ಕೆಮಿಕಲ್ ಸ್ಫೋಟದ ತನಿಖೆ ಚುರುಕು


Team Udayavani, May 21, 2019, 12:13 PM IST

blore-5

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದ ಶಾಸಕ ಮುನಿರತ್ನ ಅವರ, ವೈಯಾಲಿಕಾವಲ್ನಲ್ಲಿರುವ ಮನೆ ಎದುರು ಅವಧಿ ಮೀರಿದ ರಾಸಾಯನಿಕ ಸ್ಫೋಟಗೊಂಡು ವ್ಯಕ್ತಿ ಮೃತಪಟ್ಟ ಘಟನೆಯ ತನಿಖೆಯನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಚುರುಕುಗೊಳಿಸಿದ್ದು, ಸೋಮವಾರ ಪ್ರತ್ಯಕ್ಷದರ್ಶಿಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ವೈಯಾಲಿಕಾವಲ್ನ 11ನೇ ಕ್ರಾಸ್‌ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸದ ಮುಂಭಾಗ ಭಾನುವಾರ ಬೆಳಗ್ಗೆ ರಾಸಾಯನಿಕ ತುಂಬಿದ್ದ ಕ್ಯಾನ್‌ ಸ್ಫೋಟಗೊಂಡು ಶಾಸಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್‌ (45) ಮೃತಪಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಆರ್ಯ ಎಂಬವರು ನೀಡಿರುವ ದೂರು ಆಧರಿಸಿ ಅಜಾಗರೂಕತೆ ಹಾಗೂ ಸ್ಫೋಟಕ ವಸ್ತುಗಳ ಬಳಕೆ ನಿರ್ಬಂಧ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ, ಈ ಹಂತದಲ್ಲಿ ಪ್ರಕರಣದ ಆರೋಪಿಗಳನ್ನಾಗಿ ಯಾರನ್ನು ಪರಿಗಣಿಸಿಲ್ಲ. ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಪ್ರಕರಣದಲ್ಲಿ ಯಾರದ್ದಾದರೂ ಲೋಪವಿದೆಯೇ ಎಂಬ ವಿಚಾರ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದರು. ಇದುವರೆಗಿನ ಪ್ರಾಥಮಿಕ ತನಿಖೆಯಲ್ಲಿ ಮಿಥೇಲ್ ಈಥೇನ್‌ ಕಿತೇನ್‌ ಪೆರೋಕ್ಸೈಡ್‌ (ಎಂಇಕೆಪಿ) ರಾಸಾಯನಿಕಗಳೇ ಸ್ಫೋಟಕ್ಕೆ ಕಾರಣ ಎಬುದು ಗೊತ್ತಾಗಿದೆ. ತಜ್ಞರು ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್‌ಎಲ್) ವರದಿ ಬಂದ ಬಳಿಕ ಮತ್ತಷ್ಟು ಖಚಿತತೆ ಸಿಗಲಿದೆ. ಆದಷ್ಟು ಬೇಗ ವರದಿ ನೀಡುವಂತೆ ಎಫ್ಎಸ್‌ಎಲ್ಗೆ ಮನವಿ ಮಾಡಲಾಗುತ್ತದೆ.

ಕ್ಯಾನ್‌ನಲ್ಲಿದ್ದ ರಾಸಾಯನಿಕದ ಅವಧಿ ಪೂರ್ಣಗೊಂಡಿತ್ತೇ ಅಥವಾ ಒತ್ತಡದಿಂದ ಸ್ಫೋಟಗೊಂಡಿತೇ ಎಂಬುದರ ಬಗ್ಗೆ ವರದಿ ಬಂದ ಬಳಿಕವೇ ಗೊತ್ತಾಗಲಿದೆ ಎಂದು ಅಧಿಕಾರಿ ಹೇಳಿದರು.

