Theft: ಖರೀದಿ ನೆಪದಲ್ಲಿ ಚಿನ್ನ ದೋಚುತ್ತಿದ್ದ ಕಳ್ಳಿಯರು

Team Udayavani, Sep 3, 2023, 11:55 AM IST

Theft: ಖರೀದಿ ನೆಪದಲ್ಲಿ ಚಿನ್ನ ದೋಚುತ್ತಿದ್ದ ಕಳ್ಳಿಯರು

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಮಹಿಳೆಯರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಕೃಷ್ಣವೇಣಿ(60) ಮತ್ತು ರತ್ನ ಪೆರುಮಾಳ್‌(45) ಬಂಧಿತರು. ಆರೋಪಿಗಳು ಏ.23ರಂದು ಬನಶಂಕರಿ 2ನೇ ಹಂತದ ಬನಶಂಕರಿ ಬಿಡಿಎ ಕಾಂಪ್ಲೆಕ್ಸ್‌ ಎದುರಿನ ಜ್ಯುವೆಲ್ಲರಿ ಮಳಿಗೆಯೊಂದರಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು 142 ಗ್ರಾಂ ತೂಕದ 6 ಜತೆ ಚಿನ್ನದ ಜುಮುಕಿ ಕದ್ದು ಪರಾರಿಯಾಗಿದ್ದರು. ಇಬ್ಬರು ಆರೋಪಿಗಳು ವೃತ್ತಿಪರ ಕಳ್ಳಿಯರಾಗಿದ್ದು, 10 ವರ್ಷದ ಹಿಂದೆ ಚಿಕ್ಕಪೇಟೆ, ನಂದಿನಿ ಲೇಔಟ್‌, ಮಲ್ಲೇಶ್ವರ, ಮಾಲೂರು ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಜ್ಯುವೆಲ್ಲರಿ ಅಂಗಡಿಗಳಲ್ಲಿ ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಕದ್ದಿದ್ದರು. ಈ ಸಂಬಂಧ ಜೈಲು  ಸೇರಿದ್ದರು. ಬಳಿಕ ಜಾಮೀನು ಪಡೆದು ಹೊರಬಂದು ತಮ್ಮ ಕಳ್ಳತನ ಚಾಳಿ ಮುಂದುವರೆಸಿದ್ದರು. ಕಳೆದ ಏಪ್ರಿಲ್‌ನಲ್ಲಿ ಬನಶಂಕರಿ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿ ಅಂಗಡಿಯಲ್ಲಿ ತಮ್ಮ ಕೈ ಚಳಕ ತೋರಿಸಿ ಪರಾರಿಯಾಗಿದ್ದರು. ಇದೀಗ 10 ವರ್ಷಗಳ ಬಳಿಕ ಮತ್ತೆ ಸಿಕ್ಕಿಬಿದ್ದಿದ್ದಾರೆ.

ಬೆರಳಚ್ಚು ಸುಳಿವು: ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದರು. ಬಳಿಕ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಆರೋಪಿಗಳ ಮುಖ ಚಹರೆ ಪತ್ತೆ ಹಚ್ಚಿ, ತಮಿಳುನಾಡಿಗೆ ತೆರಳಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬೆರಳಚ್ಚು ಸಂಗ್ರಹಿಸಿ ಹಿಂದಿನ ಕಳ್ಳತನ ಪ್ರಕರಣಗಳ ಆರೋಪಿಗಳ ಬೆರಳಚ್ಚುಗೆ ಹೋಲಿಸಿದಾಗ 10 ವರ್ಷದ ಹಿಂದೆ ಆರೋಪಿಗಳು ನಗರದಲ್ಲಿ ಬಂಧನಕ್ಕೆ ಒಳಗಾಗಿರುವುದು ಗೊತ್ತಾಗಿದೆ. ಆದರೆ, ಬೆರಳಚ್ಚು ಹೋಲಿಕೆ ಆದರೂ ಹೆಸರುಗಳು ಮಾತ್ರ ಬೇರೆ ಇತ್ತು. ಈ ಸಂಬಂಧ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು, ಪೊಲೀಸರಿಗೆ ಸಿಕ್ಕಿಬಿದ್ದಾಗ ಅಸಲಿ ಹೆಸರು ಹೇಳದೆ ಬೇರೆ ಹೆಸರು ಹೇಳುತ್ತಿದ್ದರು. ಒಂದೊಂದು ಪೊಲೀಸ್‌ ಠಾಣೆಯಲ್ಲಿ ಒಂದೊಂದು ಹೆಸರು ಹೇಳಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. ಕಲಾ, ರತ್ನ, ಸುಮಾ, ಮಾಲಾ ಸೇರಿ ಬೇರೆ ಬೇರೆ ಹೆಸರುಗಳನ್ನು ಹೇಳಿರುವುದು ಗೊತ್ತಾಗಿದೆ ಎಂದರು.

ಗಮನ ಬೇರೆಡೆ ಸೆಳೆದು ಕೃತ್ಯ:

ಚಿನ್ನಾಭರಣ ಮಳಿಗೆಗಳಿಗೆ ಗ್ರಾಹಕರ ಸೋಗಿನಲ್ಲಿ ತೆರಳುತ್ತಿದ್ದ ಆರೋಪಿಗಳು, ಹತ್ತಾರು ವಿನ್ಯಾಸದ ಒಡವೆಗಳನ್ನು ತೋರಿಸುವಂತೆ ಕೇಳುತ್ತಿದ್ದರು. ಅಂಗಡಿ ಸಿಬ್ಬಂದಿ ಚಿನ್ನಾಭರಣದ ಟ್ರೇಗಳನ್ನು ಟೇಬಲ್‌ ಮೇಲೆ ಇರಿಸಿದ ಬಳಿಕ ಒಂದೊಂದೇ ಒಡವೆಗಳನ್ನು ಆರೋಪಿಗಳು ಪರಿಶೀಲಿಸುವಂತೆ ನಾಟಕ ಮಾಡುತ್ತಿದ್ದರು. ಕೆಲ ಸಮಯದ ಬಳಿಕ ಬೇರೆ ವಿನ್ಯಾಸದ ಒಡವೆ ತೋರಿಸುವಂತೆ ಕೇಳಿ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಎಗರಿಸುತ್ತಿದ್ದರು. ಅಸಲಿ ಆಭರಣವಿದ್ದ ಜಾಗಕ್ಕೆ ಕಡಿಮೆ ಗುಣಮಟ್ಟದ ಹಾಗೂ ಕಡಿಮೆ ತೂಕದ ಆಭರಣ ಇರಿಸುತ್ತಿದ್ದರು. ಬಳಿಕ ಈ ಒಡವೆಗಳು ಇಷ್ಟವಾಗಲಿಲ್ಲ ಎಂದು ಹೇಳಿ ಜಾಗ ಖಾಲಿ ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ಗೊತ್ತಾಗಿದೆ.

ಟಾಪ್ ನ್ಯೂಸ್

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.