ಸಂಖ್ಯೆ ಹೆಚ್ಚಿದರೆ ಆಸನಗಳಿಲ್ಲ

ವಾರ್ಡ್‌ ಹೆಚ್ಚಿದಂತೆ ಸದಸ್ಯರ ಸಂಖ್ಯೆ ಅಧಿಕ | ಸಭಾಂಗಣದಲ್ಲಿ ಕೂರಲು ತೊಂದರೆ

Team Udayavani, Sep 20, 2020, 1:02 PM IST

ಸಂಖ್ಯೆ ಹೆಚ್ಚಿದರೆ ಆಸನಗಳಿಲ್ಲ

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 225ಕ್ಕೆ ಹಾಗೂ ಹಾಲಿ ನಾಮನಿರ್ದೇಶಿತರ ಸಂಖ್ಯೆಯನ್ನು ಶೇ. 15 ಪ್ರತಿಶತ ಹೆಚ್ಚಳ ಮಾಡಲು ಬಿಬಿಎಂಪಿ ಕಾಯ್ದೆಯಲ್ಲಿ ಉದ್ದೇಶಿಸಲಾಗಿದೆ. ಆದರೆ, ಅಷ್ಟು ಸದಸ್ಯರು ಕುಳಿತುಕೊಳ್ಳಲು ಈಗಿನ ಕೌನ್ಸಿಲ್‌ ಸಭಾಂಗಣದಲ್ಲಿ ಜಾಗ ಇಲ್ಲ.

ಪಾಲಿಕೆಯ ಕೇಂದ್ರ ಕಚೇರಿಯ ಕೆಂಪೇಗೌಡ ಪೌರ ಸಭಾಂಗಣ (ಕೌನ್ಸಿಲ್‌ ಕಟ್ಟಡ)ದಲ್ಲಿ ಇರುವ ಆಸನಗಳ ಸಂಖ್ಯೆ 270 ಮಾತ್ರ. ವಾರ್ಡ್ ಗಳಸಂಖ್ಯೆ 225ಕ್ಕೆಹೆಚ್ಚಿಸಿನಾಮನಿರ್ದೇಶಿತರ ಸಂಖ್ಯೆ ಶೇ.15 ರಷ್ಟು ಮಾಡಿದರೆ 34 ಸದಸ್ಯರು  ಸೇರ್ಪಡೆಯಾಗಿ ಸಂಖ್ಯೆ 259ಕ್ಕೆ ಏರುತ್ತದೆ. ಜತೆಗೆ 28 ಶಾಸಕರು, ವಿಧಾನಪರಿಷತ್‌, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಸೇರಿ ಸುಮಾರು 70 ಮಂದಿಗೂ ಆಸನ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ.

ಹೀಗಾದರೆ, 329 ಮಂದಿಗೆ ಆಸನ ವ್ಯವಸ್ಥೆಯಾಗಬೇಕು. ಈಗಿರುವ ಕೌನ್ಸಿಲ್‌ ಸಭಾಂಗಣದಲ್ಲಿ ಇಷ್ಟು ಜನ ಕುಳಿತುಕೊಳ್ಳಲು ಸಾಧ್ಯವಿಲ್ಲ. ಬಿಬಿಎಂಪಿ ಕಾಯ್ದೆ ಜಾರಿಯಾದರೆ ಹೊಸದಾಗಿ ಕೌನ್ಸಿಲ್‌ ಸಭಾಂಗಣ ಸಹ ನಿರ್ಮಾಣ ಮಾಡಬೇಕುತ್ತದೆ. ಪ್ರಸ್ತುತ ಕೌನ್ಸಿಲ್‌ ಸಭಾಂಗಣದಲ್ಲಿ 198 ಸದಸ್ಯರು, 20 ನಾಮನಿರ್ದೇಶಿತ ಸದಸ್ಯರು ಹಾಗೂ 70 ಶಾಸಕರು-ಸಂಸದರು ಸೇರಿದಂತೆ 270 ಸದಸ್ಯರಿಗೆ ಕೂರಲು ಅವಕಾಶವಿದೆ. ಇದೀಗ ವಾರ್ಡ್‌ಗಳ ಸಂಖ್ಯೆ ಹೆಚ್ಚಳವಾಗಿ ಸದಸ್ಯರ ಸಂಖ್ಯೆಯೂ ಜಾಸ್ತಿಯಾದರೆ ಪ್ರತ್ಯೇಕ ಸಭಾಂಗಣವೇ ಬೇಕಾಗಲಿದೆ.

