Udayavni Special

ರಾಜಧಾನಿಯಲ್ಲೀಗ ಮಾವಿನ ಘಮಲು


Team Udayavani, Apr 17, 2019, 3:00 AM IST

rajadhaniyall

ಬೆಂಗಳೂರು: ಮುಂಗಾರು ಪೂರ್ವದಲ್ಲಿಯೇ ಉದ್ಯಾನ ನಗರಿಗೆ ಹಣ್ಣುಗಳ ರಾಜನ ಪ್ರವೇಶವಾಗಿದ್ದು, ಪ್ರಮುಖ ಮಾರುಕಟ್ಟೆ, ರಸ್ತೆಗಳಲ್ಲಿ ಈಗಾಲೇ ಮಾವಿನ ಘಮಲು ಶುರುವಾಗಿದೆ.

ನಗರದ ಪ್ರಮುಖ ಮಾರುಕಟ್ಟೆ, ಹಣ್ಣಿನ ಮಳಿಗೆಗಳು, ಸೂಪರ್‌ ಮಾರ್ಕೆಟ್‌, ಬಜಾರ್‌ಗಳಿಂದ ಹಿಡಿದು ಹಾಪ್‌ಕಾಮ್ಸ್‌, ತಳ್ಳುಗಾಡಿಗಳು, ಬೀದಿಬದಿ ವ್ಯಾಪಾರ ಮಳಿಗೆಗಳಲ್ಲಿ ಮಾವಿನ ಹಣ್ಣಿನ ರಾಶಿ ಕಾಣುತ್ತಿದ್ದು, ಇಲ್ಲಿನ ಸ್ವಾದಿಷ್ಟ ಮಾವಿನ ಹಣ್ಣುಗಳಿಗೆ ಜನ ಮಾರುಹೋಗಿದ್ದಾರೆ. ಇನ್ನು ಮುಂದಿನ ಮೂರ್‍ನಾಲ್ಕು ತಿಂಗಳ ಕಾಲ ನಗರದಲ್ಲಿ ಮಾವಿನ ಪಾರುಪತ್ಯ ಮುಂದುವರಿಯಲಿದೆ.

ಈ ಬಾರಿ ಪ್ರಮುಖ ತಳಿಗಳಾದ ಬಾದಾಮಿ, ಮಲ್ಗೊವಾ, ಮಲ್ಲಿಕಾ, ರಸಪೂರಿ, ಹಿಮಾಯತ್‌, ಸಿಂಧೂರ, ತೋತಾಪುರಿ, ದಶೇರಿ, ಕಾಲಾಪಹಾಡ್‌, ಕುದಾದಾಸ್‌, ಬೈಗಾನ್‌ಪಲ್ಲಿ ಸೇರಿದಂತೆ 10ಕ್ಕೂ ಹೆಚ್ಚಿನ ತಳಿಗಳು ಮಾರುಕಟ್ಟೆಗೆ ಬಂದಿವೆ. ಈ ತಳಿಯ ಪೈಕಿ ಬಾದಾಮಿ ಹಾಗೂ ಮಲ್ಗೊàವಾ ಹಣ್ಣಿಗೆ ಬೇಡಿಕೆ ಹೆಚ್ಚಿದೆ.

ಸದ್ಯ ಈಗ ಆಂಧ್ರ ಭಾಗದ ಮಾವು ಬೆಂಗಳೂರಿಗೆ ಪೂರೈಕೆ ಯಾಗುತ್ತಿದ್ದು, ಈ ತಿಂಗಳ ಅಂತ್ಯಕ್ಕೆ ಕೋಲಾರ, ಶ್ರೀನಿವಾಸಪುರ, ರಾಮನಗರ ಭಾಗದ ಹಣ್ಣು ಮಾರುಕಟ್ಟೆಗೆ ಬಲಿರಲಿದೆ. ಮುಂದಿನ ತಿಂಗಳು ಹಾವೇರಿ, ಧಾರವಾಡ, ಕೊಪ್ಪಳ ಮತ್ತಿತರ ಭಾಗಗಳ ಮಾವು ಮಾರುಕಟ್ಟೆಗೆ ಲಗ್ಗೆ ಇಡಲಿವೆ.

ಪ್ರತಿ ವರ್ಷದಂತೆ ಈ ವರ್ಷವೂ ಜಯಮಹಲ್‌ ರಸ್ತೆಯ ಫ‌ನ್‌ವರ್ಲ್ಡ್ ಮುಂಭಾಗದ ಖಾಲಿ ಜಾಗದಲ್ಲಿ ತಮಿಳುನಾಡಿನ ಸೇಲಂ, ತಿರಕೋಯಿಲೂರು, ಕಾಟಾ³ಡಿ, ಧರ್ಮಪುರಿ ಮೂಲದ ವಲಸಿಗ ವ್ಯಾಪಾರಿಗಳು ಮಾವಿನಹಣ್ಣಿನ ಅಂಗಡಿಗಳನ್ನು ಹಾಕುತ್ತಿದ್ದು, ಸದ್ಯ ಇಪ್ಪತ್ತಕ್ಕೂ ಹೆಚ್ಚು ಮಳಿಗೆಗಳು ಈ ಭಾಗದಲ್ಲಿವೆ.

