ನೇಣಿಗೆ ಶರಣಾದ ವಿದ್ಯಾರ್ಥಿನಿ
Team Udayavani, Aug 27, 2018, 12:38 PM IST
ಬೆಂಗಳೂರು: “ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಮೊಬೈಲ್ನಲ್ಲಿ ಸಂದೇಶ ಟೈಪ್ ಮಾಡಿದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಣಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
ಶ್ರುತಿ (21) ಮೃತರು. ಶ್ರೀನಿವಾಸಪುರ ತಾಲೂಕಿನ ಶೃತಿ ಮೂರನೇ ವರ್ಷದ ಬಿ.ಎ ವ್ಯಾಸಾಂಗ ಮಾಡುತ್ತಿದ್ದು ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ಭಾನುವಾರ ಬೆಳಗ್ಗೆ 9 ಗಂಟೆಯಾದರೂ ತಿಂಡಿ ತಿನ್ನಲು ಬಂದಿರಲಿಲ್ಲ. ವಾರ್ಡ್ನ್ ಕೊಠಡಿ ಬಾಗಿಲು ತಟ್ಟಿದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಅನುಮಾನಗೊಂಡ ವಾರ್ಡನ್, ಹಾಸ್ಟೆಲ್ ಸಿಬ್ಬಂದಿ ಕರೆಸಿ ಕೊಠಡಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಶೃತಿಯ ಮೊಬೈಲ್ ಪತ್ತೆಯಾಗಿದ್ದು, ಮೊಬೈಲ್ನ ಮೆಸೇಜ್ ಬಾಕ್ಸ್ನಲ್ಲಿ “ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಪೋಷಕರು ತುಂಬಾ ಒಳ್ಳೆಯವರು, ನನ್ನ ಸಾವಿನ ಬಗ್ಗೆ ಅವರನ್ನು ಏನನ್ನೂ ಕೇಳಬೇಡಿ’ ಎಂಬ ಸಂದೇಶವಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸಹಪಾಠಿಗಳು, ವಾರ್ಡ್ನ್, ಪೋಷಕರ ಬಳಿ ಮಾಹಿತಿ ಪಡೆದುಕೊಳ್ಳಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
ವರಮಹಾಲಕ್ಷ್ಮೀ ಹಬ್ಬಕ್ಕೆ ಊರಿಗೆ ತೆರಳದೆ ಕೊಠಡಿಯಲ್ಲಿ ಒಬ್ಬರೇ ಇದ್ದ ಶ್ರುತಿ, ಶನಿವಾರ ರಾತ್ರಿಯೇ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದ್ದು, ಆಕೆಯ ಮೊಬೈಲ್ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹ್ರೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