ಸದನದಿಂದ ದೂರ ಉಳಿಯಲು ಚಿಂತನೆ
Team Udayavani, May 21, 2018, 6:55 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹುಮತ ಸಾಬೀತುಪಡಿಸುವ ದಿನ ಸದನದಿಂದ ದೂರ ಉಳಿಯುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿದೆ.
ಬಿಜೆಪಿಗೆ 104 ಸ್ಥಾನ ಬಂದು ಸರ್ಕಾರ ರಚನೆಗೆ ಪ್ರಯತ್ನಿಸಿದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ರಚನೆ ಮಾಡಿಕೊಂಡು ಅಧಿಕಾರದಿಂದ ದೂರ ಇಟ್ಟಿದ್ದನ್ನು ವಿರೋಧಿಸಲು ಅಂದು ಸದನಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಂದು ಆ ಕುರಿತು ತೀರ್ಮಾನಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸದಸ್ಯರು ಗೈರು ಹಾಜರಾಗುವುದರಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಬಹುಮತ ಸಾಬೀತಿಗೆ
ಯಾವುದೇ ತೊಂದರೆಯಾಗದು. 117 ಸಂಖ್ಯಾಬಲ ಇರುವುದರಿಂದ ಸಾಬೀತುಪಡಿಸಬಹುದು. ಆದರೆ,
ಸಾಂಕೇತಿಕವಾಗಿ ಪ್ರತಿಭಟಿಸಲು ಬಿಜೆಪಿ ಸದನದಿಂದ ದೂರ ಉಳಿಯುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