ಹಸಿರು ಪಟಾಕಿಗಳ ಉತ್ಪಾದನೆಯಲ್ಲೂ ಕುಸಿತ


Team Udayavani, Oct 23, 2022, 12:07 PM IST

ಹಸಿರು ಪಟಾಕಿಗಳ ಉತ್ಪಾದನೆಯಲ್ಲೂ ಕುಸಿತ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಮಣ್ಣಿನ ಹಣತೆ, ದೀಪದ ಬುಟ್ಟಿಗಳು ಹಾಗೂ ಪಟಾಕಿಗಳದ್ದೇ ಸದ್ದು. ಆದರೆ, ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾದಿಂದಾಗಿ ಹಬ್ಬ, ಆಚರಣೆಗಳು ಕಳೆಗುಂದಿದ್ದವು. ಈ ಬಾರಿ ಎಲ್ಲಾ ಆಚರಣೆಗಳನ್ನು ಅದ್ಧೂರಿಯಾಗಿ ನಡೆಸುತ್ತಿದ್ದು, ಅದರಲ್ಲೂ ದೀಪಾವಳಿ ಹಬ್ಬ ಎಲ್ಲರ ಮನೆಯಲ್ಲಿ ಬೆಳಕಿನ ಸಂಭ್ರಮವನ್ನು ಹೆಚ್ಚಿಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಸೇರಿದಂತೆ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಜಾಗೃತಿ ಹೆಚ್ಚುತ್ತಿದ್ದು, ಪಟಾಕಿಗಳನ್ನು ಹಚ್ಚುವುದು ಕಡಿಮೆಯಾಗಿರುವುದು ಮಾತ್ರವಲ್ಲದೇ, ಪಟಾಕಿಗಳ ಉತ್ಪಾದನೆಯಲ್ಲಿಯೂ ಕುಂಠಿತವಾಗುತ್ತಿದೆ. ನಗರದ ಪಟಾಕಿ ಮಾರಾಟಗಾರರು ಸಾಮಾನ್ಯವಾಗಿ ವಿಜಯಕಾಶಿ, ಹೂಸೂರು, ಚಂದಾಪುರ, ಅತ್ತಿಬೆಲೆ ಯಲ್ಲಿನ ಉತ್ಪಾದಕರ ಬಳಿ ಖರೀದಿಸಲಾಗುತ್ತಿದ್ದು, ನಗರದ ಮಲ್ಲೇಶ್ವರಂ, ರಾಜಾಜಿನಗರ, ಹಲಸೂರು ಆಟದ ಮೈದಾನಗಳಲ್ಲಿ ಪಟಾಕಿ ಮಳಿಗೆಗಳನ್ನು ಹಾಕಲಾಗಿದೆ. ರಾಜಾಜಿನಗರದ ಕೆಎಲ್‌ಇ ಕಾಲೇಜು ಮೈದಾನದಲ್ಲಿ 20ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗಿದೆ.

ಈ ಬಾರಿ ಹಬ್ಬವನ್ನು ಸಂಭ್ರಮ- ಸಡಗರದಿಂದ ಆಚರಿಸಲಾಗುತ್ತಿದ್ದು, ಪಟಾಕಿ ಹೊಡೆಯುವುದು ಒಂದು ಸಂಪ್ರದಾಯ ಅಥವಾ ಸಂಸ್ಕೃತಿ ಎಂದು ನಂಬಿದವರು ಬಂದು ಹಸಿರು ಪಟಾಕಿಗಳನ್ನು ಖರೀದಿಸುತ್ತಿದ್ದಾರೆ. ಆದರೆ, ಈ ಸಲ ಉತ್ಪಾದನೆಯ ಮಟ್ಟ ಕಡಿಮೆಯಾಗಿದ್ದು, ಸುಮಾರು 10 ಲಕ್ಷ ರೂ. ಗಳ ಆರ್ಡರ್‌ ನೀಡಿದರೆ, ಉತ್ಪಾದಕರು ಕೇವಲ 4-5 ಲಕ್ಷ ರೂ.ಗಳ ಪಟಾಕಿಗಳನ್ನು ಮಾತ್ರ ನೀಡುತ್ತಿದ್ದಾರೆ. ಅಲ್ಲದೇ, ಶೇ. 20-25ರಷ್ಟು ಡೀಲರ್ ಬೆಲೆಯನ್ನು ಹೆಚ್ಚಿಸಲಾಗಿದೆ.

