ಮಂಗಳ ಮುಖಿಯರಿಗೆ ಶೀಘ್ರದಲ್ಲೇ ಮೀಸಲಾತಿ


Team Udayavani, Oct 27, 2017, 6:00 AM IST

tb-jayachandra-26.jpg

ಬೆಂಗಳೂರು: ಲೈಂಗಿಕ ಅಲ್ಪ ಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರ ಲೈಂಗಿಕ ಅಲ್ಪ ಸಂಖ್ಯಾತರ ನೀತಿ ಜಾರಿಗೆ ತರಲು ತೀರ್ಮಾನಿಸಿದೆ. ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡುವತ್ತ ಸರ್ಕಾರ ಚಿಂತಿಸಿದ್ದು, ಅದರ ಮೊದಲ ಹೆಜ್ಜೆಯಾಗಿ ಮಂಗಳ ಮುಖಿಯರ ಶ್ರೇಯೋಭಿವೃದ್ಧಿಗಾಗಿ ಪ್ರತ್ಯೇಕ ನೀತಿಯನ್ನು ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷವಾಗಿ ಲೈಂಗಿಕ ಅಲ್ಪ ಸಂಖ್ಯಾತರಿಗೆ ಸರ್ಕಾರಿ ಸವಲತ್ತುಗಳನ್ನು ಒದಗಿಸುವ ಕುರಿತು ಸುದೀರ್ಘ‌ ಚರ್ಚೆ ನಡೆಸಲಾಯಿತು. ಒಂದು ಹಂತದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುವ ಕುರಿತು ಸಭೆಯಲ್ಲಿ ಪ್ರಸ್ತಾಪವಾಯಿತಾದರೂ, ಮೊದಲು ಪ್ರತ್ಯೇಕ ನೀತಿಯನ್ನು ಜಾರಿಗೊಳಿಸಿ, ಅಗತ್ಯ ಕಾನೂನು ರೂಪಿಸಿ ಮೀಸಲಾತಿ ಸೌಲಭ್ಯವನ್ನು ಜಾರಿಗೊಳಿಸುವ ನಿರ್ಧಾರಕ್ಕೆ ಸಂಪುಟ ಸಭೆ ಬಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.

ಲೈಂಗಿಕ ಅಲ್ಪ ಸಂಖ್ಯಾತರಿಗೆ ಸಮಾಜದಲ್ಲಿ ಸಮಾನವಾಗಿ ಕಾಣಬೇಕು. ಸಂವಿಧಾನದ ಎಲ್ಲ ಸವಲತ್ತುಗಳು ದೊರೆಯಬೇಕೆಂದು 2014 ರಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಆಧರಿಸಿ, ರಾಜ್ಯದ ಮಂಗಳ ಮುಖಿಯರ ಶ್ರೇಯೋಭಿವೃದ್ಧಿಗಾಗಿ ನೂತನ ನೀತಿ ಜಾರಿಗೆ ತರಲು ಒಪ್ಪಿಗೆ ನೀಡಲಾಗಿದೆ.  ಜೋಗಪ್ಪ, ಜೋಗತಿ, ಹಿಜ್ರಾ, ಖೋತಿ, ಶಿವಶಕ್ತಿಗಳು ಮತ್ತು ಅರ್ವನಿಸ್‌, ಸಲಿಂಗ ರತಿಗಳು, ಪುರುಷತ್ವದಿಂದ ಮಹಿಳೆ, ಮಹಿಳೆಯಿಂದ ಪುರುಷರಾಗಿ ಲಿಂಗ ಪರಿವರ್ತಿಸಿಕೊಂಡವರು ಈ ನೀತಿ ವ್ಯಾಪ್ತಿಗೆ ಒಳಪಡಲಿದ್ದಾರೆ. ಅವರನ್ನು ತೃತಿಯ ಲಿಂಗಿಗಳು ಅಥವಾ ಲಿಂಗಪರಿವರ್ತಿತರು ಎಂದು ಕರೆಯಲು ತೀರ್ಮಾನಿಸಲಾಗಿದೆ.

ಹೊಸ ನೀತಿಯನ್ವಯ ಮಂಗಳ ಮುಖಿಯರನ್ನು ಸಾಮಾಜಿಕವಾಗಿ ಕೀಳು ಮಟ್ಟದಿಂದ ನೋಡುವಂತಿಲ್ಲ. ಬಸ್‌, ಪಾರ್ಕ್‌,  ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ತಾರತಮ್ಯ ಮಾಡುವಂತಿಲ್ಲ. ಮಂಗಳ ಮುಖಿಯರ ಲಿಂಗತ್ವ ಕಾರಣಕ್ಕೆ ಸಂವಿಧಾನಿಕವಾಗಿ ದೊರೆಯುವ ವಾಕ್‌ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸುವಂತಿಲ್ಲ.

ಅಂಗನವಾಡಿಯಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ಶಿಕ್ಷಣ ನೀಡಲು ಅವಕಾಶ ಕಲ್ಪಿಸುವುದು. ಶಾಲೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಂಗಳ ಮುಖೀಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಮಾಡುವುದು. ಬಾಲ್ಯದಲ್ಲಿಯೇ ಮಂಗಳ ಮುಖೀಯರ ಬಗ್ಗೆ ಅವರ ಕುಟುಂಬದಲ್ಲಿ ತೋರುವ ನಿರ್ಲಕ್ಷ್ಯ ತಡೆಗಟ್ಟಲು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ತೃತಿಯ ಲಿಂಗಿಗಳ ಕುಟುಂಬದ ಸದಸ್ಯರಿಗೆ ಮನವರಿಕೆ ಮಾಡಿಕೊಡುವುದು.

