ಡಿಕೆಶಿ ಆಪ್ತನ ವಿಚಾರಣೆಗೆ ಹೈಕೋರ್ಟ್‌ ತಡೆಯಾಜ್ಞೆ

Team Udayavani, Jul 31, 2018, 10:30 AM IST

dks.jpg

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಆದಾಯ ತೆರಿಗೆ ವಂಚನೆ, ಸುಳ್ಳು ಮಾಹಿತಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್‌ ಆಪ್ತ ಉದ್ಯಮಿ ಸಚಿನ್‌ ನಾರಾಯಣ್‌ ಸೇರಿದಂತೆ ಇತರರ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಪ್ರಕರಣ ರದ್ದುಕೋರಿ ಆರೋಪಿ ಸಚಿನ್‌ ನಾರಾಯಣ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ಪೀಠ, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿದೆ. 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಆದಾಯ ತೆರಿಗೆ ಇಲಾಖೆ ಕಾಯಿದೆಯನ್ವಯ ಆರ್ಥಿಕ ಅಪರಾಧ, ತೆರಿಗೆ ವಂಚನೆ ಇನ್ನಿತರೆ ಆರೋಪಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳುವ ಮುನ್ನ ಸಕ್ಷಮ ಪ್ರಾಧಿಕಾರವಾದ ಐಟಿ ಆಯುಕ್ತರ ಅನುಮತಿ ಪಡೆದುಕೊಳ್ಳಬೇಕು. ಆದರೆ, ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲು ಐಟಿ ಪ್ರಧಾನ ನಿರ್ದೇಶಕರ ಮುಂದೆ ಅನುಮತಿ ಪಡೆಯಲಾಗಿದೆ. ಈ ಪ್ರಕ್ರಿಯೆ ಕಾನೂನು ಬಾಹಿರ. ಹೀಗಾಗಿ ಅಧೀನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಪೀಠಕ್ಕೆ ಕೋರಿದರು. ಈ ವಾದ ಪರಿಗಣಿಸಿದ ನ್ಯಾಯಪೀಠ, ತಡೆಯಾಜ್ಞೆ ನೀಡಿದೆ.

ಪ್ರಕರಣದ ಆರೋಪಿಗಳು ಆ. 2ರಂದು ವಿಚಾರಣೆಗೆ ಹಾಜರಾಗು ವಂತೆ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಇದೀಗ ಪ್ರಕರಣಕ್ಕೆ ತಡೆಯಾಜ್ಞೆ ದೊರೆತಿರುವ ಕಾರಣ ಪ್ರಕರಣದ ಎರಡನೇ ಆರೋಪಿ ಸಚಿನ್‌ ನಾರಾಯಣ್‌ಗೆ ರಿಲೀಫ್ಸಿ ಕ್ಕಂತಾಗಿದೆ. 2017ರಲ್ಲಿ ಸಚಿವ ಡಿ.ಕೆ. ಶಿವಕುಮಾರ್‌ ನಿವಾಸ ಹಾಗೂ ದೆಹಲಿಯ ಕರ್ನಾಟಕ ಭವನ, ಸಫ‌ರ್‌ ಜಂಗ್‌ ಫ್ಲ್ಯಾಟ್‌ಗಳಲ್ಲಿ ದಾಳಿ ನಡೆಸಿದ್ದ ವೇಳೆ ದೊರೆತ ಹಣ, ಡೈರಿ ಸೇರಿ ಇನ್ನಿತರೆ ದಾಖಲೆಗಳನ್ನು ವಶಪಡಿಸಿ ಕೊಂಡಿದ್ದ ಐಟಿ ಅಧಿಕಾರಿಗಳು, ಸಚಿನ್‌ ನಾರಾಯಣ್‌ ಸೇರಿ ಇನ್ನಿತರರನ್ನು ವಿಚಾರಣೆ ಗೊಳಪಡಿಸಿದ್ದರು.

ವಿಚಾರಣೆ ವೇಳೆ ಸಚಿನ್‌ ನಾರಾಯಣ್‌ ಸೇರಿ ಇತರೆ ಆರೋಪಿಗಳು ನೀಡಿದ ಮಾಹಿತಿಗೂ ದಾಖಲೆ ಗಳಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದ ಐಟಿ ಇಲಾಖೆ ಉಪ ನಿರ್ದೇಶಕ ಟಿ.ಸುನಿಲ್‌ ಗೌತಮ್‌ ಜೂನ್‌ 20ರಂದು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದು, ಪ್ರಕರಣದಲ್ಲಿ ಡಿಕೆ, ಸಚಿನ್‌ ನಾರಾಯಣ್‌, ಸುನೀಲ್‌ ಕುಮಾರ್‌ ಶರ್ಮಾ, ಆಂಜನೇಯ ಹನುಮಂತಯ್ಯ, ಎನ್‌.ರಾಜೇಂದ್ರ ಅವರನ್ನು
1ರಿಂದ 5 ಆರೋಪಿಗಳನ್ನಾಗಿ ಪರಿಗಣಿಸಲಾಗಿದೆ. 

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.