ಗಾಯನ-ಜ್ಞಾನ ದಿವ್ಯಾಂಗರ ಆಸ್ತಿ

Team Udayavani, Jul 21, 2019, 3:03 AM IST

ಬೆಂಗಳೂರು: ದಿವ್ಯಾಂಗ ವಿದ್ಯಾರ್ಥಿಗಳಲ್ಲಿ ಗಾಯನ ಮತ್ತು ಜ್ಞಾನ ಅಪರಿಮಿತವಾಗಿರುತ್ತದೆ. ಇದು ಅವರಲ್ಲಿರುವ ವಿಶೇಷ ಪ್ರತಿಭೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಬಿ.ಕೆ. ರವಿ ಕಿವಿ ಮಾತು ಹೇಳಿದರು. ಬೆಂಗಳೂರು ವಿಶ್ವವಿದ್ಯಾನಿಲಯದ ಬ್ರೈಲ್‌ ಸಂಪನ್ಮೂಲ ಕೇಂದ್ರವು ಎನೇಬಲ್‌ ಇಂಡಿಯಾ ಸಹಯೋಗದಲ್ಲಿ ಶನಿವಾರ ಸೆಂಟ್ರಲ್‌ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ದೃಷ್ಟಿಹೀನತೆ ಹೊಂದಿರುವ ವ್ಯಕ್ತಿಗಳಿಗೆ ಉದ್ಯೋಗಾವಕಾಶಗಳ ಅರಿವು ಕಾರ್ಯಗಾರದಲ್ಲಿ ಮಾತನಾಡಿದರು.

ನಾನು ಕಂಡ ಹಾಗೆ ನಿಮ್ಮಲ್ಲಿ ವಿನಯ, ವಿಧೇಯತೆ ಮತ್ತು ಶ್ರದ್ಧೆ ವಿಶೇಷವಾಗಿ ಅಡಗಿದೆ. ನಿಮ್ಮ ನಾಲಿಗೆ ಮೇಲೆ ಸರಸ್ವತಿ ಸದಾ ಒಲಿದಿರುತ್ತಾಳೆ. ಹಾಗಾಗಿ ಆತ್ಮವಿಶ್ವಾಸದ ಕೊರತೆ ನಿಮ್ಮಲ್ಲಿ ಬರಬಾರದು. ನೀವು ನಿಶ್ಚಿತವಾಗಿ ಆ ಗುರಿ ತಲುಪುವುದರಲ್ಲಿ ಸಂದೇಹವಿಲ್ಲ ಎಂದು ಹುರಿದುಂಬಿಸಿದರು. ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಆರ್‌. ವೇಣುಗೋಪಾಲ್‌ ಮಾತನಾಡಿ, ಯಾರೂ ಪರಿಪೂರ್ಣರಲ್ಲ.

ಎಲ್ಲರಿಗೂ ಒಂದೊಂದು ಬಗೆಯ ಕೊರತೆಗಳಿರುತ್ತವೆ. ಹಾಗೆಯೇ ವಿಕಲಚೇತನರಾದ ನಿಮಗೂ ಕೊರತೆ ಇದೆ. ಆದರೆ ಅದನ್ನು ಎಲ್ಲರಿಗಿಂತ ಭಿನ್ನ ಕೊರತೆ ಎಂದು ನೀವು ಭಾವಿಸಬೇಕಾಗಿಲ್ಲ. ಅದನ್ನು ಮನಸ್ಸಿನಿಂದ ಕಿತ್ತೂಗೆದರೆ ನೀವು ಶ್ರೇಷ್ಠ ವಿದ್ಯಾರ್ಥಿಗಳಾಗಿ ಉನ್ನತ ಸ್ಥಾನಕ್ಕೇರುವಿರಿ. ಬ್ರೈಲ್‌ ಸೆಂಟರ್‌ ಮೂರು ವಿಶ್ವವಿದ್ಯಾನಿಲಯಗಳ ಅಧೀನಕ್ಕೆ ಒಳಪಡುತ್ತದೆ. ಆದರೆ ಈಗ ಇರುವ ಕೇಂದ್ರ ಚಿಕ್ಕದು ಎಂಬ ಕಾರಣಕ್ಕೆ ವಿಶಾಲ ಜಾಗಕ್ಕೆ ಬ್ರೈಲ್‌ ಸೆಂಟರ್‌ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆದಿದೆ. ಈ ಕೇಂದ್ರವನ್ನು ಜ್ಞಾನಭಾರತಿಗೆ ಸ್ಥಳಾಂತರ ಮಾಡುವುದು ಸೂಕ್ತ.