ಈ ಬಾರಿ ಹೆಚ್ಚು ಇಳುವರಿ: ರಾಜ್ಯದಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಿರುವುದರಿಂದ ಹಾಗೂ ಹವಾಮಾನ ವೈಪರಿತ್ಯ ಕಡಿಮೆ ಇರುವುದರಿಂದ ಮಾವುವಿನ ಉತ್ತಮ ಇಳುವರಿ ನಿರೀಕ್ಷಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 1.80 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆದಿದ್ದು, 10 ಲಕ್ಷ ಟನ್‌ ಮಾವು ಉತ್ಪಾದನೆಯಾಗಬಹುದು ಎಂದು ಅಂದಾಜಿಸಲಾಗಿದೆ. ಜತೆಗೆ ಇಲ್ಲಿಯವರೆಗೆ ಮಳೆ ಬೀಳದ ಕಾರಣ ಮುಂದೆ ಮೂರು ಹಂತದಲ್ಲಿ ಮಾವು ಕೊಯ್ಲಿಗೆ ಬರಲಿದೆ ಎಂದು ರಾಜ್ಯ ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

ಮಾವು ಮಂಡಳಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಪ್ರತಿ ವರ್ಷ ಬೆಂಗಳೂರಿನಲ್ಲಿ ಮಾವು ಮೇಳಕ್ಕೆ ಈ ಬಾರಿ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ. ಮಾವು ಮೇಳದ ಕುರಿತು ಯಾವುದೇ ಸಭೆಗಳು ಈವರೆಗೆ ನಡೆದಿಲ್ಲ. ಜತೆಗೆ ರಾಜ್ಯದ ಎಲ್ಲಾ ಭಾಗದ ಮಾವು ಮಾರುಕಟ್ಟೆಗೆ ಬಂದ ನಂತರವೇ ಅಂದರೆ ಮೇ ಕೊನೆಯ ವಾರದ ನಂತರವೇ ಈ ಬಾರಿ ಮೇಳ ಆಯೋಜನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ದರ ಪಟ್ಟಿ (ಕೆ.ಜಿ.ಗೆ): ಆಲ್ಫನ್ಸ್‌ – 65, ಅಮರ್‌ಪಾಲಿ – 80, ಬೈಗನ್‌ಪಾಲಿ – 99, ಮಲ್ಗೊವಾ- 150, ರಸಪೂರಿ-80 ರೂ. ಮಲ್ಲಿಕಾ- 109 ರೂ. ನೀಲಂ- 52, ರಸಪೂರಿ- 96, ಸೆಂಧೂರ- 42 ರೂ. ಕಾಲಾಪಹಡ್‌-100 ರೂ. ದಶೇರಿ -150ರೂ. ತೊತಾಪುರಿ-40 ರೂ.

ಈ ವರ್ಷ ಸರಿಯಾದ ಸಮಯಕ್ಕೆ ಮಾವಿನ ಮರಗಳು ಹೂ ಬಿಟ್ಟಿದ್ದು, ಕಳೆದ ಬಾರಿಗಿಂತ ಶೇ.20ರಷ್ಟು ಉತ್ತಮ ಇಳುವರಿಯಾಗಲಿದೆ. ಕಳೆದ ವರ್ಷ ಮಳೆ ಕೈಕೊಟ್ಟ ಪರಿಣಾಮ ಕಾಯಿಗಳ ಗಾತ್ರದಲ್ಲಿ ವ್ಯತ್ಯಾಸವಾಗಬಹುದು. ಪ್ರತಿ ಬಾರಿಯಂತೆ ಹಾಪ್‌ಕಾಮ್ಸ್‌ನಲ್ಲಿ ಮಾರುಕಟ್ಟೆಗಿಂತ ಶೇ.20 ರಷ್ಟು ಕಡಿಮೆ ಬೆಲೆಯಲ್ಲಿ ಹಣ್ಣು ಸಿಗಲಿವೆ.
-ಪ್ರಸಾದ್‌, ವ್ಯವಸ್ಥಾಪಕ ನಿರ್ದೇಶಕರು, ಹಾಪ್‌ಕಾಮ್ಸ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗದಗ ವೃದ್ಧೆಗೆ ಕೋವಿಡ್ ಸೋಂಕು: ಸಂಪರ್ಕದಲ್ಲಿದ್ದ ಎಲ್ಲಾ 45 ಮಂದಿ ನಿರಾಳ

ಗದಗ ವೃದ್ಧೆಗೆ ಕೋವಿಡ್ ಸೋಂಕು: ಸಂಪರ್ಕದಲ್ಲಿದ್ದ ಎಲ್ಲಾ 45 ಮಂದಿ ನಿರಾಳ

zoom-app-desktop

ಏನಿದು ಜೂಮ್ ಆ್ಯಪ್ ? ತಂತ್ರಜ್ಞಾನ ದೈತ್ಯರಿಗೆ ಟಕ್ಕರ್ ಕೊಟ್ಟ ಇದರ ವಿಶೇಷತೆಗಳೇನು ?

