ಧರ್ಮ ಇಲ್ಲದ ಭಾರತದ ಕಲ್ಪನೆ ಅಸಾಧ್ಯ

Team Udayavani, Jan 29, 2019, 12:35 AM IST

190128kpn79.jpg

ಬೆಂಗಳೂರು: ‘ಯೋಗಿ ಆದಿತ್ಯನಾಥರು ಸನ್ಯಾಸಿ ಜೀವನ ದಿಂದ ಏಕಾಏಕಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಜನರ ಸೇವೆ ಮಾಡುವ ಮಹತ್ವಾಕಾಂಕ್ಷೆಯೊಂದಿಗೆ ರಾಜಕೀಯ ಪ್ರವೇಶಿಸಿ, ಐದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿ ಆನಂತರ ಮುಖ್ಯಮಂತ್ರಿ ಸ್ಥಾನಕ್ಕೇರಿದವರು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಡಾ. ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ತಿಳಿಸಿದರು.

ಇನ್‌ಸ್ಪೈರ್‌ ಪುಸ್ತಕ ಪ್ರಕಾಶನ ವತಿಯಿಂದ ಭಾರತೀಯ ವಿದ್ಯಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಡಾ.ಎಚ್.ಎಂ. ಚಂದ್ರಶೇಖರ್‌ ಅವರ ಕನ್ನಡ ಅನುವಾದಿತ ಕೃತಿ ‘ಮೋದಿ ಮೆಚ್ಚಿದ ಯೋಗಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಧರ್ಮ ಆಮ್ಲಜನಕವಿದ್ದ ಹಾಗೆ, ಆಮ್ಲಜನಕ ಇಲ್ಲವಾದರೆ ಮನುಷ್ಯ ಹೇಗೆ ಸಾಯುತ್ತಾನೋ ಅದೇ ರೀತಿ ಧರ್ಮ ಇಲ್ಲದಿದ್ದರೆ ಭಾರತವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಧರ್ಮ ಪರಂಪರೆಯಲ್ಲಿ ಬಂದವರು ಯೋಗಿ ಆದಿತ್ಯನಾಥರು. ಅಲ್ಲದೇ, 1,800 ವರ್ಷಗಳ ಇತಿಹಾಸವಿರುವ ಗೋರಖ್‌ಪುರದ ನಾಥ ಪರಂಪರೆಯ ಹಿನ್ನಲೆ ಹೊಂದಿದ್ದಾರೆ. ಇಂತಹ ಮಹಾನ್‌ ಸನ್ಯಾಸಿ ಕುರಿತು ಪುಸ್ತಕ ಬಂದಿದ್ದು, ಎಲ್ಲರೂ ಓದಿ ತಿಳಿಯಬೇಕು ಎಂದರು.

ಯದುಗಿರಿಯ ಯತಿರಾಜ ಮಠಾಧ್ಯಕ್ಷರಾದ ಯದು ಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್‌ ಮಾತನಾಡಿ, ಸಮಾಜಮುಖೀ ಹಾದಿಯಲ್ಲಿಯೇ ಸನ್ಯಾಸಿ ಜೀವನ ಸಾರ್ಥಕತೆ ಅಡಗಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾಗಿದ್ದು, ನಮ್ಮೆಲ್ಲ ಸಂತರಿಗೆ ಸಂಭ್ರಮ ತಂದಿದೆ. ಅಲ್ಲಿ ಅಧ್ಯಾತ್ಮ ವಾತಾವರ ಣವಿದ್ದು, ರಾಜಕೀಯ ಶಕ್ತಿಯ ಮೂಲಕ ದೀನ ದಲಿತರಿಗೆ ಬಡವರಿಗೆ ದಾರಿ ದೀಪವಾಗಬಹುದು ಎಂದರು.

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಒಂದು ಕಾಲದಲ್ಲಿ ಜಂಗಲ್‌ ರಾಜ್ಯವಾಗಿದ್ದ ಉತ್ತರ ಪ್ರದೇಶವನ್ನು ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾಗಿ ಸಾಕಷ್ಟು ಬದಲಾವಣೆ ತರುವ ಮೂಲಕ ನಿರ್ಭೀತ ರಾಜ್ಯವಾಗಿಸಿದ್ದಾರೆ. ಯೋಗಿ ಆದಿತ್ಯನಾಥ ಅವರು ನಮ್ಮ ಆದಿಚುಂಚನಗಿರಿ ಪರಂಪರೆಯಿಂದ ಬಂದವರು. ಗೋರಖ್‌ಪುರ ಅವರಿಗೆ ಎರಡನೇ ಮಠ. ಅವರು ಉತ್ತರ ಪ್ರದೇಶದಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಮಾದರಿ ರಾಜ್ಯವನ್ನಾಗಿಸುವ ಕನಸು ಹೊಂದಿದ್ದಾರೆ ಎಂದರು.

ಸುಚಿತ್ರ ಫಿಲಂ ಸೊಸೈಟಿ ಅಧ್ಯಕ್ಷ ಕೆ.ವಿ.ಆರ್‌. ಟ್ಯಾಗೂರ್‌ ಅವರು ಪುಸ್ತಕ ಪರಿಚಯಿಸಿದರು. ಕೃತಿ ಅನುವಾದಕ ಹಾಗೂ ಸಿಲಿಕಾನ್‌ ಸಿಟಿ ಕಾಲೇಜು ಅಧ್ಯಕ್ಷ ಡಾ. ಎಚ್.ಎಂ. ಚಂದ್ರಶೇಖರ್‌, ಹಿರಿಯರಂಗ ಕರ್ಮಿ ಟಿ.ಎಸ್‌.ನಾಗಾಭರಣ ಹಾಜರಿದ್ದರು.

ಯೋಗಿ ಊಟ ನೆನೆದ ಶ್ರೀಗಳು
ಯೋಗಿ ಆದಿತ್ಯನಾಥರು ಮುಖ್ಯಮಂತ್ರಿ ಸ್ಥಾನಕ್ಕೇರಿದರೂ ಸನ್ಯಾಸ, ಅದರ ರೀತಿ ನೀತಿ ಕೈಬಿಟ್ಟಿಲ್ಲ. ಊಟ, ತಿಂಡಿ, ಆಚಾರ-ವಿಚಾರ, ವಸ್ತ್ರ ಎಲ್ಲದರಲ್ಲೂ ಇಂದಿಗೂ ಸನ್ಯಾಸಿ ಜೀವನದ ಸರಳತೆಯನ್ನೆ ಮೈಗೂಡಿಸಿಕೊಂಡಿದ್ದಾರೆ. ನಿತ್ಯ ಗಂಜಿ, ಮೊಳಕೆ ಕಾಳು, ಹಣ್ಣುಗಳನ್ನು ಸೇವಿಸುತ್ತಾರೆ. ಅವರೊಟ್ಟಿಗೆ ಮಾತುಕತೆಗೆ ಹೋದವರಿಗೂ ಇದೇ ಆಹಾರವನ್ನು ಕೊಡುತ್ತಾರೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥರು ನೆನಪಿಸಿಕೊಂಡರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.