ಕಿಡ್ನಿ ನೀಡಿ ತಾಯಿಯ ಉಳಿಸಿಕೊಂಡ ಯುವತಿ

Team Udayavani, Aug 22, 2019, 3:06 AM IST

ಬೆಂಗಳೂರು: ಮೂತ್ರಪಿಂಡ ವೈಫ‌ಲ್ಯದಿಂದ ಬಳಲುತ್ತಿದ್ದ ತಾಯಿಗೆ ಮಗಳು ತನ್ನ ನಿಶ್ಚಿತಾರ್ಥ ರದ್ದು ಮಾಡಿಕೊಂಡು ಮೂತ್ರಪಿಂಡ ದಾನಮಾಡಿ ಜನ್ಮದಾತೆಯ ಜೀವ ಉಳಿಸಿದ್ದಾಳೆ. ಮಣಿಪಾಲ್‌ ಆಸ್ಪತ್ರೆಯಲ್ಲಿ ಮೂತ್ರಪಿಂಡ ವೈಫ‌ಲ್ಯದಿಂದ ಬಳಲುತ್ತಿದ್ದ ತನ್ನ ತಾಯಿಗೆ ಬಾಂಗ್ಲಾದೇಶದ ಅವಿವಾಹಿತ 26 ವರ್ಷ ವಯಸ್ಸಿನ ಯುವತಿಯು ತನ್ನ ಮೂತ್ರಪಿಂಡಗಳಲ್ಲಿ ಒಂದನ್ನು ದಾನ ಮಾಡಿದ್ದಾಳೆ.

ಮೂತ್ರಪಿಂಡ ನೀಡುವ ನಿರ್ಣಯವನ್ನು ವಿರೋಧಿಸಿದ ಭಾವಿ ಪತಿಯೊಂದಿಗಿನ ನಿಶ್ಚಿತಾರ್ಥವನ್ನೇ ಯುವತಿ ರದ್ದು ಮಾಡಿಕೊಂಡು ಬಂದಿದ್ದರು. ಮಣಿಪಾಲ್‌ ಆಸ್ಪತ್ರೆಯ ಮೂತ್ರಪಿಂಡ ರೋಗತಜ್ಞ ಡಾ. ಸನಕರನ್‌ ಸುಂದರ್‌ ಅವರು ಯಶಸ್ವಿಯಾಗಿ ಮೂತ್ರಪಿಂಡ ಕಸಿ ಮಾಡಿದ್ದು, ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಡಾ. ಸನಕರನ್‌ ಸುಂದರ್‌, ಸಾಮಾನ್ಯವಾಗಿ ವಿವಾಹವಾಗದ ಮಹಿಳೆಯರು ಅಂಗದಾನ ಮಾಡುವುದನ್ನು ನಾವು ಪ್ರೋತ್ಸಾಹಿಸುವುದಿಲ್ಲ. ಏಕೆಂದರೆ ಅವರ ಆರೋಗ್ಯ ಸ್ಥಿತಿ ಆಧರಿಸಿ ಅವರ ಭವಿಷ್ಯಕ್ಕೆ ಇದು ಅಡ್ಡಿಯಾಗಬಹುದೆಂಬ ಆತಂಕವಿರುತ್ತದೆ. ಆದರೆ, ದೃಢ ನಿಶ್ಚಯದ ಯುವತಿ, ತನ್ನ ತಾಯಿಯನ್ನು ಬದುಕಿಸಬೇಕೆಂಬ ನಿರ್ಣಯ ಕೈಗೊಂಡು ಕಿಡ್ನಿ ನೀಡಿದ್ದಾಳೆ ಎಂದು ಹೇಳಿದರು.

ಮಣಿಪಾಲ್‌ ಆಸ್ಪತ್ರೆಯ ಅಧ್ಯಕ್ಷ ಡಾ. ಸುದರ್ಶನ್‌ ಬಲ್ಲಾಳ್‌ ಮಾತನಾಡಿ, ಅಂಗ ಸ್ವೀಕರಿಸುವವರಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಲಿಂಗ ಸಂಬಂಧ ಅಸಮಾನತೆ ಇದ್ದು, ವಿವಾಹವಾದ ಮಹಿಳೆ ದಾನಿಯಾಗಲು ನಿರ್ಧರಿಸಿದರೂ ಕುಟುಂಬದವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ, ಮದುವೆಯಾಗದ ಯುವತಿ ತನ್ನ ತಾಯಿಗಾಗಿ ಅತ್ಯಂತ ದೃಢ ನಿರ್ಣಯ ಮಾಡಿ ಮೂತ್ರಪಿಂಡ ದಾನ ಮಾಡಿದ್ದು, ಆಕೆಯ ಧೈರ್ಯವನ್ನು ಅಭಿನಂದಿಸಲೇಬೇಕು ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ನಗರದಲ್ಲಿರುವ ಜಾಹೀರಾತು (ಕಬ್ಬಿಣದ ಸ್ಟ್ರಕ್ಚರ್‌) ಫ‌ಲಕಗಳನ್ನು 15ದಿನಗಳ ಒಳಗಾಗಿ ತೆರವು ಮಾಡುವುದಕ್ಕೆ ಕ್ರಮ ವಹಿಸುವಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌....

  • ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ 1,253 ಕೋಟಿ ರೂ.ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿಯ...

  • ಬೆಂಗಳೂರು: ದೇಶ ಕಟ್ಟಿದ ಮಹಾರತ್ನಗಳಂಥ ಕಂಪನಿಗಳನ್ನೇ ಕೇಂದ್ರ ಸರ್ಕಾರ ಬಿಕರಿಗಿಟ್ಟಿದೆ ಎಂದು ಸಾಹಿತಿ ದೇವನೂರು ಮಹಾದೇವ ಆತಂಕ ವ್ಯಕ್ತಪಡಿಸಿದರು. ಕೆನರಾ ಬ್ಯಾಂಕ್‌...

  • ಬೆಂಗಳೂರು: ಹಿಂದೂ ಆಧ್ಯಾತ್ಮಿಕತೆಗೂ ಸೂಫಿ ಚಿಂತನೆಗೂ ಹತ್ತಿರದ ನಂಟಿದೆ ಎಂದು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅಂಕಿತ ಪ್ರಕಾಶನ ಶನಿವಾರ ಬಸವನಗುಡಿಯ...

  • ಬೆಂಗಳೂರು: ಪ್ರಾಪ್ತ ಬಾಲಕನಿಗೆ ಆತನ ಪೋಷಕರೇ ಬಲವಂತವಾಗಿ ಮದುವೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

ಹೊಸ ಸೇರ್ಪಡೆ