ಮೀಸಲಿನಲ್ಲಿ ಬದಲು ಇಲ್ಲ; ಸಚಿವರ ವಿರೋಧ ಹಿನ್ನೆಲೆ
Team Udayavani, Nov 20, 2018, 6:00 AM IST
ಬೆಂಗಳೂರು: ತೀವ್ರ ವಿವಾದಕ್ಕೊಳಗಾಗಿದ್ದ ಕೆಪಿಎಸ್ಸಿ ನೇಮಕಾತಿಯಲ್ಲಿ ಎಸ್ಸಿ, ಎಸ್ಟಿ, ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ನಿರಾಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸೋಮವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ಕುರಿತು ಪ್ರಸ್ತಾಪವಾಗಿ ಕೆಪಿಎಸ್ಸಿ ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ ವಿಚಾರ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆಯಾಗಿ ಬಹುತೇಕ ಸಚಿವರು ವಿರೋಧ ವ್ಯಕ್ತಪಡಿಸಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದರು. ಹೀಗಾಗಿ, ಈ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.ಅಗತ್ಯಬಿದ್ದರೆ ಕಾಯ್ದೆಗೆ ತಿದ್ದುಪಡಿ ಹಾಗೂ ಹೊಸದಾಗಿ ನಿಯಮಾವಳಿ ರೂಪಿಸಲು ಸಹ ಸಂಪುಟ ಸಭೆ ಒಪ್ಪಿಗೆ ನೀಡಿತು ಎಂದು ಹೇಳಲಾಗಿದೆ.
ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಕೆಪಿಎಸ್ಸಿ ನೇಮಕಾತಿಯಲ್ಲಿ ಎಸ್ಸಿ-ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ನಿರಾಕರಿಸುವ ವಿಚಾರ ಸರ್ಕಾರದ ತೀರ್ಮಾನವಲ್ಲ. ಒಂದೊಮ್ಮೆ ಆ ರೀತಿ ಇದ್ದರೆ ಅಗತ್ಯ ತಿದ್ದುಪಡಿ ಅಥವಾ ಕಾನೂನು ರೂಪಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಯಾವುದೇ ಗೊಂದಲ ಅಗತ್ಯವಿಲ್ಲ. ಕೆಪಿಎಸ್ಸಿ ನೇಮಕಾತಿಯಲ್ಲಿ ಹಾಲಿ ಯಾವ ವ್ಯವಸ್ಥೆ ಇದೆಯೋ ಅದೇ ವ್ಯವಸ್ಥೆ ಮುಂದುವರಿಯಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು.
ಸಲಹೆ ನಂತರ ತೀರ್ಮಾನ: ಎಸ್ಸಿ-ಎಸ್ಟಿ ಮುಂಬಡ್ತಿ ವಿಧೇಯಕ ಸಂಬಂಧ ಹಿರಿಯ ನ್ಯಾಯವಾದಿ ಮುಕುಲ್ ರೋಹಟಗಿ ಅವರಿಂದ ಕಾನೂನು ಸಲಹೆ ಕೇಳಲಾಗಿತ್ತು. ಅವರ ಸಲಹೆ ಬಂದ ನಂತರ ಆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ತೀರ್ಮಾನ ಕೈಗೊಳ್ಳಲು ಒತ್ತಾಯ
ಎಸ್ಸಿ-ಎಸ್ಟಿ ಮುಂಬಡ್ತಿ ವಿಧೇಯಕ ಕುರಿತು ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿ ಆದಷ್ಟು ಶೀಘ್ರ ಈ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಒತ್ತಡ ಹೇರಿದರು. ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ ಎನ್ನುವ ಕಾರಣಕ್ಕೆ ಮುಂದೂಡುವುದು ಸರಿಯಲ್ಲ. ನ್ಯಾಯಾಲಯ ವಿಚಾರಣೆಗೂ ಎಸ್ಸಿ -ಎಸ್ಟಿ ನೌಕರರಿಗೆ ತತ್ಸಮಾನ ಹುದ್ದೆ ಕಲ್ಪಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗೂ ಸಂಬಂಧವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