ಸಿಎಸ್‌ ಹೇಳಿಕೆ ವಿರೋಧಿಸಿ ಮೆಟ್ರೋ ನೌಕರರ ಆಕ್ಷೇಪಣೆ

Team Udayavani, Jun 28, 2018, 3:34 PM IST

ಬೆಂಗಳೂರು: ಬೇಡಿಕೆಗಳ ಈಡೇರಿಕೆ ಸಂಬಂಧ ಮೆಟ್ರೋ ನೌಕರರು, ಬಿಎಂಆರ್‌ಸಿಎಲ್‌ ಅಧಿಕಾರಿಗಳ ನ್ನೊಳಗೊಂಡ ತ್ರಿಪಕ್ಷೀಯ ಸಭೆ ನಡೆಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರ್‌ ಸಿಎಲ್‌ ನೀಡುವ ಒಟ್ಟು ವೇತನ ಒಪ್ಪಿಕೊಳ್ಳಿ. ಇಲ್ಲದಿದ್ದರೆ ಬೇರೆ ಕಡೆ ಉದ್ಯೋಗ ನೋಡಿಕೊಳ್ಳಬಹುದು ಎಂದು ಹೇಳಿರುವುದಾಗಿ ನೌಕರರ ಒಕ್ಕೂಟ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ.

ಮೆಟ್ರೋ ನೌಕರರ ಮುಷ್ಕರ ಕುರಿತಾದ ಅರ್ಜಿಗೆ ಸಂಬಂಧಿಸಿದಂತೆ ತ್ರಿಪಕ್ಷೀಯ ಸಭೆ ನಡೆಸಿ ಮುಖ್ಯಕಾರ್ಯದರ್ಶಿಯವರು ಹೈಕೋರ್ಟ್‌ಗೆ ಸಲ್ಲಿಸಿದ್ದ ವರದಿಗೆ ಬುಧವಾರ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ಒಕ್ಕೂಟದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದು, ಅದರಲ್ಲಿ ಈ ಆರೋಪ ಮಾಡಲಾಗಿದೆ. 

ಜೂ.15ರಂದು ಮೆಟ್ರೋ ನೌಕರರ ಸಂಘ, ಬಿಎಂಆರ್‌ಸಿಎಲ್‌, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯ ಕಾರ್ಯದರ್ಶಿಗಳು, ಬಿಎಂಆರ್‌ಸಿಎಲ್‌ ನೀಡುವ ವೇತನ ಭತ್ಯೆ ಒಪ್ಪಿಕೊಳ್ಳಿ, ಇಲ್ಲವೇ ಪರ್ಯಾಯ ಉದ್ಯೋಗ ನೋಡಿಕೊಳ್ಳಬ ಹುದು. ಮೆಟ್ರೋದಲ್ಲಿ ಕಡಿಮೆ ವೇತನಕ್ಕೆ ದುಡಿಯಲು ಲಕ್ಷಾಂತರ ಮಂದಿ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ಆಕ್ಷೇಪಣೆಯಲ್ಲಿ ವಿವರಿಸಲಾಗಿದೆ. ಅಲ್ಲದೆ, ಮುಷ್ಕರ ಹಿಂತೆಗೆದುಕೊಳ್ಳಲು ಭರವಸೆ ನೀಡಿದ್ದಾರೆ ಎಂಬ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

  • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

  • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

  • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

  • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...