ಟಿಪ್ಪು ಜಯಂತಿ: ಮಧ್ಯಂತರ ತಡೆ ನೀಡಲು ಹೈಕೋರ್ಟ್‌ ನಕಾರ


Team Udayavani, Nov 10, 2018, 6:55 AM IST

high-court-karnataka.jpg

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ರಾಜ್ಯ ಹೈಕೋರ್ಟ್‌ ಶುಕ್ರವಾರ ಸ್ಪಷ್ಟವಾಗಿ ನಿರಾಕರಿಸಿದೆ.

ಈ ಸಂಬಂಧ ಕೊಡಗಿನ ಕೆ.ಪಿ ಮಂಜುನಾಥ್‌ ಸಲ್ಲಿಸಿದ್ದ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಇದೊಂದು ಸರ್ಕಾರದ ನೀತಿ-ನಿರ್ಧಾರದ ವಿಷಯ ಆಗಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು 2016 ಮತ್ತು 2017ರಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಹೀಗಿರುವಾಗ ಈಗ ವ್ಯತಿರಿಕ್ತ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿತು.

ಜಯಂತಿ ಆಚರಣೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ನ್ಯಾಯಪೀಠ, ಸರ್ಕಾರ ಸಲ್ಲಿಸಿದ ಆಕ್ಷೇಪಣೆಗಳನ್ನು ದಾಖಲಿಸಿಕೊಂಡು, ಈ ಆಕ್ಷೇಪಣೆಗಳ ಬಗ್ಗೆ ತಕರಾರು ಇದ್ದರೆ, ಮೂರು ವಾರಗಳಲ್ಲಿ ಸಲ್ಲಿಸಬಹುದು ಎಂದು ಅರ್ಜಿದಾರರ ಪರ ವಕೀಲರಿಗೆ ಹೇಳಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸರ್ಕಾರ 2015ರಿಂದ ಟಿಪ್ಪು ಜಯಂತಿ ಆಚರಿಸುತ್ತಿದೆ. ಇದಕ್ಕಾಗಿ ಪ್ರತಿ ವರ್ಷ ಸರ್ಕಾರದ ಖಜಾನೆಯಿಂದ 60 ಲಕ್ಷ ರೂ. ಖರ್ಚು ಮಾಡುತ್ತಿದೆ. ಈ ಹಿಂದೆ ಜಯಂತಿ ಆಚರಣೆ ವೇಳೆ ಕೊಡಗಿನಲ್ಲಿ ಹಿಂಸಾಚಾರ ನಡೆದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ವರ್ಷದ ಜಯಂತಿ ಆಚರಣೆಗೆ ಈಗಾಗಲೇ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲಿದೆ. ಹಾಗಾಗಿ, ಜಯಂತಿ ಆಚರಣೆಗೆ ತಡೆ ನೀಡಬೇಕು ಎಂದು ಕೋರಿದರು. “ಕಾನೂನು-ಸುವ್ಯವಸ್ಥೆ ಕಾಪಾಡು ಹೊಣೆ ರಾಜ್ಯ ಸರ್ಕಾರದ್ದು, ಅದು ಸರ್ಕಾರ ನೋಡಿಕೊಳ್ಳಲಿದೆ ಎಂದು ನ್ಯಾಯಪೀಠ ಉತ್ತರಿಸಿತು.ಇದಕ್ಕೆ, “ಟಿಪ್ಪು ಜಯಂತಿ ಆಚರಣೆಗೆ ಎರಡು ದಿನ ಇರುವಾಗ ತಡೆ ಕೋರಿ ಅರ್ಜಿ ಸಲ್ಲಿಸುತ್ತೀರಿ ಇದು ಎಷ್ಟು ಸರಿ. ಅಲ್ಲದೇ 2016ರಲ್ಲಿ ಟಿಪ್ಪು ಜಯಂತಿ ಪ್ರಶ್ನಿಸಿ ಇದೇ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು. ಆಗ ನ್ಯಾಯಾಲಯ ಸರ್ಕಾರಕ್ಕೆ  ಮನವಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಅರ್ಜಿದಾರರು ಸಲ್ಲಿಸಿದ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. 