ಮದ್ಯದ ಅಂಗಡಿ ಕಳ್ಳತನ ತಡೆಗೆ ಸೆಕ್ಯೂರಿಟಿ ಗಾರ್ಡ್ ನೇಮಕಕ್ಕೆ ಸೂಚನೆ

ಮದ್ಯದ ಅಂಗಡಿ ಕಳ್ಳತನ ತಡೆಗೆ ಸೆಕ್ಯೂರಿಟಿ ಗಾರ್ಡ್ ನೇಮಕಕ್ಕೆ ಸೂಚನೆ

ಮಿತಿಮೀರುತ್ತಿದೆ covid-19: ಏ.14ರ ನಂತರ ಲಾಕ್ ಡೌನ್ ಮುಂದುವರಿಕೆ; ಪ್ರಧಾನಿ ಸುಳಿವು

ಮಿತಿಮೀರುತ್ತಿದೆ covid-19: ಏ.14ರ ನಂತರ ಲಾಕ್ ಡೌನ್ ಮುಂದುವರಿಕೆ; ಪ್ರಧಾನಿ ಸುಳಿವು

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ಕೋವಿಡ್ ಗೆ ಔಷಧಿ; ಸಂಜೀವಿನಿ ಪರ್ವತದ ಬಗ್ಗೆ ಉಲ್ಲೇಖಿಸಿ ಮೋದಿಗೆ ಬ್ರೆಜಿಲ್ ಪ್ರಧಾನಿ ಪತ್ರ

ಕೋವಿಡ್ ಗೆ ಔಷಧಿ; ಸಂಜೀವಿನಿ ಪರ್ವತದ ಬಗ್ಗೆ ಉಲ್ಲೇಖಿಸಿ ಮೋದಿಗೆ ಬ್ರೆಜಿಲ್ ಪ್ರಧಾನಿ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡು ಹೆಣ್ಣು, ಒಂದು ಗಂಡು; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಎರಡು ಹೆಣ್ಣು, ಒಂದು ಗಂಡು; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

bng-tdy-5

ಸಾಮಾನ್ಯ ರೋಗಿಗಳಿಗಾಗಿ ಓಲಾ, ಊಬರ್‌ ಸೇವೆ

bng-tdy-4

ತಬ್ಲೀಘಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ

bng-tdy-3

ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಿ ಕಳುಹಿಸಿ

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

avalu-tdy-6

ಹೇಮಾ ಮಾಲಿನಿ ಥರ ಇದ್ದೀಯ.

ಗದಗ ವೃದ್ಧೆಗೆ ಕೋವಿಡ್ ಸೋಂಕು: ಸಂಪರ್ಕದಲ್ಲಿದ್ದ ಎಲ್ಲಾ 45 ಮಂದಿ ನಿರಾಳ

ಗದಗ ವೃದ್ಧೆಗೆ ಕೋವಿಡ್ ಸೋಂಕು: ಸಂಪರ್ಕದಲ್ಲಿದ್ದ ಎಲ್ಲಾ 45 ಮಂದಿ ನಿರಾಳ

zoom-app-desktop

ಏನಿದು ಜೂಮ್ ಆ್ಯಪ್ ? ತಂತ್ರಜ್ಞಾನ ದೈತ್ಯರಿಗೆ ಟಕ್ಕರ್ ಕೊಟ್ಟ ಇದರ ವಿಶೇಷತೆಗಳೇನು ?

08-April-40

ಗಡಿ ಭಾಗದ ಸರಹದ್ದಿನಲ್ಲಿ ಚೆಕ್‌ಪೋಸ್ಟ್‌ ತೆರೆಯಲು ಕ್ರಮ

ಮನೆಯಿಂದ ಹೊರಬರುವ ಮುನ್ನ ಮಾಸ್ಕ್ ಧರಿಸಿ: ಜನರಿಗೆ ಮಹಾರಾಷ್ಟ್ರ ಸಿಎಂ

ಮನೆಯಿಂದ ಹೊರಬರುವ ಮುನ್ನ ಮಾಸ್ಕ್ ಧರಿಸಿ: ಜನರಿಗೆ ಮಹಾರಾಷ್ಟ್ರ ಸಿಎಂ