ಗೋಪಿಕೋನ್ಮಾದ ಕೃತಿ ಲೋಕಾರ್ಪಣೆ


Team Udayavani, Aug 7, 2017, 1:23 PM IST

gopikonmada.jpg

ಬೆಂಗಳೂರು: ಸಂಸ್ಕೃತದಿಂದ ಏಕಕಾಲದಲ್ಲಿ ಏಳು ಭಾಷೆಗಳಿಗೆ ಅನುವಾದಗೊಂಡು ಬಿಡುಗಡೆಯಾದ ಶ್ರೇಯಸ್ಸಿಗೆ ಪ್ರೊ.ಕೆ.ಇ.ರಾಧಾಕೃಷ್ಣ ಅವರ “ಗೋಪಿಕೋನ್ಮಾದ’ ಕೃತಿ ಭಾಜನವಾಗಿದೆ. ಈ ಕೃತಿಗೆ ರಾಷ್ಟ್ರಮಟ್ಟದ ಪ್ರಶಸ್ತಿಗಳು ದೊರೆಯಲಿ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ ವೆಂಕಟೇಶ ಆಶಯ ವ್ಯಕ್ತಪಡಿಸಿದರು. 

ಭಾನುವಾರ ಭಾರತೀಯ ವಿದ್ಯಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸ್ಕೃತದಿಂದ ಕನ್ನಡ ಸೇರಿ ದೇಶದ ಏಳು ಭಾಷೆಗಳಿಗೆ ಅನುವಾದಗೊಂಡ “ಗೋಪಿಕೋನ್ಮಾದ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ರಾಧಾಕೃಷ್ಣ ಅವರು ರಾಜ್ಯದ ಸೃಜನಶೀಲ ಪ್ರತಿಭೆಯಾಗಿದ್ದು, ಅವರಿಂದ ಹಲವಾರು ಉತ್ತಮವಾದ ಕೃತಿಗಳು ಹೊರಬಂದಿವೆ. ಅವರ “ಕಣ್ಣಕಾಡು’ ಕೃತಿಗೆ ಈಗಾಗಲೇ ಹಲವಾರು ಪ್ರಶಸ್ತಿಗಳು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಬರಲಿ. ಜತೆಗೆ ಅವರ ಗೋಪಿಕೋನ್ಮಾದ ಕೃತಿಯೂ ಸಹ ಸತ್ವಯುವಾಗಿದ್ದು, ಅದಕ್ಕೂ ಪ್ರಶಸ್ತಿಗಳು ಸಿಗಲಿ ಎಂದು ಆಶಿಸಿದರು. 

ಗೋಪಿಕೋನ್ಮಾದ ಕೃತಿಯನ್ನು ಸಂಸ್ಕೃತದಿಂದ ಕನ್ನಡ ಮತ್ತು ತುಳು ಭಾಷೆಗೆ ಪ್ರೊ.ಕೆ.ಇ.ರಾಧಾಕೃಷ್ಣ ಅವರು ಅನುವಾದ ಮಾಡಿದ್ದಾರೆ. ಉಳಿದಂತೆ ಡಾ.ಪಾರ್ವತಿ ಐತಾಳ ಅವರು ಮಲಯಾಳಂ, ಡಾ.ರಾಜೇಶ್ವರಿ ದಿವಾಕರ ಅವರು ತೆಲುಗು, ಡಾ.ಜ್ಯೋತಿರ್ಮಯಿ ಚೌಧರಿ ಬಂಗಾಳಿಗೆ, ಡಾ.ಎನ್‌.ಲಕ್ಷ್ಮಿ ಹಿಂದಿಗೆ ಹಾಗೂ ಅರವಿಂದ ಹೆಬ್ಟಾರ ಮರಾಠಿ ಭಾಷೆಗೆ ಅನುವಾದ ಮಾಡಿದ್ದಾರೆ. 

ಉಡುಪಿಯ ಯಕ್ಷ ಸಂಗೀತ ಗಾನ ವೈಭವಂ ತಂಡ ಗೋಪಿಕೋನ್ಮಾದವನ್ನು ಯಕ್ಷಗಾನ ರೂಪಕದಲ್ಲಿ ಕಟ್ಟಿಕೊಟ್ಟರು. ಜತೆಗೆ ಗೋಪಿಕೋನ್ಮಾದ ಆನ್‌ಲೈನ್‌ ಬಹುಭಾಷಾ ಧ್ವನಿ ಸುರುಳಿ ಬಿಡುಗಡೆಗೊಳಿಸಿದರು.  

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಮತ್ತು ಅವರ ಪತ್ನಿ ಕನ್ನಿಕಾ ಪರಮೇಶ್ವರ, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ಯದುಗಿರಿ ಯತಿರಾಜ ಮಠದ ಯತಿರಾಜ ಜೀಯರ್‌ ಸ್ವಾಮೀಜಿ, ನಿವೃತ್ತ ಪೊಲೀಸ್‌ ಅಧಿಕಾರಿ ಅಜಯ್‌ಕುಮಾರ್‌ ಸಿಂಗ್‌, ಲೇಖಕ ಉದಯ್‌ ಧರ್ಮಸ್ಥಳ, ಮಾಜಿ ಸಚಿವ ಎ.ಬಿ.ಪಾಟೀಲ ಸೇರಿ ಪ್ರಮುಖರು ಹಾಜರಿದ್ದರು. 

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.