ಹಗರಣಗಳೇ ಯುಪಿಎ ಸರ್ಕಾರದ ಸಾಧನೆ


Team Udayavani, Apr 14, 2019, 3:00 AM IST

hagarana

ಬೆಂಗಳೂರು: ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆದರೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಕಲಿದ್ದಲು ಖರೀದಿ, ಹೆಲಿಕಾಪ್ಟರ್‌ ಖರೀದಿ, ತರಂಗ ಗುತ್ಛ ಹರಾಜು, ಕಾಮನ್‌ವೆಲ್ತ್ ಕ್ರೀಡಾಕೂಟದ ಕಾಮಗಾರಿ, ಆದರ್ಶ ಹೌಸಿಂಗ್‌ ಸೊಸೈಟಿಯಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆಸಿದರು ಎಂದು ಆರೋಪಿಸಿದರು.

ಕಳೆದ ಐದು ವರ್ಷಗಳಲ್ಲಿ ಯಾವ ಹಗರಣವೂ ನಡೆದಿಲ್ಲ. ಪ್ರಧಾನಿಯಾಗಲಿ ಅಥವಾ ಅವರ ಸಚಿವ ಸಂಪುಟದ ಯಾವ ಸಚಿವರೇ ಆಗಲಿ ಭ್ರಷ್ಟಾಚಾರ ನಡೆಸಿಲ್ಲ ಎಂದು ಹೇಳಿದರು. ಭಯೋತ್ಪಾದನೆ ವಿರುದ್ಧ ನರೇಂದ್ರ ಮೋದಿ ಅವರು ಕಠಿಣ ಕ್ರಮ ಕೈಗೊಂಡಿದ್ದಾರೆ. ಜಿಎಸ್ಟಿ ಜಾರಿ ಮಾಡಿ ಏಕರೂಪ ತೆರಿಗೆ ತಂದಿದ್ದಾರೆ. ಕಪ್ಪು ಹಣಕ್ಕೆ ಕಡಿವಾಣ ಹಾಕಿದ್ದಾರೆ.

ಜನಪರ ಆಡಳಿತ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ನಾನು ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಇದರಿಂದಾಗಿ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಸಹಿಸದ ಕಾಂಗ್ರೆಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರು ಸಬ್‍ಅರ್ಬನ್‌ ರೈಲು ಯೋಜನೆಗೆ ಕೇಂದ್ರ ಬಜೆಟ್ನಲ್ಲಿ 17 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಮೆಟ್ರೋ 2ನೇ ಹಂತಕ್ಕೆ ಕೇಂದ್ರ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಆದ್ದರಿಂದ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಕೇಂದ್ರ ಸಚಿವನಾಗಿ ನಾನು ರಾಜ್ಯ ಮತ್ತು ಕೇಂದ್ರದ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಹಲವು ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಿದ್ದೇನೆ. ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ಬಿಬಿಎಂಪಿ, ಬಿಡಿಎ , ರಾಜ್ಯ ಸರ್ಕಾರಕ್ಕೆ ಬಿಡಿಸಿಕೊಡಲು ಕೇಂದ್ರ ರಕ್ಷಣಾ ಸಚಿವರನ್ನೇ ಬೆಂಗಳೂರಿಗೆ ಕರೆಸಿದ್ದನ್ನು ಕಾಂಗ್ರೆಸಿಗರು ಮರೆತಂತಿದೆ ಎಂದು ಲೇವಡಿ ಮಾಡಿದರು.

ಯಶವಂತಪುರದಲ್ಲಿ ಕೇಂದ್ರೀಯ ವಿದ್ಯಾಲಯ, ಜಾಲಹಳ್ಳಿಯಲ್ಲಿ ಪಾಸ್ಫೋರ್ಟ್‌ ಕಚೇರಿ ತೆರೆಯಲಾಗಿದೆ. ಇಷ್ಟೆಲ್ಲಾ ಮಾಡಿದ್ದರೂ ಕೃಷ್ಣಭೈರೇಗೌಡರು ನಾನು ಏನು ಮಾಡಿದ್ದೇನೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೆಲ್ಲ ಗಮನಿಸಲಿ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.