ಬಂಡೀಪುರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ
Team Udayavani, Mar 6, 2017, 3:45 AM IST
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಭಾನುವಾರ ಮಧ್ಯಾಹ್ನದ ವೇಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಕಳೆದೆರಡು ತಿಂಗಳಿಂದ ಬಸವಳಿದಿದ್ದ ಕಾಡು ಪ್ರಾಣಿಗಳಲ್ಲಿ ನವೋಲ್ಲಾಸ ಮೂಡಿಸಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಕೆಕ್ಕನಹಳ್ಳ, ಮರಳಹಳ್ಳ, ಕುಂದಕೆರೆ ಹೆಡಿಯಾಲ, ಬೇಲದಕುಪ್ಪೆ ಸೇರಿದಂತೆ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಅರಣ್ಯ ಪ್ರದೇಶಗಳಲ್ಲಿ ಅರ್ಧ ಗಂಟೆಗೂ ಹೆಚ್ಚಿನ ಕಾಲ, ಬಂಡೀಪುರ ಅರಣ್ಯ ವ್ಯಾಪ್ತಿಯ ಕುಳ್ಳನಬೆಟ್ಟದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.
ಇನ್ನೆರಡು ದಿನ ಮಳೆ ಸಂಭವ:
ಈ ಮಧ್ಯೆ, ರಾಜ್ಯದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮುಂದಿನ ಮೂರುದಿನಗಳ ಕಾಲ ಸಿಡಿಲು ಸಹಿತ ಸಾಧಾರಣ ಮಳೆ ಸುರಿಯುವ ಸಂಭವ ಇದೆ. ಅಲ್ಲದೆ, ಕರಾವಳಿ ಮತ್ತು ಒಳನಾಡಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