ಮಂಗಳ ಮುಖಿಯರಿಗೆ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಲು ಶಿಷ್ಯವೇತನ ನೀಡುವುದು. ಆರೋಗ್ಯ ಸೇವೆ ಪಡೆಯಲು ಕಾರ್ಡ್‌ ನೀಡುವುದು ಅಲ್ಲದೇ ಸರ್ಕಾರದ ಎಲ್ಲ ಸವಲತ್ತುಗಳು ಅವರಿಗೆ ದೊರೆಯುವಂತೆ ಕ್ರಮ ಕೈಗೊಳ್ಳಲು ನೂತನ ನೀತಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಂಗಳಮುಖಿಯರ ಶ್ರೇಯೋಭಿವೃದ್ಧಿಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಅಡಿಯಲ್ಲಿ ಪ್ರತ್ಯೇಕ ನಿರ್ದೇಶನಾಲಯ ತೆರೆಯುವುದು. ಜಿಲ್ಲಾ ಮಟ್ಟದಲ್ಲಿ ಕೌನ್ಸೆಲಿಂಗ್‌ ಕೇಂದ್ರಗಳನ್ನು ತೆರೆದು ಅವರಿಗೆ ಮನೋಸ್ಥೈರ್ಯ ತುಂಬುವ ಕಾರ್ಯ ಮಾಡಲು ನೂತನ ನೀತಿಯಲ್ಲಿ ತಿಳಿಸಲಾಗಿದೆ.

ಮಂಗಳ ಮುಖಿಯರ ಶ್ರೇಯೋಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸ್ವ ಸಹಾಯ ಸಂಘಗಳ ರಚನೆ ಮಾಡುವುದು. ಸಾರಿಗೆ ಇಲಾಖೆ ಚಾಲನಾ ಪರವಾನಗಿಯನ್ನು ನೀಡುವುದು. ಕಾರ್ಮಿಕ ಇಲಾಖೆ ಮಂಗಳ ಮುಖಿಯರಿಗೆ ಆಭರಣ ತೈಯಾರಿಕೆ, ಹೊಲಿಗೆ, ಪ್ರಸಾದನ, ಕಲೆ ಮುಂತಾದ ತರಬೇತಿ ನೀಡಿ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ನೀಡುವುದು. ಅಲ್ಲದೇ ಪ್ರತಿ ಐಟಿಐಗಳಲ್ಲಿ  5 ಸ್ಥಾನಗಳನ್ನು ಮಂಗಳ ಮುಖಿಯರಿಗೆ ಮೀಸಲಿಡಲು ನಿರ್ಧರಿಸಲಾಗಿದೆ. ಐಐಟಿ ಮತ್ತು ಪಾಲಿಟೆಕ್ನಿಕ್‌ ಕೋರ್ಸ್‌ಗಳಲ್ಲಿಯೂ ಐದು ಸ್ಥಾನ ಮೀಸಲಿಡುವಂತೆ ಹೊಸ ನೀತಿಯಲ್ಲಿ ಸೇರಿಸಲಾಗಿದೆ.

ವಿಶೇಷ ಘಟಕ ಸ್ಥಾಪನೆ
ಮಂಗಳ ಮುಖಿಯರನ್ನು ಮುಖ್ಯವಾಹಿನಿಗೆ ತರಲು ವಿಶೇಷ ಘಟಕ ಸ್ಥಾಪನೆ ಮಾಡುವ ಕುರಿತು ಸಂಪುಟ ತೀರ್ಮಾನಿಸಿದೆ. ಆದರೆ, ಹಣಕಾಸು ಇಲಾಖೆ ಹೊಸ ನೀತಿ ಜಾರಿಗೆ ತರಬೇಕಾದರೆ, ಹೊಸದಾಗಿ ಯಾವುದೇ ಹುದ್ದೆ ಸೃಷ್ಟಿ ಮಾಡದೇ, ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಸೃಜಿಸಿರುವ ಹುದ್ದೆಗಲ್ಲಿಯೇ ಹೊಸ ನೀತಿ ಜಾರಿಗೊಳಿಸಬೇಕೆಂದು ಹೇಳಿದೆ. ಕಾನೂನು ಇಲಾಖೆ ಈ ನೀತಿ ಕುರಿತು ಅಗತ್ಯ ಕಾನೂನು ತಿದ್ದುಪಡಿ ಮಾಡುವ ಬಗ್ಗೆ ಅಗತ್ಯವಿದೆ ಎಂದಿದ್ದು, ಮಂಗಳ ಮುಖೀಯರಿಗೆ ಸಂಬಂಧಿಸಿದ ಕೆಲವು ಕಾನೂನುಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಅದನ್ನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಕಾನೂನು ಇಲಾಖೆ ಮುಂದಾಗಿದೆ.

ಲೈಂಗಿಕ ಅಲ್ಪ ಸಂಖ್ಯಾತರಿಗೆ ಸಮಾಜದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅಲ್ಲದೇ ಅವರನ್ನು ಕೀಳು ಮಟ್ಟದಿಂದ ನೋಡಲಾಗುತ್ತಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ ಆದೇಶದಂತೆ ಸಮಾಜದಲ್ಲಿ ಅವರೂ ಗೌರವಯುತವಾಗಿ ಬದುಕಲು. ಮತ್ತು ಸಮಾಜದ ಎಲ್ಲ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತಹ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.
– ಟಿ.ಬಿ. ಜಯಚಂದ್ರ, ಕಾನೂನು ಸಚಿವ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.