ಅಲ್ಲದೇ 2016ರ ನ.8ರಂದು ವಿವರವಾದ 15 ಪುಟಗಳ ಆದೇಶ ನೀಡಿರುವ ಸರ್ಕಾರ, ಟಿಪ್ಪು ಜಯಂತಿ ಆಚರಿಸುತ್ತಿರುವ ಬಗ್ಗೆ ಕಾರಣಗಳ ಸಮೇತ ಸಮರ್ಥಿಸಿಕೊಂಡಿದೆ. ಅದು ಸರಿಯೋ, ತಪ್ಪೋ ಗೊತ್ತಿಲ್ಲ. ಆದರೆ, ನೀವು ಸರ್ಕಾರದ ಆ ಆದೇಶವನ್ನು ಪ್ರಶ್ನಿಸಿಲ್ಲ. ಅದರ ಬದಲಿಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೀರಿ ಎಂದು ಅರ್ಜಿದಾರ ಪರ ವಕೀಲರ ಕುರಿತು ನ್ಯಾಯಪೀಠ ಅಸಮಧಾನ ವ್ಯಕ್ತಪಡಿಸಿತು.

ಸರ್ಕಾರದ ಆಕ್ಷೇಪಣೆ ಏನು?: ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಆಕ್ಷೇಪಣೆಯಲ್ಲಿ  ಟಿಪ್ಪು ಜಯಂತಿ ಆಚರಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಅರ್ಜಿದಾರರ ಮನವಿ ಆಧರಿಸಿ 2016ರ ನ.8ರಂದು ಹೊರಡಿಸಿರುವ ಆದೇಶವನ್ನು ಉಲ್ಲೇಖೀಸಿರುವ ಸರ್ಕಾರ, ಅರ್ಜಿದಾರರು ಪ್ರಚಾರಕ್ಕಾಗಿ ಇಂತಹ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಮತ್ತು ಸೌರ್ಹಾದತೆ ನೆಲೆಸಬೇಕು ಎನ್ನುವ ಕಾರಣಕ್ಕೆ  ಕನಕದಾಸ ಜಯಂತಿ, ಗಾಂಧಿ ಜಯಂತಿ, ಬಸವ, ಸಂಗೋಳ್ಳಿ ರಾಯಣ್ಣ ಸೇರಿದಂತೆ ಹಲವು ಮಹನೀಯರ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಅಂತೆಯೇ ಟಿಪ್ಪು ಜಯಂತಿ ಆಚರಿಸಲಾಗುತ್ತಿದ್ದು, ಟಿಪ್ಪು ಅವರ ಬಗ್ಗೆ ಅರ್ಜಿದಾರರಿಗೆ ತಪ್ಪು ಕಲ್ಪನೆ ಇದೆ. ಅವರು ಇತಿಹಾಸ ತಿಳಿದುಕೊಂಡಿಲ್ಲ.

ಅದೇ ರೀತಿ ಕಳೆದ ವರ್ಷ ಟಿಪ್ಪು ಜಯಂತಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ, ಎಲ್ಲೂ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ. ಈಬಾರಿಯೂ ಕೊಡಗು ಸೇರಿದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ವ್ಯಾಪಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ, 584 ಕೋಮು ಸೌಹಾರ್ದತೆ ಕದಡಬಹದು ಎಂಬ ಶಂಕೆ ಇರುವ 500ಕ್ಕೂ ಹೆಚ್ಚು ವ್ಯಕ್ತಿಗಳನ್ನು  ಮುಂಜಾಗ್ರತಾ ಕ್ರಮವಾಗಿ  ವಶಕ್ಕೆ ಪಡೆಯಲಾಗುವುದು. ಜೊತೆಗೆ ಜಿಲ್ಲೆಯ ಚಕ್‌ಪೋಸ್ಟ್‌ಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಹಾಕಲಾಗಿದೆ ಎಂದು ಆಕ್ಷೇಪಣೆಯಲ್ಲಿ  ವಿವರಿಸಲಾಗಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.