗಾಯ

Road Mishap ಕಾರು ಅಪಘಾತ: 6 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.