ಅಲ್ಲಿ ಸಾಕಷ್ಟು ಜಾಗವಿದೆ ಎಂದು ಅಭಿಪ್ರಾಯಪಟ್ಟರು. ಎನೇಬಲ್‌ ಇಂಡಿಯಾ ಸಂಸ್ಥೆಯ ನಿರ್ದೇಶಕ ಪ್ರಾಣೇಶ್‌ ನಗರಿ ಮಾತನಾಡಿ, ನಮ್ಮ ಸಂಸ್ಥೆ ಕಳೆದ 20 ವರ್ಷಗಳಿಂದ ವಿವಿಧ ಬಗೆಯ ಅಂಗ ವೈಕಲ್ಯತೆಯಿಂದ ಬಳಲುತ್ತಿರುವವರ ಏಳಿಗೆಗಾಗಿ ಶ್ರಮಿಸುತ್ತಾ ಬಂದಿದೆ. ಇದುವರೆಗೆ ಹದಿನೆಂಟು ಸಾವಿರ ಮಂದಿಗೆ ತರಬೇತಿ ನೀಡಿದ್ದರೆ, 7500 ಮಂದಿಗೆ ಉದ್ಯೋಗವಕಾಶವನ್ನೂ ಕಲ್ಪಿಸಿದೆ ಎಂದು ಹೇಳಿದರು. ಬ್ರೈಲ್‌ ಸಂಪನ್ಮೂಲ ಕೇಂದ್ರದ ನಿರ್ದೇಶಕಿ ಅರುಣಲತಾ, ಎನೇಬಲ್‌ ಇಂಡಿಯಾ ಸಂಸ್ಥೆಯ ನವೀನ್‌ ಕುಮಾರ್‌,ಪ್ರೀತಿ ಲೊಬೊ, ಅನಂದ .ಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ನಗರದ ಆಸ್ತಿ ತೆರಿಗೆ ಮಾಲೀಕರಿಗೆ ಆಸ್ತಿ ತೆರಿಗೆ ಜೊತೆಗೆ ಶೇ. 2ರಷ್ಟು ಭೂ ಸಾರಿಗೆ ಉಪ ಕರ ವಿಧಿಸುವುದು ಸೇರಿದಂತೆ 30ಕ್ಕೂ ಹೆಚ್ಚು ನಿರ್ಣಯಗಳಿಗೆ ಮಂಗಳವಾರ...

  • ಬೆಂಗಳೂರು: ಬಹುನಿರೀಕ್ಷಿತ ಕಾಮನ್‌ ಮೊಬಿಲಿಟಿ ಕಾರ್ಡ್‌ ಪರಿಚಯಿಸುವ ಕಾರ್ಯಕ್ಕೆ "ನಮ್ಮ ಮೆಟ್ರೋ'ದಲ್ಲಿ ಸಿದ್ಧತೆ ನಡೆದಿದ್ದು, ಈಗಾಗಲೇ ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ...

  • ಬೆಂಗಳೂರು: ದೇಶದಲ್ಲಿ ಶಾಂತಿ, ಸಾಮರಸ್ಯ, ಐಕ್ಯತೆಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಕ್ರಮ...

  • ಬೆಂಗಳೂರು: ಆರು ತಿಂಗಳಲ್ಲಿ ಬೆಂಗಳೂರಿನ ಚಿತ್ರಣ ಬದಲಾಯಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಮಂಗಳವಾರ...

  • ಬೆಂಗಳೂರು: ಯೂಟ್ಯೂಬ್‌ನಲ್ಲಿ ಸರಚೋರರ ಕರಾಮತ್ತು ವೀಕ್ಷಣೆ, ಆನ್‌ಲೈನ್‌ ತಾಣದಲ್ಲಿ ಕೃತ್ಯಕ್ಕೆ ಬೈಕ್‌ ಖರೀದಿ, ಪೊಲೀಸರಿಗೆ ಸಿಕ್ಕಿಬೀಳಬಾರದು ಎಂದು ದೇವರಿಗೆ...

ಹೊಸ ಸೇರ್ಪಡೆ