ಐಎಂಎ ಕಚೇರಿ ಮುಂದೆ ಉದ್ವಿಗ್ನ ಸ್ಥಿತಿ
Team Udayavani, Nov 18, 2019, 3:05 AM IST
ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯಿಂದ ವಂಚನೆಗೊಳಗಾದ ನೂರಾರು ಹೂಡಿಕೆದಾರರು ಏಕಾಏಕಿ ಭಾನುವಾರ ಸಂಜೆ ಕಮರ್ಷಿಯಲ್ ಸ್ಟ್ರೀಟ್ನಲ್ಲಿ ಸಭೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು.
ಕೆಲವು ಕಿಡಿಗೇಡಿಗಳು ಐಎಂಎ ಕಚೇರಿ ಮುಂದೆ ಭಾನುವಾರ ಸಂಜೆ ಸಭೆ ನಡೆಯಲಿದೆ ಎಂದು ವಾಟ್ಸ್ಆ್ಯಪ್ ಮೂಲಕ ವದಂತಿ ಹಬ್ಬಿಸಿದ್ದಾರೆ. ಇದರಿಂದಾಗಿ ಜನ ಏಕಾಏಕಿ ಸೇರಿದ್ದರು. ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಸಭೆ, ಪ್ರತಿಭಟನೆ ನಡೆಸಲು ಅವಕಾಶ ಕೊಟ್ಟಿಲ್ಲ. ಈ ಬಗ್ಗೆ ಜನರಿಗೆ ತಿಳಿಹೇಳಿ ಕಳುಹಿಸಲಾಗಿದೆ. ವದಂತಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ. ಶರಣಪ್ಪ ಹೇಳಿದರು.
ಮಹಿಳೆಯರು ಸೇರಿದಂತೆ ಏಕಾಏಕಿ ಇನ್ನೂರಕ್ಕೂ ಅಧಿಕ ಮಂದಿ ಐಎಂಎ ಕಚೇರಿ ಬಳಿ ಜಮಾಯಿಸಿದ್ದರು. ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಹಾಗೂ ಪುಲಕೇಶಿನಗರ ಪೊಲೀಸರು, ವಿಧಾನಸಭಾ ಉಪಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿದ್ದು, ಪ್ರತಿಭಟನೆ ನಡೆಸದಂತೆ ತಿಳಿಸಿದರು.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಒಂದು ಹಂತದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೇ ಹಲ್ಲೆಗೆ ಮುಂದಾಗುವ ವಾತಾವರಣ ಸೃಷ್ಟಿಯಾಗಿತ್ತು. ಹೀಗಾಗಿ ಲಘು ಲಾಠಿ ಪ್ರವಾಹ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!