ಕ್ಷೇತ್ರಕ್ಕೆ ಮೆಟ್ರೋ ತಂದ ತೃಪ್ತಿಯಿದೆ

Team Udayavani, May 5, 2018, 11:40 AM IST

khsetrakke.jpg

ಬೆಂಗಳೂರು: ಸರ್‌ ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ರಘು ಅವರು ಶುಕ್ರವಾರ ಬೆಳಗ್ಗೆ ಕ್ಷೇತ್ರದ ಕೊನೇನ ಅಗ್ರಹಾರದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರೆ, ಸಂಜೆ ಬೈಯಪ್ಪನಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಬೃಹತ್‌ ರ್ಯಾಲಿ ಮೂಲಕ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 10 ವರ್ಷಗಳಿಂದ ಶಾಸಕನಾಗಿ, ಸಾಮಾನ್ಯ ಕಾರ್ಯಕರ್ತನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುತ್ತಿದ್ದೇನೆ. ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿದ್ದೇನೆ. ಮೊದಲ ಬಾರಿಗೆ ಕ್ಷೇತ್ರಕ್ಕೆ ಮೆಟ್ರೋ ರೈಲು ತಂದ ತೃಪ್ತಿ ಇದೆ.

ಆದರೆ, ಅದರ ಕೀರ್ತಿ ಈ ಭಾಗದ ಜನತೆಗೆ ಸಲ್ಲಬೇಕು. ನನ್ನ ಪ್ರಕಾರ ಬೆಂಗಳೂರು ನಗರದ ಪ್ರತಿಷ್ಠಿತ ಕ್ಷೇತ್ರ ಸಿ.ವಿ. ರಾಮನ್‌ನಗರ. ಇಲ್ಲಿ ಎಲ್ಲ ವರ್ಗದ ಜನತೆ ವಾಸಿಸುತ್ತಿದ್ದು ಎಲ್ಲರ ವಿಶ್ವಾಸ ಗಳಿಸಿದ್ದೇನೆ. ಈ ಕ್ಷೇತ್ರದಲ್ಲಿರುವ ಸುಸಂಸ್ಕೃತ ಹಾಗೂ ಬುದ್ಧಿವಂತ ಮತದಾರರು ಪ್ರತಿ ಕ್ಷಣವೂ ಗಮನಿಸುತ್ತಲಿದ್ದಾರೆ ಹಾಗೂ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕಂಡಿದ್ದಾರೆ.

ಆ ಮೂಲಕ ನನ್ನನ್ನು ಗುರುತಿಸಿದ್ದಾರೆ. ಕ್ಷೇತ್ರದ ಮತದಾರರು ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಈ ಬಾರಿ ಕೂಡ ಗೆಲ್ಲಿಸುವ ಮೂಲಕ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಚಾರ ಕಾರ್ಯದಲ್ಲಿ ಕೊನೇನಅಗ್ರಹಾರದ ಮಹಿಳೆಯರು, ಹಿರಿಯರು ಹಾಗೂ ಯುವಕರು ಶಾಸಕ ರಘು ಅವರ ಜೊತೆಗೂಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳ ವಿವರಗಳುಳ್ಳ ಕರಪತ್ರಗಳನ್ನು ಹಂಚುತ್ತಾ ಮತಯಾಚನೆ ಮಾಡಿದ್ದು ವಿಶೇಷವಾಗಿತ್ತು.

ಬೈಯಪ್ಪನಹಳ್ಳಿಯಲ್ಲಿ ರ್ಯಾಲಿ: ಸಂಜೆ ಬೈಯಪ್ಪನಹಳ್ಳಿ ಹಾಗೂ ಬೆನ್ನಿಗಾನಹಳ್ಳಿ ವಾರ್ಡ್‌ನ ದಯಾನಂದನಗರದಲ್ಲಿ ಬೃಹತ್‌ ರ್ಯಾಲಿ ಮೂಲಕ ಎಸ್‌. ರಘು ಅವರು ಪ್ರಚಾರ ಕಾರ್ಯವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು ಎಂದು ಬಿಬಿಎಂಪಿ ಮಾಜಿ ಸದಸ್ಯ ಎಂ.ಕೃಷ್ಣ ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.