ಅಲ್ಲದೇ, ಇತ್ತೀಚಿನೆ ದಿನಗಳಲ್ಲಿ ಪಟಾಕಿ ಹಚ್ಚುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಮುಂದಿನ ಐದು-ಹತ್ತು ವರ್ಷಗಳಲ್ಲಿ ಪಟಾಕಿ ಹಚ್ಚುವವರ ಸಂಖ್ಯೆಯೇ ಇಲ್ಲದಂತಾಗಬಹುದು ಎಂದು ಪಟಾಕಿ ಅಂಗಡಿಯ ಮಾಲೀಕರೊಬ್ಬರು ತಿಳಿಸುತ್ತಾರೆ. ಸುಮಾರು 22 ವರ್ಷಗಳಿಂದ ಪಟಾಕಿ ಮಾರಾಟ ಮಾಡಲಾಗುತ್ತಿದೆ. ಅದರಲ್ಲೂ ಸರ್ಕಾರದ ಅದೇಶದ ನಂತರ ಸಂಪೂರ್ಣವಾಗಿ ಹಸಿರು ಪಟಾಕಿಗಳನ್ನೇ ಮಾರಾಟ ಮಾಡಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ವ್ಯಾಪಾರ ನಷ್ಟದಲ್ಲಿತ್ತು. ಆದರೆ, ಈ ಬಾರಿ ಅದ್ಧೂರಿಯಾಗಿ ದೀಪಾವಳಿಯನ್ನು ಆಚರಿಸಲಾಗುತ್ತಿ ದೆ. ರಜಾ ದಿನಗಳಾದ ಭಾನುವಾರ, ಸೋಮವಾರ ಗ್ರಾಹಕರ ಆಗಮನ ಹೆಚ್ಚಬಹುದಾಗಿದೆ. ಕೆಲವರು ಶಾಸ್ತ್ರಕ್ಕೆಂದು ಅಥವಾ ಮಕ್ಕಳ ಖುಷಿಗೆಂದು ಪಟಾಕಿ ಹೊಡೆದರೆ, ಇನ್ನೂ ಕೆಲವರು ಚಟಕ್ಕೆ ಹೊಡೆಯುತ್ತಾರೆ. ಆದರೆ, ಬಹುತೇಕರಲ್ಲಿ ಜಾಗೃತಿ ಮೂಡಿದೆ ಎಂದು ಪಟಾಕಿ ಅಂಗಡಿ ಮಾಲೀಕರಾದ ಮೀನಾ ತಿಳಿಸುತ್ತಾರೆ.

ನಗರದಲ್ಲಿ ಈಗಾಗಲೇ ಪಟಾಕಿಗಳ ಸದ್ದು ಶುರುವಾಗಿದ್ದು, ವ್ಯಾಪಾರವು ಚೆನ್ನಾಗಿ ನಡೆಯುತ್ತಿದೆ. ಕೊರೊನಾ ಸಂದರ್ಭಕ್ಕಿಂತ ಶೇ.20-30ರಷ್ಟು ಹೆಚ್ಚು ವ್ಯಾಪಾರ ಆಗಿದೆ. ಸರಣಿ ರಜಾದಿನಗಳು ಬಂದಿರುವ ಕಾರಣ ಈಗಾಗಲೇ ನಮ್ಮ ಅಂಗಡಿಯಲ್ಲಿ ಶೇ.80ರಷ್ಟು ಪಟಾಕಿ ಖರೀದಿಯಾಗಿದ್ದು, ಈ ಬಾರಿ ಶೇ.100 ರಷ್ಟು ವ್ಯಾಪಾರವಾಗಲಿದ್ದು, ಹಬ್ಬದ ದಿನಗಳಲ್ಲಿ ಪಟಾಕಿಗಳ ಕೊರತೆಯುಂಟಾಗಬಹುದು. ಗ್ರಾಹಕರು ಹೆಚ್ಚಿನ ಬೆಲೆಯನ್ನು ಲೆಕ್ಕಿಸದೇ, ಹಸಿರು ಪಟಾಕಿಗಳನ್ನು ಖರೀದಿಸುತ್ತಿದ್ದಾರೆ ಎಂದು ಪಟಾಕಿ ಅಂಗಡಿ ಮಾಲೀಕ ರಾಜ ಅವರು ತಿಳಿಸುತ್ತಾರೆ.

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.