ಸ್ಫೋಟವನ್ನು ನೋಡಿದ ಪ್ರತ್ಯಕ್ಷದರ್ಶಿಗಳು, ಸ್ಥಳೀಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಜತೆಗೆ, ಮೃತ ವೆಂಕಟೇಶ್‌ ಸ್ವತ: ಕೆಮಿಕಲ್ ತುಂಬಿದ್ದ ಕ್ಯಾನ್‌ ಕೊಂಡೊಯ್ಯುತ್ತಿದ್ದರೇ ಅಥವಾ ಅವರ ಕೈಗೆ ಯಾರಾದರೂ ನೀಡಿದ್ದರೇ ಎಂಬುದು ಖಚಿತಪಟ್ಟಿಲ್ಲ. ರಾಸಾಯನಿಕ ತುಂಬಿದ್ದ ಕ್ಯಾನ್‌ ಎಲ್ಲಿತ್ತು ವೆಂಕಟೇಶ್‌ ಅದನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು ಎಂಬುದು ಗೊತ್ತಾಗಬೇಕಿದ್ದು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.

ಮೃತ ವೆಂಕಟೇಶ್‌ ಅವರ ಅಂತ್ಯಕ್ರಿಯೆ ಶ್ರೀರಾಮಪುರದ ರುದ್ರಭೂಮಿಯಲ್ಲಿ ಸೋಮವಾರ ನೆರವೇರಿದೆ. ಶಾಸಕ ಮುನಿರತ್ನ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

1-fdfd

ಬಿಜೆಪಿಯನ್ನು ವಿರೋಧಿಸುವವರು ಒಂದಾಗಬೇಕು: ಮಮತಾ ಭೇಟಿ ಬಳಿಕ ಪವಾರ್

ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

ಅಂತರರಾಷ್ಟ್ರೀಯ ವಿಮಾನದಲ್ಲಿ ಬರುವ ಎಲ್ಲ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

1-g

‘ಗೇಮ್ ಓವರ್’, ‘ಗೇಮ್ ಸ್ಟಾರ್ಟ್’ ಮದುವೆಯಲ್ಲಿ ಗಮನ ಸೆಳೆದ ಬರಹ !!

1-vish

ಗೋಪಾಲಕೃಷ್ಣ ಯಾಕೆ ನನ್ನ ಕೊಲೆಗೆ ಸಂಚು ಹೂಡಿದರೋ ಗೊತ್ತಿಲ್ಲ: ಎಸ್.ಆರ್.ವಿಶ್ವನಾಥ್

1-pp

ಮಹಿಳಾ ಪೇದೆಯ ಲಿಂಗ ಬದಲಾವಣೆಗೆ ಗೃಹ ಇಲಾಖೆ ಅನುಮತಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ರಾಮಲಿಂಗಾರೆಡ್ಡಿ

ಯಾವ ಸಮಯದಲ್ಲಿ ಏನು ಮಾಡಬೇಕೆಂಬ ಪ್ರಜ್ಞೆ ಬಿಜೆಪಿಯವರಿಗಿಲ್ಲ: ರಾಮಲಿಂಗಾರೆಡ್ಡಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dkshivakumar

ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಲು ಡಿಕೆಶಿ ಒತ್ತಾಯ

ಮಂಗಗಳ ಅನುಮಾನಾಸ್ಪದ ಸಾವು

ಕೋತಿಗಳ ಅನುಮಾನಾಸ್ಪದ ಸಾವು..!

ಸಿದ್ದು ವಿರುದ್ಧ ದೂರು

ಸಿದ್ದು, ಲಾಡ್‌ ವಿರುದ್ಧ ಪೊಲೀಸರಿಗೆ ದೂರು

NEP discussion

ಎನ್‌ಇಪಿ: ಶಿಕ್ಷಣ ಸುಧಾರಣೆಗೆ ಮಹತ್ವ

riksha benglore

ಆಟೋ ಬಾಡಿಗೆ ದರ ಏರಿಕೆ..!

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

1-fdfd

ಬಿಜೆಪಿಯನ್ನು ವಿರೋಧಿಸುವವರು ಒಂದಾಗಬೇಕು: ಮಮತಾ ಭೇಟಿ ಬಳಿಕ ಪವಾರ್

ರೂಪಾಂತರಿ ಭೀತಿ ; ಮತ್ತದೇ ನಿರ್ಲಕ್ಷ್ಯ ನೀತಿ! ಮಾಸ್ಕ್ ಕಡ್ಡಾಯವಿಲ್ಲ

ರೂಪಾಂತರಿ ಭೀತಿ ; ಮತ್ತದೇ ನಿರ್ಲಕ್ಷ್ಯ ನೀತಿ! ಮಾಸ್ಕ್ ಕಡ್ಡಾಯವಿಲ್ಲ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.