ಶಾಸಕನನ್ನು ಬಿಎಸ್‌ವೈ ಬಳಿ ಕಳಿಸಿದ್ದೇ ಎಚ್‌ಡಿಕೆ

Team Udayavani, Feb 11, 2019, 6:16 AM IST

shasaka.jpg

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್‌.ಯಡಿಯೂರಪ್ಪ ಅವರು ತಾವು ಶರಣಗೌಡ ಅವರನ್ನು ಭೇಟಿಯಾಗಿದ್ದು ಹಾಗೂ ಮಾತನಾಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಆಡಿಯೋದಲ್ಲಿರುವುದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಸುಳ್ಳು ಹಾಗೂ ಕಟ್ಟುಕಥೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆದ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಭಾನುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಧ್ಯರಾತ್ರಿ ಶರಣಗೌಡ ಅವರನ್ನು ಯಡಿಯೂರಪ್ಪ ಅವರ ಬಳಿ ಕಳಿಸುವ ಸಂಚು ರೂಪಿಸಿದವರೇ ಮುಖ್ಯಮಂತ್ರಿ ಕುಮಾರಸ್ವಾಮಿ. ಹಾಗಿದ್ದರೂ ಮಧ್ಯರಾತ್ರಿ ಭೇಟಿಯಾಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸುವ ಮೂಲಕ ತಮ್ಮದೇನೂ ಪಾತ್ರವಿಲ್ಲ ಎನ್ನುವ ಮಹಾನ್‌ ನಾಟಕ ಮಾಡಿರುವ ಎಚ್‌ಡಿಕೆ, ಎಷ್ಟು ಸಾಚಾ ಎನ್ನುವುದು ಅನೇಕ ಪ್ರಕರಣಗಳಲ್ಲಿ ಸಾಬೀತಾಗಿದೆ ಎಂದು ಕಿಡಿ ಕಾರಿದ್ದಾರೆ.

ತಮ್ಮ ರಾಜಕೀಯ ವಿರೋಧಿಯನ್ನು ಬ್ಲಾಕ್‌ವೆುಲ್‌ ಮಾಡಲು ರಾಜ್ಯದ ಮುಖ್ಯಮಂತ್ರಿಯೊಬ್ಬರು ಈ ರೀತಿ ಸಂಚು ರೂಪಿಸಿದ ನಿದರ್ಶನ ದೇಶದ ರಾಜಕೀಯ ಇತಿಹಾಸದಲ್ಲೇ ಮತ್ತೂಂದಿಲ್ಲ. ಅನಾಯಾಸವಾಗಿ ದೊರೆತ ಮುಖ್ಯಮಂತ್ರಿ ಹುದ್ದೆಯನ್ನು ಜನ ಸೇವೆಗೆ ಬಳಸುವ ಬದಲು ಇಂತಹ ಹೀನಕೃತ್ಯಕ್ಕೆ ಬಳಸಿರುವುದು ದುರಂತ ಎಂದಿದ್ದಾರೆ.

ಈ ಹಿಂದೆ ರಾಜ್ಯಸಭಾ ಚುನವಣೆಯಲ್ಲಿ ಗೆಲ್ಲಲು ತಮ್ಮ ಪಕ್ಷದ ಪ್ರತಿ ಶಾಸಕರು ತಲಾ ಒಂದು ಕೋಟಿ ರೂ. ಬೇಡಿಕೆ ಇಟ್ಟಿದ್ದರು ಎಂಬುದಾಗಿ ಸ್ವತಃ ಕುಮಾರಸ್ವಾಮಿಯವರೇ ಒಪ್ಪಿಕೊಂಡಿದ್ದಾರೆ. ಇವು ಜೆಡಿಎಸ್‌ನ ಹಣಕಾಸು ವ್ಯವಹಾರಕ್ಕೆ ಹಿಡಿದ ಕನ್ನಡಿ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಜೋಡಿ ರಾಮನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೇ ಇಲ್ಲದಂತೆ ಮಾಡಲು ಷಡ್ಯಂತ್ರ ರೂಪಿಸಿತ್ತು. ಚಂದ್ರಶೇಖರ್‌ ಅವರನ್ನು ಬಿಜೆಪಿಗೆ ಕಳುಹಿಸಿ ನಂತರ ಕಣದಿಂದ ಸರಿಯುವಂತೆ ಮಾಡಲಾಗಿತ್ತು. ಇದನ್ನು ಗಮನಿಸಿದರೆ ಅಧಿಕಾರಕ್ಕಾಗಿ ಈ ಜೋಡಿ ಯಾವ ಮಟ್ಟಕ್ಕಾದರೂ ಇಳಿಯಬಲ್ಲದು ಎಂಬುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ರವಿಕುಮಾರ್‌ ಕೇಳಿರುವ ಮೂರು ಪ್ರಶ್ನೆಗಳು
* ವಿಧಾನ ಪರಿಷತ್‌ಗೆ ನಾಮಕರಣ ಮಾಡಲು ವಿಜುಗೌಡ ಅವರ ಬಳಿ 25 ಕೋಟಿ ರೂ. ಕೇಳಿದ್ದ ಕುಮಾರಸ್ವಾಮಿ ಬಗ್ಗೆ ಕಾಂಗ್ರೆಸ್‌ ನಾಯಕರ ಮೌನವೇಕೆ?

* ಜೆಡಿಎಸ್‌ನಲ್ಲಿ ಸೂಟ್‌ಕೇಸ್‌ ಇಲ್ಲದೆ ಯಾವುದೇ ಕೆಲಸವಾಗುವುದಿಲ್ಲ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದನ್ನು ಮುಖ್ಯಮಂತ್ರಿಗಳೇಕೆ ಗಂಭೀರವಾಗಿ ಪರಿಗಣಿಸಿಲ್ಲ?

* ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಸೇರಿದ್ದು ಎನ್ನಲಾದ 25 ಲಕ್ಷ ರೂ. ವಿಧಾನಸೌಧದ ಸಚಿವರ ಕೊಠಡಿಯಲ್ಲೇ ಪತ್ತೆಯಾದರೂ ಈವರೆಗೆ ತನಿಖೆ ಪ್ರಗತಿಯಾಗದಿರಲು ಕಾರಣವೇನು?

ಟಾಪ್ ನ್ಯೂಸ್

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

breast cancer

ಪ್ರತಿ 4 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

cracker

ಹೊರಬೀಳದ ಆದೇಶ, ಮುಗಿಯದ ಆತಂಕ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಮೈಸೂರು

18 ದಿನ ಕಂಗೊಳಿಸಿದ ದಸರಾ ದೀಪಾಲಂಕಾರ ಅಂತ್ಯ

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

13water

ನೀರು ಕೊಡಿ ಹೋರಾಟಕ್ಕೆ ಬಾಬುಗೌಡ ಬಾದರ್ಲಿ ಧ್ವನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.