ಲೋಪ: ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿಈಹಿಂದೆ ನೂರು ಆಸನಗಳ ವ್ಯವಸ್ಥೆ ಇತ್ತು. 2007ರಲ್ಲಿ 110 ಹಳ್ಳಿಗಳ ಸೇರ್ಪಡೆಯಾದ ಮೇಲೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಎಂದು ಬದಲಾಯಿಸಲಾಯಿತು.ಈವೇಳೆ ಪಾಲಿಕೆ ಸದಸ್ಯರ ಸಂಖ್ಯೆಯೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಹಾಲಿ ಸಭೆಯ ಆಸನ ವ್ಯವಸ್ಥೆಯನ್ನೇ 198ಕ್ಕೆ ಹೆಚ್ಚಳ ಮಾಡಿ ಬದಲಾವಣೆ ಮಾಡಲಾಗಿತ್ತು. ಜಾಗದ ಸಮಸ್ಯೆ ಎದುರಾಗಿದ್ದರಿಂದ ಪ್ರತಿ ಸದಸ್ಯರಿಗೂ ಪ್ರತ್ಯೇಕ ಆಸನ ಬದಲು ಮೂರು ಸದಸ್ಯರು ಒಂದೇ ಆಸನದಲ್ಲಿ ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ತುರ್ತಾಗಿ ಸಭಾಂಗಣದಿಂದ ಹೊರಕ್ಕೆ ಬರುವ ಮಾರ್ಗ ಗಳು ಇಲ್ಲ.  ಇದೀಗ ವಾರ್ಡ್‌ಗಳ ಸಂಖ್ಯೆ ಹೆಚ್ಚಳವಾಗಿ ಮತ್ತಷ್ಟು ಸದಸ್ಯರು ಬಂದರೆ ಸಾಧ್ಯವೇ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

ಪಾಲಿಕೆ ಸೌಧ: ಈ ಮಧ್ಯೆ, ಮಾಜಿ ಮೇಯರ್‌ ಜಿ. ಪದ್ಮಾವತಿ ಹಾಗೂ ಬಿ.ಎನ್‌ ಮಂಜುನಾಥ್‌ ರೆಡ್ಡಿಅವರುಮೇಯರ್‌ಆಗಿದ್ದಸಂದರ್ಭದಲ್ಲಿ ವಿಧಾನಸೌಧದ ಮಾದರಿಯಲ್ಲೇ ಪಾಲಿಕೆ ಸೌಧ ನಿರ್ಮಾಣ ಮಾಡಬೇಕು. ಇದರಲ್ಲಿ ಪ್ರಮುಖ ವಿಭಾಗಗಳುಇರಬೇಕು.ಯುಟಿಲಿಟಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಪ್ರಸ್ತಾವನೆ ಇತ್ತು. ಆದರೆ, ಆ ಬಗ್ಗೆ ಕ್ರಿಯಾ ಯೋಜನೆ ಸಹ ಸಿದ್ಧಗೊಂಡಿಲ್ಲ.

ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿರುವ ಕುರ್ಚಿಗಳು ಕಿರಿದಾಗಿವೆ. ಹೆಚ್ಚು ಜನ ಸೇರಿದರೆ ಸಮಸ್ಯೆ ಆಗಲಿದೆ. ಈ ಬಗ್ಗೆ ಸರ್ಕಾರ ಆಲೋಚನೆ ಮಾಡಿದಂತಿಲ್ಲ ಜಿ. ಪದ್ಮಾವತಿ, ಮಾಜಿ ಮೇಯರ್‌

ಸರ್ಕಾರ ಯಾವುದೇ ಮುಂದಾಲೋಚನೆ ಇಲ್ಲದೆ 60 ಹಳ್ಳಿಗಳನ್ನು ಸೇರ್ಪಡೆ ಮಾಡಲು ಮುಂದಾಗಿದೆ. ಈಗಾಗಲೇ ಸೇರ್ಪಡೆ ಆಗಿರುವ 110 ಹಳ್ಳಿಗಳ ಅಭಿವೃದ್ಧಿಯೇ ಆಗಿಲ್ಲ. ಇನ್ನು ಕೆಂಪೇಗೌಡ ಸಭಾಂಗಣದಲ್ಲಿ ಮೇಯರ್‌ ಚುನಾವಣೆ ನಡೆಯುವ ಸಂದರ್ಭದಲ್ಲಿ ಉಸಿರುಕಟ್ಟುವ ವಾತಾವರಣ ನಿರ್ಮಾಣ ಆಗುತ್ತದೆ. ಮತ್ತಷ್ಟು ಜನ ನೂತನ ಸದಸ್ಯರು ಬಂದರೆ ನೂತನ ಕಟ್ಟಡ ನಿರ್ಮಾಣ ಅನಿವಾರ್ಯವಾಗಲಿದೆ. ಎಂ.ಶಿವರಾಜು, ಆಡಳಿತ ಪಕ್ಷದ ಮಾಜಿ ನಾಯಕ

ಹಿತೇಶ್‌. ವೈ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.