ಶೋಷಣೆ ತಡೆಗೆ ರಾಜಕೀಯ ಪ್ರಾತಿನಿಧ್ಯ

Team Udayavani, Mar 26, 2017, 12:24 PM IST

siddu-sanmana.jpg

ಬೆಂಗಳೂರು: ಶೋಷಣೆಯಿಂದ ಮುಕ್ತರಾಗಲು ಮಹಿಳೆಯರು ಸುಶಿಕ್ಷಿತರಾಗುವುದರ ಜತೆಗೆ ಅವರಿಗೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯವೂ ಸಿಗುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಈ ನಿಟ್ಟಿನಲ್ಲಿ ಶಾಸನ ರಚನೆಯಲ್ಲೂ ಮಹಿಳೆಯರು ತೊಡಗಿಸಿಕೊಳ್ಳುವಂತಾಗಲು ಸಂಸತ್‌ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಕನಿಷ್ಠ ಶೇ.33ರಷ್ಟು ಮೀಸಲಾತಿ ಸಿಗುವಂತೆ ಸಂಸತ್ತಿನಲ್ಲಿ 1996ರಿಂದ ಬಾಕಿ ಇರುವ ಮಸೂದೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶನಿವಾರ ರಾಜ್ಯ ಸರಕಾರಿ ನೌಕರರ ಸಂಘ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸತ್‌ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ಅದು ಅಂಗೀಕಾರವಾಗುತ್ತಿಲ್ಲ ಎಂದ ಅವರು, ಮಹಿಳಾ ಮೀಸಲಾತಿಯನ್ನು ಪ್ರಬಲವಾಗಿ ವಿರೋಧಿಸಿರುವ ಯೋಗಿ ಆದಿತ್ಯನಾಥ್‌ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ ಎನ್ನುವ ಮೂಲಕ ಬಿಜೆಪಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಯಾವ ಸಮಾಜದಲ್ಲಿ ಮಹಿಳೆಯರು ಶೋಷಣೆಯಿಂದ ಮುಕ್ತರಾಗುವುದಿಲ್ಲವೋ ಅಂತಹ ಸಮಾಜವನ್ನು ನಾಗರಿಕ ಸಮಾಜ ಎನ್ನಲು ಸಾಧ್ಯವಿಲ್ಲ. ಹೆಚ್ಚುತ್ತಿರುವ ಶೋಷಣೆಯಿಂದ ಮಹಿಳೆ ಮುಕ್ತರಾಗಬೇಕಾದರೆ ಶಿಕ್ಷಣ ಪಡೆದುಕೊಳ್ಳಬೇಕು. ಅಪಮಾನಗಳಿಗೆ ಶಿಕ್ಷಣವೇ ಮದ್ದು. ಆದ್ದರಿಂದ ಶಿಕ್ಷಣವನ್ನು ಕಡೆಗಣಿಸಬಾರದು ಎಂದು ಮಹಿಳೆಯರಲ್ಲಿ ಮನವಿ ಮಾಡಿದರು.

ಪ್ರಸ್ತುತ ಮಹಿಳೆಯರೂ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದರಿಂದ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮಾನವಾಗಿ ಸ್ಪರ್ಧೆ ಒಡ್ಡುತ್ತಿ¨ªಾರೆ. ಆದರೆ, ಅದು ಸಾಲದು. ಎಲ್ಲಾ ಮಹಿಳೆಯರೂ ಸುಶಿಕ್ಷಿತರಾಗಬೇಕು. ಶಿಕ್ಷಣದ ಜತೆಗೆ ಸಮಾಜಕ್ಕೆ ಪೂರಕವಾಗುವ ವಿಷಯಗಳನ್ನೂ ಅರಿತುಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಬಿ.ಪಿ.ಮಂಜೇಗೌಡ ಮಾತನಾಡಿ, ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಏಳನೇ ವೇತನ ಆಯೋಗ ರಚಿಸುವ ಘೋಷಣೆ ಮಾಡಿರುವ ಮುಖ್ಯಮಂತ್ರಿ ಕಾರ್ಯ ಸ್ವಾಗತಾರ್ಹ. ಆದರೆ, ವೇತನ ಆಯೋಗ ಅಂತಿಮ ವರದಿ ನೀಡುವ ಮೊದಲೇ ನೌಕರರಿಗೆ ಶೇ.30ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಬೇಕು. ಖಾಲಿ ಇರುವ ಹು¨ªೆಗಳನ್ನು ಭರ್ತಿ ಮಾಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕ ಪ್ರೌಢಶಿಕ್ಷಣ ಪರೀûಾ ಮಂಡಳಿ ನಿರ್ದೇಶಕಿ ಯಶೋಧಾ ಬೋಪಣ್ಣ (ಆಡಳಿತ), ಜಗದಾಳೆ ವೈಜ್ಞಾನಿಕ ಸಂಶೋಧನಾ ಫೌಂಡೇಶನ್‌ನ ಉಪಾಧ್ಯಕ್ಷೆ ಪ್ರೇಮಾ ಮಂಜುನಾಥ್‌ (ಮಹಿಳಾ ಅಭಿವೃದ್ಧಿ), ಸಮಾಜ ಸೇವಕಿ ರಾಧಾ ದಾಸ್‌ (ಮಹಿಳಾ ಅಭಿವೃದ್ಧಿ), ಕೃಷಿಮತ್ತು ಸಮಾಜ ಸೇವಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರೇಮಾ ತಿಮ್ಮನಗೌಡರ್‌, ಛಾಯಾಚಿತ್ರ ಕ್ಷೇತ್ರದಲ್ಲಿ ಅಶ್ವಿ‌ನಿ ನಿತಿನ್‌ ಅವರನ್ನು ಸನ್ಮಾನಿಸಲಾಯಿತು. 

ಮೇಯರ್‌ ಜಿ.ಪದ್ಮಾವತಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ನೌಕರರ ಸಂಘದ ಗೌರವಾಧ್ಯಕ್ಷ ಎಚ್‌.ಕೆ.ರಾಮು, ಖಜಾಂಚಿ ಯೋಗಾನಂದ, ಪ್ರಧಾನ ಕಾರ್ಯದರ್ಶಿ ಮಾಲತೇಶ ವೈ.ಉಣ್ಣಿಗೆರೆ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.