ವಿಶೇಷ ಪ್ಯಾಕೇಜ್‌ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮೊರೆ
Team Udayavani, Aug 24, 2018, 6:00 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಶುಕ್ರವಾರ ನಡೆಯಲಿದ್ದು, ಮಳೆಯಿಂದ ಸಂಕಷ್ಟಕ್ಕೊಳಗಾಗಿರುವ ಕೊಡಗು ಹಾಗೂ ಮಲೆನಾಡು ಭಾಗದ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ ಸಂಬಂಧ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಜತೆಗೆ, ಕೇಂದ್ರ ಸರ್ಕಾರಕ್ಕೆ 5 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್‌ಗಾಗಿ ಪ್ರಸ್ತಾವನೆ ಸಲ್ಲಿಸುವ ಸಂಬಂಧ ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೇ ಕೊಡಗು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮಳೆಯಿಂದ ಬೆಳೆ ಹಾನಿ ಹಾಗೂ ಆಸ್ತಿ ನಷ್ಟ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಲಾಗಿದ್ದು, ಕೊಡಗಿನಲ್ಲಂತೂ ನೂರಾರು ಗ್ರಾಮಗಳನ್ನು ಸಂಪೂರ್ಣವಾಗಿ ಪುನರ್‌ನಿರ್ಮಿಸಬೇಕಿದೆ. ಒಟ್ಟಾರೆ ಎಲ್ಲದಕ್ಕೂ ಸುಮಾರು 15 ರಿಂದ 20 ಸಾವಿರ ಕೋಟಿ ರೂ. ಅಗತ್ಯದ ಅಂದಾಜು ಮಾಡಲಾಗಿದೆ.
ಹೀಗಾಗಿ, ಕೇಂದ್ರ ಸರ್ಕಾರದಿಂದ 5 ಸಾವಿರ ಕೋಟಿ ರೂ.ವರೆಗೆ ವಿಶೇಷ ಪ್ಯಾಕೇಜ್ ಪಡೆಯಲು ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ಸದ್ಯದಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸದನದ ನಾಯಕರ ನಿಯೋಗ ದೆಹಲಿಗೆ ತೆರಳಿ ವಿಶೇಷ ಪ್ಯಾಕೇಜ್‌ಗೆ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. ರಸ್ತೆ, ಸೇತುವೆ ನಿರ್ಮಾಣ, ತತಕ್ಷಣಕ್ಕೆ ಮನೆಗಳ ನಿರ್ಮಾಣಕ್ಕೆ ಸಾವಿರ ಕೋಟಿ ರೂ. ಬಿಡುಗಡೆ ಮಾಡಿ ನಂತರ ಪುನರ್ವಸತಿ, ಬೆಳೆ ಹಾನಿ ಪರಿಹಾರಕ್ಕೆ 4 ಸಾವಿರ ಕೋಟಿ ರೂ. ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರು ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ
ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ
ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು